ಗ್ರಾಪಂ ಕಚೇರಿ ಮುಂದೆ ಮಾರಾಮಾರಿ, 50 ಹೆಚ್ಚು ಜನರಿಗೆ ಗಂಭೀರ ಗಾಯ, 20 ವಾಹನ ಜಖಂ

ಯಾದಗಿರಿ: ವಡಿಗೇರಾ ತಾಲೂಕಿನ ಉಳ್ಳೆಸೂಗುರು ಗ್ರಾಮ ಪಂಚಾಯಿತಿ ಕಚೇರಿ ಬಳಿ ಶುಕ್ರವಾರ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, 50ಕ್ಕೂ ಹೆಚ್ಚು ಜನ ಗಂಭೀರ ಗಾಯಗೊಂಡಿದ್ದಾರೆ. ಕಾರುಗಳು ಸೇರಿದಂತೆ 20ಕ್ಕೂ ಹೆಚ್ಚು ವಾಹನ ಜಖಂಗೊಂಡಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಶುಕ್ರವಾರ ಉಳ್ಳೆಸೂಗುರು ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಶುರುವಾಗುತ್ತಿದ್ದಂತೆ ಹೊರಗಡೆ ಜಮಾಯಿಸಿದ್ದ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗುಸುಗುಸು ಆರಂಭಗೊಂಡಿತು. ಇತ್ತ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗುತ್ತಿದ್ದಂತೆ ಕಾರ್ಯಕರ್ತರು … Continue reading ಗ್ರಾಪಂ ಕಚೇರಿ ಮುಂದೆ ಮಾರಾಮಾರಿ, 50 ಹೆಚ್ಚು ಜನರಿಗೆ ಗಂಭೀರ ಗಾಯ, 20 ವಾಹನ ಜಖಂ