

ಸುಳ್ಯ: ನಾಡ ಹಬ್ಬಗಳ ದಿನಾಚರಣೆ ಸಮಿತಿ ಆಶ್ರಯದಲ್ಲಿ ವಾಲ್ಮೀಕಿ ಜಯಂತಿ ಆಚರಣೆ ಸುಳ್ಯ ತಾಲೂಕು ಕಚೇರಿಯಲ್ಲಿ ಗುರುವಾರ ನಡೆಯಿತು. ಸುಳ್ಯ ಗ್ರೇಡ್ 2 ತಹಸೀಲ್ದಾರ್ ಮಂಜುನಾಥ್ ಅಧ್ಯಕ್ಷತೆ ವಹಿಸಿ, ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿದರು.
ಸುಳ್ಯ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಚಂದ್ರಶೇಖರ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಹರ್ಷಿ ವಾಲ್ಮೀಕಿಯ ಪೂರ್ವಾಶ್ರಮ ಹಾಗೂ ನಂತರದ ಜೀವನ ಚರಿತ್ರೆಯ ಬಗ್ಗೆ ವಿವರಿಸಿದರು.
ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕಿ ಉಮಾದೇವಿ, ಎಡಿಎಲ್ ಆರ್.ಜಿನೇಶ್ ಕುಮಾರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷೆ ಧನಲಕ್ಷ್ಮೀ ಕುದ್ಪಾಜೆ, ಮಾಜಿ ಅಧ್ಯಕ್ಷ ಸಿಂಗಾರ ಶೆಟ್ಟಿ, ಸುಳ್ಯ ರೇಂಜರ್ ಮಂಜುನಾಥ್, ಗ್ರಾಮೀಣ ಮತ್ತು ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ಎ.ಇ.ಇ. ಚೈತ್ರ, ಉಪತಹಸೀಲ್ದಾರ್ ಚಂದ್ರಕಾಂತ್ ಎಂ.ಆರ್., ಆಹಾರ ನಿರೀಕ್ಷಕಿ ಅನಿತಾ ದಯಾನಂದ ಡಿ.ಟಿ. ಮೊದಲಾದವರಿದ್ದರು.