ಸಿನಿಮಾ

ಸತೀಶ ಜಾರಕಿಹೊಳಿಗೆ ಸಿಎಂ ಸ್ಥಾನ ಕೊಡಿ; ವಾಲ್ಮೀಕಿ ನಾಯಕ ಮಹಾಸಭಾ ಜಿಲ್ಲಾಧ್ಯಕ್ಷ ರಮೇಶ ಆನವಟ್ಟಿ ಒತ್ತಾಯ

ಹಾವೇರಿ: ರಾಜ್ಯದ ಅಹಿಂದ ನಾಯಕ, ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ ನಡೆಯುವ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿ ಕಾಂಗ್ರೆಸ್ ಹೈಕಮಾಂಡ್ ಘೋಷಿಸಬೇಕು ಎಂದು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಜಿಲ್ಲಾಧ್ಯಕ್ಷ ರಮೇಶ ಆನವಟ್ಟಿ ಒತ್ತಾಯಿಸಿದರು.
ಇಲ್ಲಿನ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸತೀಶ ಜಾರಕಿಹೊಳಿ ಅವರು ರಾಜ್ಯಾದ್ಯಂತ ಸಂಚರಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದಾರೆ. ರಾಜ್ಯದ 3ನೇ ದೊಡ್ಡ ಶಾಸಕರ ಸಂಖ್ಯೆಯನ್ನು ಹೊಂದಿರುವ ನಾಯಕ ಸಮಾಜ 18 ಜನ ಶಾಸಕರನ್ನು ಆಯ್ಕೆ ಮಾಡಿದೆ. ಕಾಂಗ್ರೆಸ್‌ನಲ್ಲಿ 15 ಶಾಸಕರು ಆಯ್ಕೆಯಾಗಿದ್ದಾರೆ. ಸತೀಶ ಜಾರಕಿಹೊಳಿ ಅತ್ಯಂತ ಪ್ರಭಾವಿ ರಾಜಕಾರಣಿಯಾಗಿದ್ದು, ಉತ್ತರ ಕರ್ನಾಟಕ ಭಾಗದ ಜಿಲ್ಲೆಯಲ್ಲಿ ಪ್ರಚಾರ ಮಾಡಿ ಅಹಿಂದ ಮತಗಳನ್ನು ಕ್ರೂಢಿಕರಿಸಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು.
ವಾಲ್ಮೀಕಿ ನಾಯಕ ಸಮಾಜ ಕಾಂಗ್ರೆಸ್ ಪಕ್ಷಕ್ಕೆ ಸಾಕಷ್ಟು ಕೊಡುಗೆ ನೀಡಿದೆ. ಇಲ್ಲಿಯವರೆಗೂ ಸಿಎಂ, ಡಿಸಿಎಂ ಹುದ್ದೆ ನೀಡಿಲ್ಲ, 165 ಕ್ಷೇತ್ರಗಳಲ್ಲಿ ನಮ್ಮ ಸಮಾಜ ನಿರ್ಣಾಯಕ ಸ್ಥಾನದಲ್ಲಿದೆ. ಹೀಗಾಗಿ, ಸತೀಶ ಜಾರಕಿಹೊಳಿ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ನಾಗರಾಜ ಬಡಮ್ಮನವರ, ಅಶೋಕ ಹರನಗಿರಿ, ಮಲ್ಲಿಕಾರ್ಜನ ಬುದಗಟ್ಟಿ, ಶ್ರೀಧರ ದೊಡ್ಡಮನಿ, ಮಾಲತೇಶ ರಿತ್ತಿ, ಇತರರಿದ್ದರು.

Latest Posts

ಲೈಫ್‌ಸ್ಟೈಲ್