More

    ಶಿವಮೊಗ್ಗಕ್ಕೂ ಶೀಘ್ರ ವಂದೇ ಭಾರತ್ ಎಕ್ಸ್‌ಪ್ರೆಸ್

    ಶಿವಮೊಗ್ಗ: ದೇಶದ 68 ಭಾಗದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭಗೊಂಡಿದ್ದು ಮುಂದಿನ ದಿನಗಳಲ್ಲಿ ಶಿವಮೊಗ್ಗ ಭಾಗದ ಜನರಿಗೂ ವಂದೇ ಭಾರತ್ ರೈಲಿನ ಸೇವೆ ಸಿಗುವಂತೆ ಮಾಡಲಾಗುವುದು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಭರವಸೆ ನೀಡಿದರು.

    ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ 1,192.86 ಕೋಟಿ ರೂ. ವೆಚ್ಚದ ನೈಋತ್ಯ ರೈಲ್ವೆಯ ವಿವಿಧ ಯೋಜನೆಗಳು, ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ 554 ರೈಲ್ವೆ ನಿಲ್ದಾಣಗಳು, 1,500 ರಸ್ತೆ ಮೇಲ್ಸೇತುವೆ ಹಾಗೂ ಕೆಳಸೇತುವೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನಾ ಸಮಾರಂಭದ ಹಿನ್ನೆಲೆಯಲ್ಲಿ ಸೋಮವಾರ ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಇಡೀ ದೇಶದ ಹಲವು ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆರಿಸುವ ಮೂಲಕ ಲಿಫ್ಟ್, ಎಸ್ಕಲೇಟರ್ ಒಳಗೊಂಡಂತೆ ಅಗತ್ಯ ಮೌಲಸೌಕರ್ಯ ಕಲ್ಪಿಸಲಾಗುತ್ತಿದೆ. ರೈಲ್ವೆ ಮೂಲಕ ಒಂದು ಕಡೆಯಿಂದ ಮತ್ತೊಂದು ಕಡೆಗೆ ಜನರು ಪ್ರಯಾಣ ಮಾಡುತ್ತಿದ್ದು ಸ್ವಚ್ಛತೆ ಕಾಯ್ದುಕೊಳ್ಳುವ ಜತೆಗೆ ಸುರಕ್ಷತೆಗೆ ಒತ್ತು ನೀಡಲಾಗುತ್ತಿದೆ. ಮೋದಿ ಸರ್ಕಾರ ರಾಜ್ಯದ 15 ರೈಲ್ವೆ ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲಿದ್ದು, 384.79 ಕೋಟಿ ರೂ. ಅನುದಾನ ನೀಡಲಾಗಿದೆ. ಅಭಿವೃದ್ಧಿ ಶಕೆ ಆರಂಭಗೊಳ್ಳಲಿದೆ ಎಂದು ಹೇಳಿದರು.
    ಒಂದೇ ದಿನ ಪ್ರಧಾನಿ ಮೋದಿ ಅವರು ಇಷ್ಟು ದೊಡ್ಡ ಮಟ್ಟದಲ್ಲಿ ರೈಲ್ವೆ ನಿಲ್ದಾಣಗಳ ಮೇಲ್ದರ್ಜೆಗೇರಿಸುವುದು, ರಸ್ತೆ ಮೇಲ್ಸೇತುವೆ ಮತ್ತು ಕೆಳಸೇತುವೆಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸುತ್ತಿರುವುದು ಐತಿಹಾಸಿಕವಾಗಿದೆ. ಸ್ವಾತಂತ್ರಾೃನಂತರದ 67 ವರ್ಷದಲ್ಲಿ ರೈಲ್ವೆ ನಿಲ್ದಾಣಗಳಲ್ಲಿ ಆದ ಅಭಿವೃದ್ಧಿಗೂ ಕಳೆದ 9 ವರ್ಷಗಳಲ್ಲಿ ಆದ ಅಭಿವೃದ್ಧಿಗೂ ಅಜಗಜಾಂತರ ವ್ಯತ್ಯಾಸವಿದ್ದು, ಎರಡಕ್ಕೂ ಹೋಲಿಕೆ ಮಾಡಲು ಸಾಧ್ಯವಿಲ್ಲ. 9 ವರ್ಷದಲ್ಲಿ ಎನ್‌ಡಿಎ ಸರ್ಕಾರ ಶೇ.100 ಪಟ್ಟು ಅಭಿವೃದ್ಧಿಗೆ ಒತ್ತು ನೀಡಿದೆ ಎಂದರು.
    ನೈಋತ್ಯ ರೈಲ್ವೆ ಮೈಸೂರು ವಿಭಾಗದ ಹೆಚ್ಚುವರಿ ವ್ಯವಸ್ಥಾಪಕ ವಿನಾಯಕ್ ನಾಯಕ್, ರಾಜ್‌ಕುಮಾರ್, ವಲಯ ರೈಲ್ವೆ ಬಳಕೆದಾರರ ಸಲಹಾ ಸಮಿತಿ ಸದಸ್ಯ ಕೆ.ವಿ.ವಸಂತ್‌ಕುಮಾರ್, ವಿಭಾಗೀಯ ರೈಲ್ವೆ ಬಳಕೆದಾರರ ಸಲಹಾ ಸಮಿತಿ ಸದಸ್ಯರಾದ ನಾಗರಾಜ್ ಘೋರೆ, ಆರ್.ಮಹೇಶ್, ಮೋಹನರಾಜ್ ಜಾಧವ್, ಸಿ.ಮೂರ್ತಿ, ಯಶೋಧಾ ವೈಷ್ಣವ್ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts