More

    ವಾಲ್ಮೀಕಿ ಜಯಂತಿ ಸಿದ್ಧತೆಗೆ ಎಡಿಸಿ ಸೂಚನೆ

    ಚಿಕ್ಕಮಗಳೂರು: ಜಿಲ್ಲಾಡಳಿತದಿಂದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅಕ್ಟೋಬರ್ 9ರಂದು ನಗರದ ಕುವೆಂಪು ಕಲಾಮಂದಿರದಲ್ಲಿ ಆಚರಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳುವಂತೆ ಎಡಿಸಿ ಬಿ.ಆರ್.ರೂಪಾ ಅಧಿಕಾರಿಗಳಿಗೆ ಸೂಚಿಸಿದರು.
    ಡಿಸಿ ಕಚೇರಿ ಸಭಾಂಗಣದಲ್ಲಿ ಗುರುವಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಹಳೇ ತಾಲೂಕು ಕಚೇರಿ ಆವರಣದಿಂದ ಕುವೆಂಪು ಕಲಾಮಂದಿರದವರೆಗೆ ಕಲಾ ತಂಡಗಳೊಂದಿಗೆ ಮಹರ್ಷಿ ವಾಲ್ಮೀಕಿ ಭಾವಚಿತ್ರ ಮೆರವಣಿಗೆ ನಂತರ ವೇದಿಕೆ ಕಾರ್ಯಕ್ರಮ ನಡೆಯಲಿದ್ದು ವಿಶೇಷ ಉಪನ್ಯಾಸ, ವಿವಿಧ ಯೋಜನೆಗಳ ಸೌಲಭ್ಯ ವಿತರಣೆ, ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ, ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ನೆರವೇರಲಿದೆ ಎಂದರು.
    ಜಿಲ್ಲಾಮಟ್ಟದ ಎಲ್ಲ ಸರ್ಕಾರಿ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ಕಾರ್ಯಕ್ರಮ ಸಲಗೊಳಿಸಲು ಎಲ್ಲ ಇಲಾಖೆಗಳು ಸಮನ್ವಯ ಮತ್ತು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಸಭೆಗೆ ಹಾಜರಾಗದ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸುವಂತೆ ಸೂಚಿಸಿದರು.
    ಶಿಕ್ಷಣ ಇಲಾಖೆ ಪ್ರೌಢಶಾಲಾ ಹಾಗೂ ಪಿಯು ವಿದ್ಯಾರ್ಥಿಗಳಿಗೆ ಮಹರ್ಷಿ ವಾಲ್ಮೀಕಿ ಜೀವನ ಕುರಿತಾದ ಚಿಕ್ಕಮಗಳೂರು ತಾಲೂಕುಮಟ್ಟದ ಚರ್ಚಾ ಸ್ಪರ್ಧೆಯನ್ನು ಲೀಡ್ ಬ್ಯಾಂಕ್ ಪ್ರಾಯೋಜಕತ್ವದಲ್ಲಿ ನಡೆಸುವಂತೆ ಸೂಚಿಸಿದರು. ಜಿಲ್ಲಾ ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಸಮನ್ವಯಾಧಿಕಾರಿ ಭಾಗೀರಥಿ, ವಾಲ್ಮೀಕಿ ಸಮುದಾಯದ ಮುಖಂಡರು ಹಾಗೂ ವಿವಿಧ ಅಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts