More

    ಮಕ್ಕಳಿಗೂ ಕರೊನಾ ಲಸಿಕೆ ; ವ್ಯಾಕ್ಸಿನ್ ಅಭಿಯಾನಕ್ಕೆ ಸಚಿವ ಜೆ.ಸಿ.ಮಾಧುಸ್ವಾಮಿ ಚಾಲನೆ

    ತುಮಕೂರು: ಜಿಲ್ಲೆಯಲ್ಲಿ ಮಕ್ಕಳಿಗೂ ಕರೊನಾ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ಸಿಕ್ಕಿದ್ದು, ಸೋಮವಾರ ಚಿಕ್ಕನಾಯಕನಹಳ್ಳಿ ತಾಲೂಕು ಜೆ.ಸಿ.ಪುರ ಪ್ರೌಢಶಾಲೆಯಲ್ಲಿ ಸಚಿವ ಜೆ.ಸಿ.ಮಾಧುಸ್ವಾಮಿ ಅಭಿಯಾನಕ್ಕೆ ಚಾಲನೆ ನೀಡಿದರು.

    15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ವಿತರಿಸಲು ಜಿಲ್ಲಾ ಕೇಂದ್ರದ ಎಂಪ್ರೆಸ್ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಶಾಸಕ ಜಿ.ಬಿ.ಜ್ಯೋತಿಗಣೇಶ್ ಚಾಲನೆ ನೀಡಿದರು. ಸೋಂಕು ಹರಡುವಿಕೆ ತಡೆಗಟ್ಟಲು 15ರಿಂದ 18 ವರ್ಷದೊಳಗಿನ ಮಕ್ಕಳಿಗೂ ಲಸಿಕೆ ನೀಡಲಾಗುತ್ತಿದೆ. ಜಿಲ್ಲೆಯ 1.25 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಹೇಳಿದರು.

    ಮಕ್ಕಳಿಗೆ ಲಸಿಕೆ ನೀಡಲು ಅನುವಾಗುವಂತೆ ಎಲ್ಲ ಶಾಲಾ-ಕಾಲೇಜುಗಳಲ್ಲಿ ಕರೊನಾ ಲಸಿಕೆ ನೀಡಲು ಅಧಿಕಾರಿಗಳು ಯೋಜನೆ ರೂಪಿಸಿದ್ದು, ಪಾಲಕರು ಯಾವುದೇ ಆತಂಕಕ್ಕೆ ಒಳಗಾಗದೇ ತಮ್ಮ ಮಕ್ಕಳಿಗೆ ಲಸಿಕೆ ಕೊಡಿಸಬೇಕು ಎಂದು ಮನವಿ ಮಾಡಿದರು.
    ಜಗತ್ತಿನಲ್ಲಿ ಕರೊನಾ, ಒಮಿಕ್ರಾನ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಕರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಲಸಿಕೆ ಪಡೆಯುವುದು ಅತ್ಯವಶ್ಯಕವಾಗಿದೆ, ಮೊದಲನೇ ಮತ್ತು ಎರಡನೇ ಡೋಸ್ ಲಸಿಕೆ ನಿಗದಿತ ಅವಧಿಯಲ್ಲಿ ನೀಡಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು. ಇತ್ತೀಚೆಗೆ ಮಕ್ಕಳಲ್ಲಿ ಹೆಚ್ಚಾಗಿ ಸೋಂಕು ಹರಡುತ್ತಿದ್ದು, ಕರೊನಾದಿಂದ ಮಕ್ಕಳನ್ನು ರಕ್ಷಿಸಬೇಕು. ತಜ್ಞರ ಅಂದಾಜಿನಂತೆ ಮಾರ್ಚ್‌ನಲ್ಲಿ ಸೋಂಕು ಹೆಚ್ಚಳವಾಗುವ ಸಂಭವವಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಮಕ್ಕಳಿಗೆ ಲಸಿಕೆ ಕೊಡಿಸಬೇಕು ಎಂದರು.

    ಜಿಲ್ಲೆಯಲ್ಲಿ ಮೊದಲ ಹಾಗೂ ಎರಡನೇ ಡೋಸ್ ಕೋವಿಡ್ ಲಸಿಕಾಕರಣ ಶೇ.98 ಪೂರ್ಣಗೊಳಿಸಲಾಗಿದ್ದು, ಕೇಂದ್ರ ಸರ್ಕಾರ ನೀಡಿರುವ ಸೂಚನೆ ಪಾಲಿಸಲಾಗುತ್ತಿದೆ.
    ಡಾ.ನಾಗೇಂದ್ರಪ್ಪ ಡಿಎಚ್‌ಒ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts