ವಡೋದರಾ ಸೇತುವೆ ಕುಸಿತ; ಸಾವಿನ ಸಂಖ್ಯೆ 15ಕ್ಕೆ ಏರಿಕೆ, ನಾಪತ್ತೆಯಾದವರಿಗಾಗಿ ಮುಂದುವರಿದ ಶೋಧ| vadodara bridge

Bridge collapses in Gujarat
Published on

ಆನಂದ್ ಮತ್ತು ವಡೋದರಾ ಜಿಲ್ಲೆಗಳನ್ನು ಸಂಪರ್ಕಿಸುವ ನಾಲ್ಕು ದಶಕಗಳಷ್ಟು ಹಳೆಯದಾದ ಮಹಿಸಾಗರ್ ಸೇತುವೆಯ ಒಂದು ಭಾಗವು ಬುಧವಾರ (09) ಬೆಳಗ್ಗೆ ವಡೋದರಾದ ಪದ್ರಾ ಪಟ್ಟಣದ ಸಮೀಪವಿರುವ ಗಂಭೀರಾ ಗ್ರಾಮದ ಬಳಿ ಕುಸಿದ ನಂತರ ಹಲವಾರು ವಾಹನಗಳು ಮಹಿಸಾಗರ್ ನದಿಗೆ ಬಿದ್ದವು.

ವಡೋದರಾ : ಗುಜರಾತ್‌ನ ವಡೋದರಾ ಜಿಲ್ಲೆಯ ಮಹಿಸಾಗರ್ ನದಿಗೆ ಅಡ್ಡಲಾಗಿ ಸೇತುವೆ ಕುಸಿದು ಬಿದ್ದ ಘಟನೆಯಲ್ಲಿ ಇನ್ನೂ ನಾಲ್ಕು ಶವಗಳು ಪತ್ತೆಯಾಗಿದ್ದು, ಸಾವಿನ ಸಂಖ್ಯೆ 15 ಕ್ಕೆ ಏರಿದೆ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೇತುವೆ ಕುಸಿದ ಬಳಿಕ ಕನಿಷ್ಠ ಐದು ವಾಹನಗಳು ನದಿಗೆ ಬಿದ್ದಿವೆ ಎಂದು ಪ್ರಾಥಮಿಕ ಮಾಹಿತಿ ಸೂಚಿಸುತ್ತದೆ ಎಂದು ಗುಜರಾತ್ ಸರ್ಕಾರದ ವಕ್ತಾರ ಮತ್ತು ಸಚಿವ ರಿಷಿಕೇಶ್ ಪಟೇಲ್ ಹೇಳಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡಗಳು ನದಿಯಲ್ಲಿ ಶೋಧ ನಡೆಸುತ್ತಿದ್ದು, ಅವಶೇಷಗಳಲ್ಲಿ ಸಿಲುಕಿರುವ ಯಾರಾದರೂ ಬದುಕುಳಿದಿದ್ದಾರೆಯೇ ಎಂದು ಕಾರ್ಯಾಚರಣೆ ಮುಂದುವರೆಸಿದ್ದಾರೆ.

(ಏಜೆನ್ಸೀಸ್)

ಸೇತುವೆಯ ಮೇಲಿನ ಸಂಚಾರದ ಪ್ರಮಾಣವನ್ನು ಪರಿಗಣಿಸಿ, ಮುಖ್ಯಮಂತ್ರಿಗಳು ಮೂರು ತಿಂಗಳ ಹಿಂದಷ್ಟೇ 212 ಕೋಟಿ ರೂ.ಗಳ ವೆಚ್ಚದಲ್ಲಿ ಹೊಸ ಸೇತುವೆಗೆ ಅನುಮೋದನೆ ನೀಡಿದ್ದರು. ಹೊಸ ಸೇತುವೆಯ ವಿನ್ಯಾಸ ಮತ್ತು ಟೆಂಡರ್ ಕಾರ್ಯ ಈಗಾಗಲೇ ಪ್ರಾರಂಭವಾಗಿತ್ತು. ಈ ಘಟನೆಯ ನಂತರ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ತಕ್ಷಣವೇ ಮುಖ್ಯ ಇಂಜಿನಿಯರ್, ಸೇತುವೆ ವಿನ್ಯಾಸ ತಂಡ ಮತ್ತು ತಜ್ಞರನ್ನು ಸ್ಥಳಕ್ಕೆ ರವಾನಿಸಿ ವಿವರವಾದ ವರದಿಯನ್ನು ನೀಡುವಂತೆ ಆದೇಶಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net