More

    ವಿ.ಶ್ರೀನಿವಾಸಪ್ರಸಾದ್ ಎಲ್ಲ ಸಮುದಾಯಗಳ ನಾಯಕ

    ಹನೂರು: ಸಂಸದ ವಿ.ಶ್ರೀನಿವಾಸಪ್ರಸಾದ್ ಅವರು ದಲಿತರಿಗೆ ಮಾತ್ರ ನಾಯಕರಾಗಿರಲಿಲ್ಲ. ಎಲ್ಲ ಸಮುದಾಯದ ನಾಯಕರಾಗಿದ್ದರು ಎಂದು ಮಾಜಿ ಶಾಸಕ ಆರ್.ನರೇಂದ್ರ ಸ್ಮರಿಸಿದರು.


    ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ವಿ.ಶ್ರೀನಿವಾಸಪ್ರಸಾದ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಮಾತನಾಡಿದರು. ಶ್ರೀನಿವಾಸಪ್ರಸಾದ್ ಅವರು ವಿದ್ಯಾರ್ಥಿ ದೆಸೆಯಲ್ಲಿ ನ್ಯಾಯಕ್ಕಾಗಿ ಹೋರಾಟವನ್ನು ಮೈಗೂಡಿಸಿಕೊಳ್ಳುವುದರ ಮೂಲಕ ರಾಜಕೀಯಕ್ಕೆ ಬಂದವರು. ಸುದೀರ್ಘ 50 ವರ್ಷಗಳ ಕಾಲ ಸೇವೆ ಸಲ್ಲಿಸಿದ ಧೀಮಂತ ನಾಯಕ. ಇವರು ತತ್ವ, ಸಿದ್ಧಾಂತದೊಂದಿಗೆ ರಾಜಿ ಮಾಡಿಕೊಂಡವರಲ್ಲ. ಆದರೆ ರಾಜಕೀಯದ ಕೊನೆಯಲ್ಲಿ ಬಿಜೆಪಿ ಸೇರಿದ್ದರು. ಅದರೂ ಕಾಂಗ್ರೆಸ್‌ನ ಸಿದ್ಧಾಂತ ಮೈಗೂಡಿಸಿಕೊಂಡಿದ್ದರೇ ಹೊರತು ಬಿಜೆಪಿಯ ತತ್ವ, ಸಿದ್ಧಾಂತವನ್ನಲ್ಲ. ಈ ನಡುವೆ ಆರ್‌ಎಸ್‌ಎಸ್‌ನ ತತ್ವಗಳನ್ನು ಖಂಡಿಸುತ್ತಿದ್ದರು. ಜೀವನ ಪೂರ್ತಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಿದ್ಧಾಂತವನ್ನು ಮೈಗೂಡಿಸಿಕೊಳ್ಳುವುದರ ಮೂಲಕ ಸಂವಿಧಾನದ ಬಗ್ಗೆ ಅತೀವ ಕಾಳಜಿ ಹೊಂದಿದ್ದರು. ಬೌದ್ಧ ಧರ್ಮದ ಅನುಯಾಯಿಯಾಗಿದ್ದರು. ಎಲ್ಲ ವರ್ಗದ ಜನರನ್ನು ಪ್ರೀತಿ-ವಿಶ್ವಾಸದಿಂದ ಕಾಣುತ್ತಿದ್ದು, ಕಷ್ಟ-ಸುಖಗಳಿಗೆ ಸ್ಪಂದಿಸುತ್ತಿದ್ದರು. ಅವರ ಅಗಲಿಕೆ ಜಿಲ್ಲೆಗೆ ತುಂಬಲಾರದ ನಷ್ಟವಾಗಿದೆ ಎಂದರು.

    ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹನೂರಿನ ಮುಕುಂದವರ್ಮ, ರಾಮಾಪುರದ ಈಶ್ವರ್, ಜಿಪಂ ಮಾಜಿ ಉಪಾಧ್ಯಕ್ಷ ಬಸವರಾಜು, ತಾಪಂ ಮಾಜಿ ಅಧ್ಯಕ್ಷ ಮುರುಡೇಶ್ವರ ಸ್ವಾಮಿ, ಪಪಂ ಮಾಜಿ ಉಪಾಧ್ಯಕ್ಷ ಬಸವರಾಜು, ಪಪಂ ಸದಸ್ಯರಾದ ಗಿರೀಶ್, ಹರೀಶ್‌ಕುಮಾರ್, ಮುಖಂಡರಾದ ಮಣಿ, ಮಾದೇಶ್, ನಟರಾಜು, ರಾಜು, ಬೂದುಬಾಳು ಮಹದೇವ, ಗುಂಡಾಪುರದ ಮಾದೇಶ್, ಹನೂರಿನ ಮಂಜೇಶ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts