More

    ವಾಹನ ಸವಾರರಿಗೆ ಶುಭ ಸುದ್ದಿ; ಡಿ.31ರವರೆಗೂ ಲೈಸೆನ್ಸ್​, ದಾಖಲೆಗಳ ಮಾನ್ಯತಾ ಅವಧಿ ವಿಸ್ತರಣೆ

    ನವದೆಹಲಿ: ಕರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ವಾಹನ ಚಾಲನಾ ಪರವಾನಗಿ ಹಾಗೂ ಇತರ ದಾಖಲೆಗಳ ಮಾನ್ಯತಾ ಅವಧಿಯನ್ನು ಡಿ.31ರ ವರೆಗೆ ವಿಸ್ತರಿಸಲಾಗಿದೆ.

    ಈ ಮೊದಲು ಸೆಪ್ಟಂಬರ್​ ಅಂತ್ಯದವರೆಗೆ ಈ ಅವಧಿಯನ್ನು ಸೀಮಿತಗೊಳಿಸಲಾಗಿತ್ತು. ಇದೀಗ ಮತ್ತೆ ಮೂರು ತಿಂಗಳ ಅವಧಿಗೆ ಮುಂದುವರಿಸಲಾಗಿದೆ.
    ಮಾರ್ಚ್​ ನಂತರ ಸತತ ಮೂರನೇ ಬಾರಿಗೆ ಈ ಅವಧಿಯನ್ನು ವಿಸ್ತರಣೆ ಮಾಡಿ ಕೇಂದ್ರ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

    ಇದನ್ನೂ ಓದಿ; ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್​ ಜಾಂಗ್​ ಉನ್ ಸಾವು? ಇನ್ನು ಸಹೋದರಿಯದ್ದೇ ಆಧಿಪತ್ಯ? 

    ಮೋಟಾರು ವಾಹನ ಕಾಯ್ದೆ ಪ್ರಕಾರ ವಾಹನಗಳ ಫಿಟ್​ನೆಸ್​, ಪರವಾನಗಿ (ಎಲ್ಲ ಮಾದರಿ ವಾಹನಗಳು), ಚಾಲನಾ ಪರವಾನಗಿ, ನೋಂದಣಿ ದಾಖಲೆ ಮೊದಲಾವುಗಳನ್ನು ಡಿಸೆಂಬರ್​ 31ರವರೆಗೆ ಊರ್ಜಿತದಲ್ಲಿವೆ ಎಂದೇ ಪರಿಗಣಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

    ಕರೊನಾ ಸಂಕಷ್ಟ ಇನ್ನು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಹೆದ್ದಾರಿ ಸಚಿವಾಲಯ ತಿಳಿಸಿದೆ.

    ಗಣೇಶ ಹಬ್ಬದಂದು ಬಿಡುಗಡೆಯಾಯ್ತು ನಿತ್ಯಾನಂದನ ಕೈಲಾಸದ ಕರೆನ್ಸಿ; ಭಾರತೀಯ ರೂಪಾಯಿಗೆಷ್ಟು ಮೌಲ್ಯ ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts