More

    ವಾಲ್ಮೀಕಿ ಚಿಂತನೆಗಳ ಪಾಲನೆ ಅವಶ್ಯ

    ತಿ.ನರಸೀಪುರ: ಮಹರ್ಷಿ ವಾಲ್ಮೀಕಿ ಅವರು ಲೇಖನಿ ಹಿಡಿದು ರಾಮಾಯಣ ರಚಿಸಿದರು. ನಾವು ಅವರಂತೆ ಪೆನ್ ಹಿಡಿದು ಅವರ ಚಿಂತನೆಗಳನ್ನು ಆಳವಡಿಸಿಕೊಂಡು ಸಾಧನೆಗಳನ್ನು ಮಾಡಬೇಕು ಎಂದು ಪ್ರೇರಣಾ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಂಸ್ಥಾಪಕಿ ಮೊಳಕಾಲ್ಮೂರು ಜಯಲಕ್ಷ್ಮೀ ನಾಯಕ್ ಹೇಳಿದರು.

    ತಾಲೂಕು ಆಡಳಿತ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ತಾಲೂಕು ನಾಯಕರ ಸಂಘದ ಸಹಯೋಗದಲ್ಲಿ ಪಟ್ಟಣದ ವಿದ್ಯೋದಯ ಕಾಲೇಜು ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಡಾ.ಅಂಬೇಡ್ಕರ್ ಅವರು ನಮಗೆ ಸಂವಿಧಾನದ ಮೂಲಕ ಮೀಸಲಾತಿ ಕಲ್ಪಿಸಿಕೊಡದಿದ್ದರೆ ನಮ್ಮ ಸಮಾಜ ಇಂದು ಕಾಡಿನಲ್ಲಿ ವಾಸಿಸಬೇಕಾಗಿತ್ತು. ಇದನ್ನು ಅರಿತು ಎಸ್ಸಿ, ಎಸ್ಟಿ ಹಾಗೂ ಒಬಿಸಿ ವರ್ಗದವರು ಒಗ್ಗಟ್ಟಾಗುವ ಮೂಲಕ ರಾಜಕೀಯದಲ್ಲಿ ಗುರ್ತಿಸಿಕೊಂಡು ಉನ್ನತ ಸ್ಥಾನಗಳನ್ನು ಅಲಂಕರಿಸಬೇಕು ಎಂದು ಸಲಹೆ ನೀಡಿದರು.

    ತಹಸೀಲ್ದಾರ್ ಸುರೇಶಾಚಾರ್ ಮಾತನಾಡಿದರು. ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಶ್ರೀ ಗುಂಜಾ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಮುಂಭಾಗ ವಾಲ್ಮೀಕಿ ಅವರ ಭಾವಚಿತ್ರ ಮೆರವಣಿಗೆಗೆ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯ ಅಧ್ಯಕ್ಷ ಹಾಗೂ ತಹಸೀಲ್ದಾರ್ ಟಿ.ಜಿ.ಸುರೇಶಾಚಾರ್ ಚಾಲನೆ ನೀಡಿದರು. ವಿವಿಧ ಕಲಾ ತಂಡಗಳು ಮೆರವಣಿಗೆ ಮೆರುಗು ನೀಡಿತು.

    ಇದೇ ವೇಳೆ ವಿವಿಧ ಕ್ಷೇತ್ರಗಳ ಸಾಧಕರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ, ಕಾಂಗ್ರೆಸ್ ಯುವ ಮುಖಂಡ ಸುನೀಲ್ ಬೋಸ್, ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ಕೆ ವಜ್ರೇಗೌಡ, ಜಿ.ಪಂ ಮಾಜಿ ಸದಸ್ಯರಾದ ಸುಧಾಮಣಿ, ಹೊನ್ನ ನಾಯಕ, ಮಂಜುನಾಥ್, ಕೆ.ಸಿ.ಲೋಕೇಶ್ ನಾಯಕ್, ರೇಣುಕಾ, ತಾಲೂಕು ನಾಯಕರ ಸಂಘದ ಅಧ್ಯಕ್ಷ ಚಿಕ್ಕಣ್ಣ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ವಿ.ಶಿವಶಂಕರ್‌ಮೂರ್ತಿ, ತಾ.ಪಂ ಇಒ ಸಿ.ಕೃಷ್ಣ, ಬಿಇಒ ಜಿ.ಶೋಭಾ, ಪರಿಶಿಷ್ಟ ವರ್ಗ ಕಲ್ಯಾಣ ಇಲಾಖೆಯ ಅಧಿಕಾರಿ ಕೋಮಲಾ, ಮುಖಂಡರಾದ ಮನ್ಸೂರ್ ಅಲಿ, ಕೆ.ಎನ್.ಪ್ರಭುಸ್ವಾಮಿ, ಅಂಬೇಡ್ಕರ್ ಅಭಿವೃದ್ಧಿ ಸಂಘದ ಅಧ್ಯಕ್ಷ ಕರುಹಟ್ಟಿ ಮಹದೇವಯ್ಯ, ಬಾಬು ಜಗಜೀವನರಾಮ್ ಸಂಘದ ಅಧ್ಯಕ್ಷ ಪುಟ್ಟಯ್ಯ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts