

ಬೆಳ್ತಂಗಡಿ: ವಿದ್ಯಾರ್ಥಿಗಳು ನಿರಂತರ ಪರಿಶ್ರಮದಿಂದ ಉತ್ತಮ ಫಲಿತಾಂಶ ಪಡೆದು ಜೀವನದಲ್ಲಿ ಯಶಸ್ಸು ಗಳಿಸಬಹುದು ಎಂದು ಡಾ.ಜೇಸನ್ ಅವಿತ್ ಪಿರೇರಾ ಹೇಳಿದರು.
ವಾಣಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ಸಂಘದ ವತಿಯಿಂದ ನಡೆದ ಪ್ರೇರಣಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ನೀಟ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಗಳಿಸಲು ಶಿಕ್ಷಕರ ಸಲಹೆ ಸೂಚನೆಗಳೊಂದಿಗೆ ಹೆಚ್ಚಿನ ಪರಿಶ್ರಮದ ಅಗತ್ಯವಿದೆ. ವಿದ್ಯಾರ್ಥಿ ಜೀವನದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ತೊಡಗಿ ಸಮಯ ವ್ಯರ್ಥ ಮಾಡದೆ ಅಧ್ಯಯನದಲ್ಲಿ ತೊಡಗಬೇಕು. ಆಗ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದರು.
ಕಾಲೇಜಿನ ಉಪಪ್ರಾಂಶುಪಾಲ ವಿಷ್ಣುಪ್ರಕಾಶ್ ಎಂ. ಅಧ್ಯಕ್ಷತೆ ವಹಿಸಿದ್ದರು. ಜೆಇಇ, ನೀಟ್ ಪರೀಕ್ಷಾ ತರಬೇತುದಾರ ಡಾ.ಶುತಕೀರ್ತಿ ಜೈನ್ ಉಪಸಿತರಿದ್ದರು. ವಿಜ್ಞಾನ ಸಂಘದ ಸಂಯೋಜಕಿ ಸೌಜನ್ಯಾ ಸ್ವಾಗತಿಸಿದರು. ಉಪನ್ಯಾಸಕಿ ರಾಜಶ್ರೀ ವಂದಿಸಿದರು. ಆಕಾಶ್ ನಿರೂಪಿಸಿದರು.