ವಿಂಗ್ ಹೆಸರಲ್ಲಿ ಅಮಾಯಕ ಹಿಂದು ಹುಡುಗರನ್ನು ತಡೆದರೆ ಪರಿಣಾಮ ನೆಟ್ಟಗಿರಲ್ಲ: ವಜ್ರದೇಹಿ ಸ್ವಾಮೀಜಿ

blank

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ‘ಆ್ಯಂಟಿ ಕಮ್ಯುನಲ್ ವಿಂಗ್’ ಎಂಬ ನೂತನ ಪೊಲೀಸ್ ಪಡೆಯನ್ನು ಸ್ಥಾಪಿಸಲಿರುವ ಕುರಿತು ಇಂದು ಗೃಹಸಚಿವರು ಘೋಷಣೆ ಮಾಡಿದ ಬೆನ್ನಿಗೇ ಸ್ವಾಮೀಜಿಯೊಬ್ಬರು ಪ್ರತಿಕ್ರಿಯೆ ನೀಡಿದ್ದಾರೆ. ಮಾತ್ರವಲ್ಲ, ವಿಂಗ್ ಹೆಸರಿನಲ್ಲಿ ಹಿಂದು ಹುಡುಗರಿಗೆ ತೊಂದರೆ ಕೊಡುವಂತಿಲ್ಲ ಎಂದೂ ತಾಕೀತು ಮಾಡಿದ್ದಾರೆ.

ಇದನ್ನೂ ಓದಿ: ಪತಿಗಿಂತ ಪತ್ನಿಗೇ ಹೆಚ್ಚು ಸಂಪಾದನೆ; ಜೀವನಾಂಶ ನೀಡಲಾಗದು ಎಂಬುದನ್ನು ಎತ್ತಿ ಹಿಡಿದ ಕೋರ್ಟ್

ಮಂಗಳೂರಿನಲ್ಲಿ ಗುರುಪುರದ ಶ್ರೀವಜ್ರದೇಹಿ ರಾಜಶೇಖರಾನಂದ ಸ್ವಾಮೀಜಿ ಅವರು ‘ಆ್ಯಂಟಿ ಕಮ್ಯುನಲ್ ವಿಂಗ್’ ಕುರಿತು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಸರ್ಕಾರ ದ್ವಂದ್ವ ನಿಲುವಿನಿಂದ ಸಮಾಜದಲ್ಲಿ ಕಂದಕ ಸೃಷ್ಟಿಸಬಾರದು. ತಂಗಿಯೊಬ್ಬಳು ಮತಾಂಧನ ಕೈಗೆ ಸಿಲುಕಿದಲ್ಲಿ ಅದನ್ನು ನೋಡಿಕೊಂಡು ಇರುವಂತಿಲ್ಲ ಎಂದಿರುವ ಸ್ವಾಮೀಜಿ, ವಿಂಗ್ ಹೆಸರಲ್ಲಿ ಅಮಾಯಕ ಹಿಂದು ಹುಡುಗರನ್ನು ತಡೆದರೆ ಪರಿಣಾಮ ನೆಟ್ಟಗಿರಲ್ಲ. ಕಾನೂನು ಪ್ರಕಾರವೇ ನಾವು ಉತ್ತರ ನೀಡಬೇಕಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಯಾವುದೇ ಕ್ಷಣದಲ್ಲೂ ಬಿಬಿಎಂಪಿ ಚುನಾವಣೆ ಆಗಬಹುದು: ಸಚಿವ ರಾಮಲಿಂಗಾರೆಡ್ಡಿ

ದಕ್ಷಿಣಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್​ಗಿರಿ ಹೆಚ್ಚಾಗಿದೆ. ಇದನ್ನು ನಾವು ತಡೆಯದಿದ್ದರೆ ಇಲಾಖೆ ಹಾಗೂ ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತದೆ. ಹೀಗಾಗಿ ನೈತಿಕ ಪೊಲೀಸ್​ಗಿರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಇದಕ್ಕಾಗಿ ಮಂಗಳೂರು ಕಮಿಷನರೇಟ್​ ವ್ಯಾಪ್ತಿಯಲ್ಲಿ ‘ಆ್ಯಂಟಿ ಕಮ್ಯುನಲ್ ವಿಂಗ್’ ಪ್ರಾರಂಭ ಮಾಡುತ್ತಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇಂದು ಮಂಗಳೂರಿನಲ್ಲಿ ಹೇಳಿಕೆ ನೀಡಿದ್ದರು.

ಒಬ್ಬ ಮಗನ ಚಿಕಿತ್ಸೆಗಾಗಿ ಇನ್ನೊಬ್ಬ ಮಗನನ್ನು ಮಾರಲೆತ್ನಿಸಿದ ತಂದೆ; ಪತಿ ವಿರುದ್ಧ ಪತ್ನಿಯ ದೂರು

ಬೆಂಗಳೂರು-ಮೈಸೂರು ದಶಪಥದಲ್ಲಿ ಭೀಕರ ಅಪಘಾತ: 2 ಸಲ ಪಲ್ಟಿಯಾದ ಕಾರು; ಐವರಿಗೆ ಗಾಯ, ಇಬ್ಬರ ಪರಿಸ್ಥಿತಿ ಗಂಭೀರ

Share This Article

ಕ್ಯಾರೆಟ್​ ಬರ್ಫಿಗೆ ಫಿದಾ ಆಗದವರೇ ಇಲ್ಲ; ಮನೆಯಲ್ಲೇ ಮಾಡಲು ಇಲ್ಲಿದೆ ಸಿಂಪಲ್​ ವಿಧಾನ | Recipe

ಕ್ಯಾರೆಟ್​​ ಹಲ್ವಾ ಎಲ್ಲರಿಗೂ ಇಷ್ಟ, ಅದಕ್ಕಾಗಿಯೇ ಕ್ಯಾರೆಟ್ ಹಲ್ವಾವನ್ನು ಎಲ್ಲಾ ಋತುವಿನಲ್ಲೂ ಹಲವಾರು ಬಾರಿ ತಯಾರಿಸಿ…

ಆರೋಗ್ಯಕರ ಹೃದಯಕ್ಕೆ ಮೊಟ್ಟೆ ಎಷ್ಟು ಸಹಕಾರಿ ಗೊತ್ತಾ?; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಮೊಟ್ಟೆಗಳು ಪ್ರೋಟೀನ್‌ನ ಉತ್ತಮ ಮೂಲವಾಗಿದ್ದು, ವಿಟಮಿನ್ ಬಿ, ಫೋಲೇಟ್, ಕೊಬ್ಬಿನಲ್ಲಿ ಕರಗುವ ಜೀವಸತ್ವಗಳು (ಎ, ಡಿ,…

ಕಣ್ಣಿನಪೊರೆ ಸಮಸ್ಯೆಗೆ ಪರಿಹಾರ ಏನೆಂದು ಆಲೋಚಿಸುತ್ತಿದ್ದೀರಾ?; ಇಲ್ಲಿದೆ ಸೂಕ್ತ ಮನೆಮದ್ದಿನ ಮಾಹಿತಿ | Health Tips

ಪ್ರಸ್ತುತ ಕಾರ್ಯನಿರತ ಜೀವನ ಮತ್ತು ಕಳಪೆ ಜೀವನಶೈಲಿಯಿಂದಾಗಿ ಅನೇಕ ಸಮಸ್ಯೆಗಳು ಉದ್ಭವಿಸುತ್ತಿವೆ. ಅದರಲ್ಲಿನ ಪ್ರಮುಖ ಸಮಸ್ಯೆಗಳಲ್ಲಿ…