ಹಾವೇರಿ: ವಿಶ್ವದಲ್ಲಿ ಬೇರೆ ಧರ್ಮಗಳು ಹುಟ್ಟುವ ಮೊದಲೇ ಇದ್ದಿದ್ದೇ ಹಿಂದೂ ಧರ್ಮ. ಜಗತ್ತಿನ ಸಿದ್ಧಾಂತ ತತ್ವಗಳಿಗೆ ಮೂಲವೇ ಹಿಂದೂ ಧರ್ಮವಾಗಿದೆ. ಭಾರತದಲ್ಲಿ ವಾಸಿಸುವ ಪ್ರತಿಯೊಬ್ಬ ಹಿಂದೂ ಹಿಂದೂನೇ, ಮುಸ್ಲಿಮರೂ ಕೂಡ ಹಿಂದೂಗಳೇ, ಅಖಂಡ ಭಾರತ ಇದು. ಸನಾತನ ಧರ್ಮ ಹಿಂದೂವಿನ ಭಾಗವಾಗಿದೆ. ಹಿಂದೂಗೆ ಯಾವುದೇ ಬಾರ್ಡರ್ ಇಲ್ಲ ಎಂದು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳು ಹೇಳಿದ್ದಾರೆ.
ಹಾವೇರಿ ನಗರದಲ್ಲಿ ಈ ಕುರಿತು ಮಾತನಾಡಿದ ಶ್ರೀಗಳು, ಜಗತ್ತಿನ ಸಿದ್ಧಾಂತ ತತ್ವಗಳಿಗೆ ಮೂಲ ಹಿಂದೂ ಆಗಿದೆ. ಶ್ರೀಲಂಕಾ ಅಫ್ಘಾನಿಸ್ತಾನದ ಎಲ್ಲರೂ ಹಿಂದೂಗಳೇ. ದಯೆಯ ಬಗ್ಗೆಯೇ ಸಾಕ್ರೆಟಿಸ್, ತುಕಾರಾಮ್, ನಾಮದೇವ್, ಶಂಕರರು, ಬಸವಣ್ಣ ಎಲ್ಲರೂ ಇದನ್ನ ಹೇಳಿದರು. ಆಚರಣೆ ಮನೇಲಿ ಇರಬೇಕು. ದೇಶ ಸಮುದಾಯ ಅಂತ ಬಂದಾಗ ನಾವೆಲ್ಲಾ ಹಿಂದೂಗಳು ಎಂದಿದ್ದಾರೆ.
ಇದನ್ನೂ ಓದಿ: ಸರಿಯಾದ ಸಮಯಕ್ಕೆ ಸಾಲ ಕಟ್ಟದ ಖ್ಯಾತ ನಟ; CBIನಿಂದ ಕೋಟ್ಯಂತರ ರೂ. ಮೌಲ್ಯದ ಆಸ್ತಿ ಜಪ್ತಿ
ಹಿಂದೂ ಅಂದರೆ ಶುದ್ಧವಾದ ಜೀವನ ಪದ್ದತಿ ಅಂತ ಸುಪ್ರೀಂ ಕೋರ್ಟ್ ಹೇಳಿದೆ. ಕಲ್ಲು ನಾಗರಕ್ಕೆ ಹಾಲೆರೆಯಬೇಡಿ, ಅನಾಥ ಮಕ್ಕಳಿಗೆ ಹಾಲು ಕೊಡಿ ಅಂತಾರೆ. ನೀವು ಮಾಡಿಕೊಂಡು ಹೋಗಿ ಬೇಡ ಅಂದವರು ಯಾರು. ಹಾಲು ಕೊಡೋ ತಾಯಿ ಹತ್ಯೆ ಮಾಡ್ತಾ ಇದಾರೆ. ಎಷ್ಟು ಜನ ಸ್ವಾಮಿಗಳು ಗೋ ಹತ್ಯೆ ವಿರೋಧಿಸಿದ್ದೀರಿ. ಅನಾಥ ಮಕ್ಕಳ ಮೇಲೆ ಕರುಣೆ ಇದ್ದರೆ ಹಾಲು ಕೊಡಿ ಎಂದು ಹೇಳಿದ್ದಾರೆ.
ಲಿಂಗಾಯತ ಇರಲಿ ವೀರಶೈವ ಇರಲಿ ಒಂದಾಗಿ ಹೋಗಬೇಕು. ಕೆಲವರ ಜಾತಿ ಸರ್ಟಿಪಿಕೇಟ್ ಗಳಲ್ಲಿ ಹಿಂದೂ ಭೌದ್ಧ ಅಂತ ಇದೆ. ಹಿಂದೂ ಜೈನ ಅಂತ ಇದೆ. ಅದೇ ತರ ಹಿಂದೂ ಲಿಂಗಾಯತ, ವೀರಶೈವ ಹಾಗೂ ಲಿಂಗಾಯತರು ಒಂದಾಗಿ ಮೊದಲು. ಒಂದಾಗದೇ ಹೇಗೆ ಪ್ರತ್ಯೇಕ ಧರ್ಮ ಮಾಡಬೇಕು. ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಮಾನ್ಯತೆ ಯಾಕೆ ಸಿಕ್ಕಿಲ್ಲ. ಕೆಲ ಸ್ವಾಮಿಗಳು ನಾವು ಹಿಂದೂಗಳಲ್ಲ ಅಂತ ಹೇಳ್ತಾರಲ್ಲಾ?. ಹಾಗೆ ಹೇಳುವ ಸ್ವಾಮಿಗಳು ಮೊದಲು ತಮ್ಮ ಸರ್ಟಿಫಿಕೇಟ್ ತೋರಿಸಬೇಕು ಎಂದು ವಚನಾನಂದ ಶ್ರೀಗಳು ಆಗ್ರಹಿಸಿದ್ದಾರೆ.