More

    ವಾಲ್ಮೀಕಿ ಸಮಾಜದ ಬಹಿಷ್ಕಾರ ನಿರ್ಧಾರ ವಾಪಸ್

    ಶಿವಮೊಗ್ಗ: ರಾಜ್ಯ ಸರ್ಕಾರ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಿಸಿದ್ದು 40 ವರ್ಷಗಳಿಂದ ನಡೆಯುತ್ತಿದ್ದ ಹೋರಾಟಕ್ಕೆ ಜಯ ಸಂದಿದೆ. ಹಾಗಾಗಿ ಮಹರ್ಷಿ ವಾಲ್ಮೀಕಿ ಜಯಂತಿ ಬಹಿಷ್ಕಾರ ನಿರ್ಧಾರ ಹಿಂತೆಗೆದುಕೊಂಡಿದ್ದು, ಅ.9ರಂದು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ವಾಲ್ಮೀಕಿ ಅಭಿವೃದ್ಧಿ ನಿಗಮದ ನಿರ್ದೇಶಕ ಬಿ.ಎಸ್.ನಾಗರಾಜ್ ತಿಳಿಸಿದರು.
    ಕೇಂದ್ರ ಸರ್ಕಾರ ಪರಿಶಿಷ್ಟ ಪಂಗಡಕ್ಕೆ ಶೇ.7.5ರಷ್ಟು ಮೀಸಲಾತಿ ನೀಡಿದೆ. ಅಷ್ಟೇ ಪ್ರಮಾಣದ ಮೀಸಲಾತಿಯನ್ನು ರಾಜ್ಯ ಸರ್ಕಾರವೂ ಜಾರಿಗೊಳಿಸುವಂತೆ ಹೋರಾಟ ಮಾಡಲಾಗಿತ್ತು. ಆದರೆ ರಾಜ್ಯ ಸರ್ಕಾರ ತನ್ನ ಇತಿಮಿತಿಯಲ್ಲಿ ಶೇ.7ಕ್ಕೇರಿಸಿದೆ. ಈ ಮೂಲಕ ಬಿ.ಎಸ್.ಯಡಿಯೂರಪ್ಪ ಸಿಎಂ ಆಗಿದ್ದಾಗ ಭರವಸೆ ನೀಡಿದಂತೆ ರಾಜ್ಯ ಸರ್ಕಾರ ನಡೆದುಕೊಂಡಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
    ತಾಂತ್ರಿಕ ಕಾರಣದಿಂದಾಗಿ ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಳ ಮಾಡಲು ವಿಳಂಬವಾಗಿತ್ತು. ಇದನ್ನು ಸರಿಪಡಿಸಿ ನ್ಯಾ. ನಾಗಮೋಹನ್ ದಾಸ್ ಸಮಿತಿ ಶಿಫಾರಸು ಮಾಡಿದಂತೆ ಸರ್ವ ಪಕ್ಷಗಳ ಸಭೆಯಲ್ಲಿ ನಿರ್ಣಯ ಕೈಗೊಂಡಿರುವುದು ಎಸ್ಸಿ, ಎಸ್ಟಿ ಸಮುದಾಯಕ್ಕೆ ಅನುಕೂಲವಾಗಲಿದೆ ಎಂದು ಹೇಳಿದರು.
    ಶೇ.3ರಿಂದ 7ಕ್ಕೆ ಮೀಸಲಾತಿ ಹೆಚ್ಚಿಸುವಂತೆ ವಾಲ್ಮೀಕಿ ಸಮಾಜದ ಮಠಾಧೀಶರು ಹಾಗೂ ವಿವಿಧ ನಾಯಕರು ಹೋರಾಟ ಮಾಡಿದ್ದರು. ಅದರ ಲವಾಗಿ ರಾಜ್ಯ ಸರ್ಕಾರ ಮೀಸಲಾತಿ ಹೆಚ್ಚಳ ಮಾಡಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts