More

    ವಚನ ಸಾಹಿತ್ಯ ವಿಶ್ವದಲ್ಲೇ ಶ್ರೇಷ್ಠ

    ಮದ್ದೂರು: ವಚನ ಸಾಹಿತ್ಯ ವಿಶ್ವದಲ್ಲೇ ಶ್ರೇಷ್ಠ. ಸಮಾಜದ ಓರೆ ಕೋರೆಗಳನ್ನು ತಿದ್ದಿ ತೀಡಿ ಮನದಟ್ಟು ಮಾಡಿಕೊಡುವ ಸಾಹಿತ್ಯ ಎಂದು ಡಿ.ದೇವರಾಜ ಅರಸು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ.ತ್ರಿವೇಣಿ ಅಭಿಪ್ರಾಯಪಟ್ಟರು.

    ತಾಲೂಕಿನ ಕೊಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಕನ್ನಡ ವಿಭಾಗ ಹಾಗೂ ಐಕ್ಯುಎಸಿ ಸಹಯೋಗದಿಂದ ಏರ್ಪಡಿಸಲಾಗಿದ್ದ ವಚನ ಸಾಹಿತ್ಯ ಮತ್ತು ವೈಚಾರಿಕತೆ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ವಚನಕಾರರು ಆಯಾಯ ಕಾಲಘಟ್ಟದಲ್ಲಿ ವೈಚಾರಿಕತೆ ಬಗ್ಗೆ ತಮ್ಮ ವಚನಗಳ ಮೂಲಕ ಜನರನ್ನು ಎಚ್ಚರಿಸುವ ಕೆಲಸ ಮಾಡಿದ್ದಾರೆ. ಆದರೂ ಇಂದಿಗೂ ನಮ್ಮಲ್ಲಿ ಮೌಢ್ಯಗಳು ಜೀವಂತವಾಗಿರುವುದು ದುರದುಷ್ಟಕರ ಎಂದು ವಿಷಾದಿಸಿದ ಅವರು. ವಿದ್ಯಾರ್ಥಿಗಳು ವಚನ ಸಾಹಿತ್ಯ ಅಧ್ಯಯನ ಮಾಡಿ ಜನತೆಯ ಮೌಢ್ಯಗಳನ್ನು ಹೋಗಲಾಡಿಸಲು ಮುಂದಾಗಬೇಕೆಂದು ಸಲಹೆ ನೀಡಿದರು.

    ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಅಣ್ಣಯ್ಯ ತೈಲೂರು ಮಾತನಾಡಿ, ವೈಚಾರಿಕತೆ ಮತ್ತು ವೈಜ್ಞಾನಿಕ ಮನೋಭಾವಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ವಿದ್ಯಾರ್ಥಿಗಳು ಬಸವಣ್ಣ, ಕುವೆಂಪು ಅವರ ಸಾಹಿತ್ಯವನ್ನು ಅರಿತು ಉತ್ತಮ ಸಮಾಜದ ಬೆಳವಣಿಗೆಗೆ ಮುಂದಾಗಬೇಕಿದೆ ಎಂದರು.

    ಸಮಾರಂಭದಲ್ಲಿ ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ಭಾರತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಐಕ್ಯುಎಸಿ ಸಂಚಾಲಕ ಡಾ.ಉಮೇಶ್, ಕನ್ನಡ ವಿಭಾಗದ ಡಾ.ಚಂದ್ರು ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts