More

    ಅ.9ರಂದು ನಗರದಲ್ಲಿ ವಾಲ್ಮೀಕಿ ಜಯಂತ್ಯುತ್ಸವ ಆಚರಣೆ: ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಎಡಿಸಿ ಡಾ.ಎಚ್.ಎಲ್.ನಾಗರಾಜು ಸೂಚನೆ

    ಮಂಡ್ಯ: ಭಾರತೀಯ ಆದರ್ಶ ಮತ್ತು ಸಂಸ್ಕೃತಿಗೆ ಹೆಸರಾದ ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ಅ.9ರಂದು ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ತಿಳಿಸಿದರು.
    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂದು ಜಿಲ್ಲಾಧಿಕಾರಿ ಕಚೇರಿ ಆವರಣದಿಂದ  ವಾಲ್ಮೀಕಿ ಅವರ ಅಲಂಕೃತ ಭಾವಚಿತ್ರದ ಜತೆಗೆ ವಿವಿಧ ಕಲಾತಂಡಗಳ ಮೆರವಣಿಗೆ ಹೊರಟು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಮಾವೇಶಗೊಳ್ಳಲಿದೆ ಎಂದರು.
    ವೇದಿಕೆ ಕಾರ್ಯಕ್ರಮಕ್ಕೆ ಶಿಷ್ಟಾಚಾರದ ಪ್ರಕಾರ ಗಣ್ಯರನ್ನು ಆಹ್ವಾನಿಸಲಾಗುವುದು. ಮುಖ್ಯ ಭಾಷಣಕಾರರಾಗಿ ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಯ ದಂತ ವೈದ್ಯೆ ಡಾ.ಸುಗುಣ ಅವರನ್ನು ಆಹ್ವಾನಿಸಲಾಗುವುದು. ಬ್ಯಾನರ್, ಸಾಂಸ್ಕೃತಿಕ ಕಾರ್ಯಕ್ರಮ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ, ಕುಡಿಯುವ ನೀರು ಹಾಗೂ ಉಪಹಾರ ವ್ಯವಸ್ಥೆಯ ಬಗ್ಗೆ ಕ್ರಮ ವಹಿಸುವಂತೆ ಸೂಚನೆ ನೀಡಿದರು.
    ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ.ರಂಗೇಗೌಡ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಶ್ರೀನಿವಾಸ್, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಮಂಜುನಾಥ್, ಜಿಲ್ಲಾ ವಾರ್ತಾಧಿಕಾರಿ ಎಸ್.ಎಚ್.ನಿರ್ಮಲಾ, ವೆಂಕಟೇಶ್, ಟಿ.ಸಿ.ಪುಟ್ಟಸ್ವಾಮಿ ನಾಯಕ, ಚಂದ್ರನಾಯಕ, ಕೃಷ್ಣನಾಯಕ ಇತರರಿದ್ದರು. 

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts