ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ಅರಿವು : ವನಮಹೋತ್ಸವ ಕಾರ್ಯಕ್ರಮದಲ್ಲಿ ಎಸ್.ಜಯರಾಮ ಶೆಟ್ಟಿ ಆಶಯ

vanamahothsava
ಆರ್ಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷ ಎಸ್.ಜಯರಾಮ ಶೆಟ್ಟಿ ಸುರ‌್ಗೋಳಿ ವಿದ್ಯಾರ್ಥಿಗಳಿಗೆ ಸಸಿಗಳನ್ನು ವಿತರಿಸಿದರು
Published on

ಆರ್ಡಿ: ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಲಯನ್ಸ್ ಕ್ಲಬ್ ವತಿಯಿಂದ ವನಮಹೋತ್ಸವ ಹಮ್ಮಿಕೊಂಡು ಪ್ರತಿಯೊಬ್ಬರಿಗೂ ಸಸಿಗಳನ್ನು ನೀಡಲಾಗಿದೆ. ಇದನ್ನು ಸಂರಕ್ಷಿಸಿ ಬೆಳೆಸುವಲ್ಲಿ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಆರ್ಡಿ-ಬೆಳ್ವೆ-ಗೋಳಿಯಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಎಸ್.ಜಯರಾಮ ಶೆಟ್ಟಿ ಸುರ‌್ಗೋಳಿ ಹೇಳಿದರು.

ಆರ್ಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರ್ಡಿ-ಬೆಳ್ವೆ-ಗೋಳಿಯಂಗಡಿ ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್ ವತಿಯಿಂದ ಆರ್ಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹಭಾಗಿತ್ವದಲ್ಲಿ ವನಮಹೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಸಿ ವಿತರಿಸಿ ಸೋಮವಾರ ಮಾತನಾಡಿದರು.
ಲಯನ್ಸ್ ಕ್ಲಬ್ ವಲಯಾಧ್ಯಕ್ಷ ಅಧ್ಯಕ್ಷ ಎಚ್.ವಸಂತಕುಮಾರ್ ಶೆಟ್ಟಿ ಬೆಳ್ವೆ, ಕಾರ್ಯದರ್ಶಿ ವೈ. ಪಟ್ಟಾಭಿರಾಮ್ ಭಟ್ ಮರೂರು, ಆರ್ಡಿ-ಬೆಳ್ವೆ-ಗೋಳಿಯಂಗಡಿ ಲಯನ್ಸ್ ಕ್ಲಬ್ ಕೋಶಾಧಿಕಾರಿ ಜಯಪ್ರಕಾಶ್ ಶೆಟ್ಟಿ ಯಳಂತೂರು, ಕಾರ್ಯದರ್ಶಿ ಅಣ್ಣಯ್ಯ ಶೆಟ್ಟಿ, ವಲಯ ಅಧ್ಯಕ್ಷ ಕಾರ್ಯದರ್ಶಿ, ಉಪಾಧ್ಯಕ್ಷ ಬಾಬು ಶೆಟ್ಟಿ ಜಗ್ಲುಗುಡ್ಡೆ, ಮುಸ್ತಾಕ್ ಅಹಮ್ಮದ್ ಬೆಳ್ವೆ, ಸದಸ್ಯ ಕೆ.ಸಂಜೀವ ಆರ್ಡಿ, ಸಹಶಿಕ್ಷಕ ವೃಂದದವರು, ಎಸ್‌ಡಿಎಂಸಿ ಸದಸ್ಯ ಕೃಷ್ಣ ನಾಯ್ಕ ಕೊಂಜಾಡಿ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಯಶೋದಾ ಸ್ವಾಗತಿಸಿದರು. ಲಯನ್ಸ್ ಕ್ಲಬ್ ಜತೆ ಕಾರ್ಯದರ್ಶಿ ಕೀರ್ತಿಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net