More

    ಚಾಲಕನ ನಿಯಂತ್ರಣ ತಪ್ಪಿ ಬಸ್​ಗೆ ಡಿಕ್ಕಿ ಹೊಡೆದ ಕಾರು; ಮೂವರು ಮೃತ್ಯು

    ನವದೆಹಲಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ಉತ್ತರ ದೆಹಲಿಯಲ್ಲಿ ನಡೆದಿದೆ.

    ಮೃತರನ್ನು ಸವಿತಾ(55) ಎಂದು ತಿಳಿದು ಬಂದಿದ್ದು, ಇನ್ನಿಬ್ಬರ ಗುರುತು ಪತ್ತೆಯಾಗಬೇಕಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.

    ಅಪಘಾತದ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ಘಟನೆಯೂ ಮಧ್ಯಾಹ್ನ 12:30ರ ಸುಮಾರಿಗೆ ನಡೆದಿದ್ದು, ಕಾರಿನಲ್ಲಿ ಒಟ್ಟು 11 ಮಂದಿ ಪ್ರಯಾಣಿಸುತ್ತಿದ್ದರು. ಭಜನ್​ಪುರ ನಂದ ನಗರಿ ಕಡೆಯಿಂದ ಬರುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿ ಹೊಡೆದು ಮತ್ತೊಂದು ಬದಿಯಲ್ಲಿ ಬರುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದೆ.

    ಇದನ್ನೂ ಓದಿ: ಉಚಿತ ಬಸ್​ ಪ್ರಯಾಣದ ಆಸೆಗೆ ಬಿದ್ದು ಬುರ್ಖಾ ತೊಟ್ಟು ತಗ್ಲಾಕೊಂಡ ಪ್ರಯಾಣಿಕ

    ಎದುರು ಬರುತ್ತಿದ್ದ ಬಸ್ಗೆ ಕಾರು​ ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts