

ನವದೆಹಲಿ: ಜಗತ್ತಿನಾದ್ಯಂತ ಒಮಿಕ್ರಾನ್ ಹಾವಳಿ ಹೆಚ್ಚುತ್ತಿರುವ ನಡುವೆ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದ್ದಕ್ಕಿದ್ದಂತೆ ಲೈವ್ ಬಂದು ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ.
ಒಮಿಕ್ರಾನ್ ಹಿನ್ನೆಲೆಯಲ್ಲಿ ಭಾರತ ಒಂದಷ್ಟು ಕ್ರಮಗಳನ್ನು ಕೈಗೊಂಡಿದ್ದು, ಆ ನಿಟ್ಟಿನಲ್ಲಿ ಪ್ರಮುಖ ನಿರ್ಣಯ ಕೈಗೊಂಡಿದ್ದೇವೆ. ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ ಹಾಗೂ ಕ್ರಿಸ್ಮಸ್ನ ಈ ಶುಭದಿನವೇ ಆ ನಿರ್ಣಯವನ್ನು ಘೋಷಿಸಲು ಸೂಕ್ತ ದಿನ ಎಂದಿರುವ ಮೋದಿ, ಕರೊನಾ ನಿಯಂತ್ರಣ ಹಾಗೂ ತಡೆ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೈಗೊಂಡಿರುವ ನಿರ್ಣಯವನ್ನು ಘೋಷಿಸಿದರು.
18 ವರ್ಷ ಮೇಲ್ಪಟ್ಟವರಿಗೆ ಈಗಾಗಲೇ ಲಸಿಕೆ ನೀಡಲಾಗಿದೆ, ನೀಡಲಾಗುತ್ತಿದೆ. ಇದೀಗ 15ರಿಂದ 18ರ ವಯೋಮಾನದವರಿಗೂ ಲಸಿಕೆ ನೀಡಲು ನಿರ್ಧರಿಸಲಾಗಿದ್ದು, ಜ. 3ರಿಂದಲೇ ಆ ಲಸಿಕೀಕರಣ ಆರಂಭವಾಗಲಿದೆ. ಇದರಿಂದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಸುರಕ್ಷೆ ಸಿಗುವ ಜತೆಗೆ ಅವರ ಪಾಲಕರ ಆತಂಕವನ್ನೂ ಕಡಿಮೆ ಮಾಡಬಹುದು ಎಂದು ಪ್ರಧಾನಿ ತಿಳಿಸಿದ್ದಾರೆ.