More

    ಅ.28ರಂದು ಮಹರ್ಷಿ ವಾಲ್ಮೀಕಿ ಜಯಂತಿ: ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಅಧ್ಯಕ್ಷತೆಯಲ್ಲಿ ಸಭೆ

    ಮಂಡ್ಯ: ಶ್ರೀರಾಮಾಯಣ ದರ್ಶನಂ ಗ್ರಂಥ ಬರೆದ ಮಹರ್ಷಿ ವಾಲ್ಮೀಕಿ ಅವರ ಜಯಂತ್ಯುತ್ಸವವನ್ನು ಅ.28ರಂದು ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಸೂಚಿಸಿದರು.

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸಲಿದ್ದಾರೆ ಎಂದರು.

    ಇದಕ್ಕೂ ಮುನ್ನ ಬೆಳಗ್ಗೆ 9.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮೆರವಣಿಗೆಗೆ ಜಿಲ್ಲಾಧಿಕಾರಿ ಡಾ.ಕುಮಾರ ಚಾಲನೆ ನೀಡಲಿದ್ದಾರೆ. ಮೆರವಣಿಗೆಯೂ ಪೂರ್ಣಕುಂಭ, ಡೊಳ್ಳುಕುಣಿತ ಹಾಗೂ ವೀರಗಾಸೆ ಕಲಾ ತಂಡಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿಯಿಂದ ಹೊರಟು ಮೈಸೂರು-ಬೆಂಗಳೂರು ಮಾರ್ಗವಾಗಿ ಜಯಚಾಮರಾಜೇಂದ್ರ ವೃತ್ತ, ಆರ್.ಪಿ ರಸ್ತೆ, ನೂರಡಿ ರಸ್ತೆ ಮಾರ್ಗವಾಗಿ ಜಿಪಂ ಕಚೇರಿಯಲ್ಲಿ ಮುಕ್ತಾಯವಾಗಲಿದೆ ಎಂದು ವಿವರಿಸಿದರು. ಎಸ್‌ಎಸ್‌ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದಿರುವ ಪರಿಶಿಷ್ಟ ಪಂಗಡ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲು ತೀರ್ಮಾನಿಸಲಾಯಿತು. ಇದಕ್ಕೆ ಪೂರಕವಾಗಿ ಮಾಹಿತಿ ನೀಡುವಂತೆ ಡಿಡಿಪಿಐ, ಡಿಡಿಪಿಯುಗೆ ಸೂಚಿಸಿದರು. ಅಂತೆಯೇ ಸಮುದಾಯದ ವಿದ್ಯಾರ್ಥಿಗಳು ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದರೆ, ಸಮಾಜ ಕಲ್ಯಾಣ ಇಲಾಖೆಯಿಂದ ಸವಲತ್ತು ಒದಗಿಸಲಾಗುವುದು ಎಂದು ಭರವಸೆ ನೀಡಿದರು.

    ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಸಿದ್ದಲಿಂಗೇಶ್, ಜಿಪಂ ಉಪಕಾರ್ಯದರ್ಶಿ(ಆಡಳಿತ) ಎಂ.ಬಾಬು, ನಗರಸಭೆ ಆಯುಕ್ತ ಮಂಜುನಾಥ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜಮೂರ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉದಯ್‌ಕುಮಾರ್, ಜಿಲ್ಲಾ ವಾಲ್ಮೀಕಿ ನಾಯಕರ ಸಂಘದ ಜಿಲ್ಲಾಧ್ಯಕ್ಷ ಚಂದ್ರನಾಯಕ, ಉಪಾಧ್ಯಕ್ಷ ಟಿ.ಸಿ.ಪುಟ್ಟಸ್ವಾಮಿ ನಾಯಕ, ಸಹ ಕಾರ್ಯದರ್ಶಿ ಮಮತಾ, ಸಂಘಟನಾ ಕಾರ್ಯದರ್ಶಿ ಕೃಷ್ಣ, ಕೆ.ರಾಮು, ವೆಂಕಟೇಶ್, ಜಗದೀಶ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts