More

    ಬಿಜೆಪಿ ಸಂಸದ, ಹಿರಿಯ ನಾಯಕ ವಿ. ಶ್ರೀನಿವಾಸ್‌ ಪ್ರಸಾದ್‌ ನಿಧನ!

    ಮೈಸೂರು: ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಹಿರಿಯ ನಾಯಕ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ ನಾಯಕರಾಗಿದ್ದ ವಿ. ಶ್ರೀನಿವಾಸ್ ಪ್ರಸಾದ್ (Srinivasa Prasad) ಇಂದು ಕೊನೆಯುಸಿರೆಳೆದಿದ್ದಾರೆ.

    ಇದನ್ನೂ ಓದಿ: ಶೂಟಿಂಗ್​ನಲ್ಲಿ ಭಾರತಕ್ಕೆ21ನೇ ಒಲಿಂಪಿಕ್ಸ್​ ಕೋಟಾ; ಪ್ಯಾರಿಸ್​ಗೆ ದಾಖಲೆಯ ಶೂಟರ್​ಗಳು

    ವಯೋಸಹಜ ಖಾಯಿಲೆಯಿಂದ ಬಳಲುತ್ತಿದ ಶ್ರೀನಿವಾಸ್ ಅವರು ಕಳೆದ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ತಡರಾತ್ರಿ ಚಿಕಿತ್ಸೆ ಫಲಿಸದೆ, ಹೃದಯಾಘಾತದಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

    ಉಸಿರಾಟ ಸಮಸ್ಯೆ ಸೇರಿದಂತೆ ಇತರೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸಂಸದರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ನಸುಕಿನ ಜಾವ 1.27ರ ಸುಮಾರಿಗೆ ಹೃದಯಾಘಾತ ಉಂಟಾಗಿ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

    ಶ್ರೀನಿವಾಸ್​ ಪ್ರಸಾದ್​ ಅವರು ಮೈಸೂರಿನ ಅಶೋಕಪುರಂನಲ್ಲಿ ಆಗಸ್ಟ್ 6, 1947 ರಂದು ಜನಿಸಿದರು. ಅವರ ಸುದೀರ್ಘ ರಾಜಕೀಯ ಪ್ರಯಾಣವು ಅನೇಕ ಸಾಧನೆಗಳಿಂದ ಕೂಡಿದೆ. ಚಾಮರಾಜನಗರ ಕ್ಷೇತ್ರವನ್ನು 7 ಅವಧಿಗೆ ಸಂಸದರಾಗಿ ಪ್ರತಿನಿಧಿಸಿದ್ದರು ಮತ್ತು ಎರಡು ಬಾರಿ ನಂಜನಗೂಡು ಕ್ಷೇತ್ರದಿಂದ ಶಾಸಕರಾಗಿದ್ದರು. ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಮತ್ತು ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಇಲಾಖೆ ಸಚಿವ ಸೇರಿದಂತೆ ಪ್ರಮುಖ ಸಚಿವ ಖಾತೆಗಳನ್ನು ಹೊಂದಿದ್ದರು.

    ಬೌಧ್ದ ಧರ್ಮದ ವಿಧಿ ವಿಧಾನದಂತೆ ನಾಳೆ ಅಂತ್ಯಕ್ರಿಯೆ
    ಈ ಕುರಿತು ಶ್ರೀನಿವಾಸ್ ಪ್ರಸಾದ್ ಪುತ್ರಿ ಪ್ರತಿಮಾ ಪ್ರಸಾದ್‌  ಮಾಹಿತಿ ನೀಡಿದ್ದು,  ಬೌಧ್ದ ಧರ್ಮದ ವಿಧಿ ವಿಧಾನದಂತೆ ನಾಳೆ ಅಂತ್ಯಕ್ರಿಯೆ ನಡೆಯಲಿದೆ. ಅವರು ಬೌದ್ದ ಧರ್ಮ ಅನುಯಾಯಿಯಾಗಿದ್ರು. ಇಂದು ಮಧ್ಯಾಹ್ನ 1 ಗಂಟೆವರೆಗೆ ಜಯಲಕ್ಷ್ಮಿ ಪುರಂ ನಿವಾಸದಲ್ಲಿ  ಅಂತಿಮ ದರ್ಶನಕ್ಕೆ ವ್ಯವಸ್ಥೆ‌ ಮಾಡಲಾಗಿದೆ. ಬಳಿಕ ಅಶೋಕಪುರಂನ ಎನ್.ಟಿ.ಎಂ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ನಾಳೆ ಅಶೋಕ್ ಪುರಂನಲ್ಲಿ ಪಾರ್ಥೀವ ಶರೀರದ ಮೆರವಣಿಗೆ ಮಾಡಲಾಗುತ್ತದೆ. ಬಳಿಕ ಸಿಲ್ಕ್ ಫ್ಯಾಕ್ಟರಿ ಸರ್ಕಲ್ ಬಳಿ ಡಾ.ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಪ್ರತಿಮಾ ಪ್ರಸಾದ್‌ ತಿಳಿಸಿದ್ದಾರೆ.

    ಸಿಎಂ ಸಂತಾಪ
    ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ದಲಿತ ದಮನಿತರ ಪರವಾದ ದಿಟ್ಟ ದನಿ ಮಾಜಿ ಸಚಿವ ಮತ್ತು ಹಿರಿಯ ಮುತ್ಸದ್ದಿ ನಾಯಕ ಶ್ರೀನಿವಾಸಪ್ರಸಾದ್ ಅವರ ಸಾವು ನನ್ನನ್ನು ಆಘಾತಕ್ಕೀಡು ಮಾಡಿದೆ. ಅನ್ಯಾಯ-ಅಸಮಾನತೆಯ ವಿರುದ್ಧದ ಹೋರಾಟವನ್ನೇ ಬದುಕಾಗಿಸಿಕೊಂಡಿದ್ದ ಅವರ ಅಗಲಿಕೆ ರಾಜ್ಯದ ಸಾಮಾಜಿಕ ನ್ಯಾಯದ ಪರವಾದ ರಾಜಕೀಯ ಹೋರಾಟಕ್ಕೆ ದೊಡ್ಡ ಹಿನ್ನಡೆಯಾಗಿದೆ ಎಂದು ಹೇಳಿದ್ದಾರೆ.

    ದೇವೇಗೌಡ ಸಂತಾಪ
    ಬಿಜೆಪಿಯ ಹಿರಿಯ ಮುಖಂಡ, ಚಾಮರಾಜನಗರ ಕ್ಷೇತ್ರದ ಸಂಸದ ವಿ. ಶ್ರೀನಿವಾಸ ಪ್ರಸಾದ್ ಅವರ ನಿಧನಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಮಾಜಿ ಕೇಂದ್ರ ಸಚಿವರು ಹಾಗೂ ಚಾಮರಾಜನಗರದ ಲೋಕಸಭಾ ಕ್ಷೇತ್ರದ ಸದಸ್ಯರಾದ ಶ್ರೀನಿವಾಸ್ ಪ್ರಸಾದ್ ಅವರು ನಿಧನರಾದ ವಾರ್ತೆ ಕೇಳಿ ಬಹಳ ದುಃಖವಾಗಿದೆ. ಅವರ ಅಗಲಿಕೆ ರಾಜಕೀಯಕ್ಕೆ‌ ತುಂಬಲಾರದ ನಷ್ಟ. ಅವರ ಅಗಲಿಕೆ ಭರಿಸುವ ಶಕ್ತಿಯನ್ನು ಕುಟುಂಬವರಿಗೆ ಮತ್ತು ಅಭಿಮಾನಿಗಳಿಗೆ ಆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

    ತಾಳಿ ಕಟ್ಟುವ ವೇಳೆ ಕಣ್ಣೀರಿಟ್ಟ ಆರತಿ ಸಿಂಗ್! ಕೃಷ್ಣ-ಕಾಶ್ಮೀರ ದಂಪತಿಗೆ ಹಿಗ್ಗಾಮುಗ್ಗಾ ಜಾಡಿಸಿದ ನೆಟ್ಟಿಗರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts