ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅವ್ಯವಹಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಜನ ಸೇವೆ ಮತ್ತು ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಸಚಿವ ಬಿ.ನಾಗೇಂದ್ರ ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಗುರವಾರ ಘೋಷಿಸಿದ್ದಾರೆ.
ಇದನ್ನೂ ಓದಿ: ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಎಸ್‌ಐಟಿ ಕಸ್ಟಡಿ ಅವಧಿ ವಿಸ್ತರಿಸಿದ ಕೋರ್ಟ್! ಎಷ್ಟು ದಿನ?
ವಿಧಾನಸೌಧದಲ್ಲಿ ಸಂಜೆ ಸುದ್ದಿಗೋಷ್ಠಿಯಲ್ಲಿ ನಡೆಸಿದ ಅವರು, ಸ್ವಇಚ್ಛೆಯಿಂದ ರಾಜೀನಾಮೆ ನೀಡುವುದಾಗಿ ಘೋಷಿಸಿದರು. ಸಂಜೆ 7.30ಕ್ಕೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ರಾಜೀನಾಮೆ ನೀಡುತ್ತೇನೆ. ನನ್ನ ರಾಜೀನಾಮೆಗೆ ಯಾರ ಒತ್ತಡವೂ ಇಲ್ಲ. ಯಾರಿಗೂ ಮುಜುಗರ ಆಗಬಾರದೆಂದು ನಿರ್ಧರಿಸಿದ್ದೇನೆ. ಸಿಎಂ, ಡಿಕೆಶಿ, ಖರ್ಗೆಯವರಿಗೆ ಮುಜುಗರ ಆಗಬಾರದೆಂದು ಈ ತೀರ್ಮಾನ ಮಾಡಿದ್ದೇನೆ. ಈ ಪ್ರಕರಣ ಕುರಿತು ಎಸ್‌ಐಟಿ ತನಿಖೆ ನಡೆಯುತ್ತಿದೆ. ನಿಷ್ಪಕ್ಷಪಾತವಾಗಿ ಆಗಬೇಕು. ನಾನು ನಿರ್ದೋಷಿಯಾಗಿ ಮತ್ತೆ ಮಂತ್ರಿಯಾಗುತ್ತೇನೆ ಎಂದರು.
ನಿಗಮದಲ್ಲಿ ಆಗಿರುವ ಅವ್ಯವಹಾರದಂತೆ ಎಂಡಿ, ಅಧಿಕಾರಿ ವಶಕ್ಕೆ ತೆಗೆದುಕೊಂಡು ತನಿಖೆ ಮಾಡುತ್ತಿದ್ದಾರೆ. ಯಾರ ಒತ್ತಡವೂ ಇಲ್ಲ. ಮುಖ್ಯಮಂತ್ರಿ ಜತೆಗೂ ಚರ್ಚೆ ಮಾಡಿದ್ದೇನೆ. ನನ್ನ ಆತ್ಮಸಾಕ್ಷಿಯಂತೆ, ಸ್ವ ಇಚ್ಚೆಯಿಂದ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಊಹಾಪೋಹಗಳಿಗೆ ಉತ್ತರ ಕೊಡಲ್ಲ. ರಾಜಕೀಯ ಎಂದ ಮೇಲೆ ಆರೋಪ ಇದ್ದಿದ್ದೆ. ಬಿಜೆಪಿಯವರದ್ದು ಹಗರಣ ಇದೆ. ನೇರವಾಗಿ ಆರೋಪಗಳಿವೆ. ಅವುಗಳನ್ನು ಸಿಎಂ ಗಂಭೀರವಾಗಿ ತೆಗೆದುಕೊಳ್ಳುವರು. ಕೋಟಾ, ಕಾರಜೋಳ ಅವರ ಮೇಲೂ ಆರೋಪ ಇದೆ ಎಂದು ತಿಳಿಸಿದರು.
ರಾಜೀನಾಮೆ ನೀಡುವುದನ್ನು ಖಚಿತ ಪಡಿಸಿದ ಡಿಕೆಶಿ: ಈ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಸ್ವಯಂ ಪ್ರೇರಿತರಾಗಿ ರಾಜೀನಾಮೆ ಸಲ್ಲಿಸುತ್ತಾರೆ ಎಂದು ಹೇಳಿಕೆ ನೀಡಿದ್ದರು. ಅವರ ಹೇಳಿಕೆ ಬೆನ್ನಲ್ಲೇ ನಾಗೇಂದ್ರ ಅವರು ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಪತ್ರ ಸಲ್ಲಿಕೆ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸಚಿವ ನಾಗೇಂದ್ರ ಆಪ್ತರ ಬಂಧನ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂ. ವರ್ಗಾವಣೆ ಪ್ರಕರಣದ ತನಿಖೆ ಸಂಬಂಧ ಕೇಂದ್ರ ತನಿಖಾ ದಳ (ಸಿಬಿಐ) ರಂಗಪ್ರವೇಶ ಮಾಡಿತ್ತು. ಕ್ಷಿಪ್ರ ತನಿಖೆ ಮುಂದುವರಿಸಿರುವ ಎಸ್‌ಐಟಿ ಅಧಿಕಾರಿಗಳು ಸಚಿವ ನಾಗೇಂದ್ರ ಆಪ್ತರು ಎನ್ನಲಾದ ನಾಗರಾಜು ನೆಕ್ಕಂಟಿ ಹಾಗೂ ನಾಗೇಶ್ವರ್ ರಾವ್ ಎಂಬುವವರನ್ನು ಬುಧವಾರ ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ ಐದಕ್ಕೇರಿತ್ತು.
ವಿಧಾನಪರಿಷತ್ ಚುನಾವಣೆ: ಸಿ.ಟಿ ರವಿ ಸೇರಿದಂತೆ 11 ಅಭ್ಯರ್ಥಿಗಳು ಅವಿರೋಧ ಆಯ್ಕೆ