ವಾಣಿ ವಿದ್ಯಾಸಂಸ್ಥೆ ಕಾರ್ಯ ಶ್ಲಾಘನೀಯ : ಎಸ್.ಎಲ್.ಭೋಜೇಗೌಡ ಹೇಳಿಕೆ

New Project (5)
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ಗುಣಮಟ್ಟದ ಶಿಕ್ಷಣದ ಮೂಲಕ ರಾಜ್ಯದಲ್ಲೇ ಶ್ರೇಷ್ಠ ಸಂಸ್ಥೆಯಾಗಿ ವಾಣಿ ವಿದ್ಯಾಸಂಸ್ಥೆ ಬೆಳೆಯುತ್ತಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸ್ಪಂದಿಸಿ ಅವರ ಪ್ರತಿಭೆಗಳನ್ನು ರಾಜ್ಯ, ರಾಷ್ಟ್ರಮಟ್ಟಕ್ಕೆ ತಿಳಿಯಪಡಿಸುವ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಹೇಳಿದರು.

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಆಡಳಿತಕ್ಕೊಳಪಟ್ಟ ವಾಣಿ ಶಿಕ್ಷಣ ಸಂಸ್ಥೆ ಬೆಳ್ತಂಗಡಿ ಆಶ್ರಯದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ವಾಣಿ ವಿದ್ಯಾ ಸಮ್ಮಾನ್ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ನಾವೂರು ಆರೋಗ್ಯ ಕ್ಲಿನಿಕ್‌ನ ಡಾ.ಪ್ರದೀಪ್ ಆಟಿಕುಕ್ಕೆ, ವಾಣಿ ಶಿಕ್ಷಣ ಸಂಸ್ಥೆ ಗೌರವಾಧ್ಯಕ್ಷ ಎಚ್.ಪದ್ಮಗೌಡ ಮಾತನಾಡಿದರು. ವಾಣಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಪಿ.ಕುಶಾಲಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು.

ಬೆಳ್ತಂಗಡಿ ಪಪಂ ಅಧ್ಯಕ್ಷ ಜಯಾನಂದ ಗೌಡ ಟಿ., ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ವಾಣಿ ಶಿಕ್ಷಣ ಸಂಸ್ಥೆಗಳ ಮಾಜಿ ಅಧ್ಯಕ್ಷ ಸೋಮೇಗೌಡ, ಉಪಾಧ್ಯಕ್ಷರಾದ ನಾರಾಯಣ ಗೌಡ ದೇವಸ್ಯ, ಧರ್ಣಪ್ಪ ಗೌಡ, ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ, ಜತೆ ಕಾರ್ಯದರ್ಶಿ ಶ್ರೀನಾಥ್ ಕೆ.ಎಂ., ಕೋಶಾಧಿಕಾರಿ ಯುವರಾಜ ಅನಾರು, ಮಾಜಿ ಕಾರ್ಯದರ್ಶಿ ಮೋಹನ ಗೌಡ, ನಿರ್ದೇಶಕರಾದ ಕೃಷ್ಣಪ್ಪ ಗೌಡ, ಗೋಪಾಲಕೃಷ್ಣ ಗೌಡ ಗುಳ್ಳೋಡಿ, ವಾಣಿ ಸೌಹಾರ್ದ ಸಹಕಾರಿ ಸಂಘ ನಿರ್ದೇಶಕರಾದ ಡಿ.ಎಂ.ಗೌಡ, ಮಾಧವ ಗೌಡ, ವಿಜಯ ಕುಮಾರ್, ದಿನೇಶ್ ಗೌಡ, ಯುವ ವೇದಿಕೆ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ, ಮಹಿಳಾ ವೇದಿಕೆ ಅಧ್ಯಕ್ಷೆ ಗೀತಾ ರಾಮಣ್ಣ ಗೌಡ, ಸಂಸ್ಥೆ ಆಡಳಿತಾಧಿಕಾರಿ ಪ್ರಸಾದ್, ವಾಣಿ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ಸುಹಾಸಿನಿ ಉಪಸ್ಥಿತರಿದ್ದರು. ವಾಣಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ವಿಷ್ಣುಪ್ರಕಾಶ್ ಎಂ. ಸ್ವಾಗತಿಸಿದರು. ವಾಣಿ ಆಂಗ್ಲ ಮಾಧ್ಯಮ ಶಾಲೆ ಮುಖ್ಯಶಿಕ್ಷಕ ಲಕ್ಷ್ಮೀ ನಾರಾಯಣ ಕೆ. ವಂದಿಸಿದರು. ಕನ್ನಡ ಭಾಷಾ ಉಪನ್ಯಾಸಕ ಬೆಳ್ಳಿಯಪ್ಪ, ಆಂಗ್ಲ ಭಾಷಾ ಉಪನ್ಯಾಸಕಿ ಅನುರಾಧಾ ಕಾರ್ಯಕ್ರಮ ನಿರೂಪಿಸಿದರು.

ಸಾಧಕರಿಗೆ ಪ್ರಶಸ್ತಿ ಪ್ರದಾನ

ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆ ಪ್ರಭಾರ ಮುಖ್ಯಶಿಕ್ಷಕ ಮಹಮ್ಮದ್ ರಿಯಾಜ್, ಗುರುವಾಯನಕೆರೆ ಪ್ರೌಢಶಾಲೆ ಆಂಗ್ಲ ಭಾಷಾ ಶಿಕ್ಷಕ ಜಗನ್ನಾಥ, ಕಾಯರ್ತಡ್ಕ ಸರ್ಕಾರಿ ಪ್ರೌಢಶಾಲೆ ಗಣಿತ ಶಿಕ್ಷಕಿ ವಾಣಿ, ಬೆಳ್ತಂಗಡಿ ಸರ್ಕಾರಿ ಪ್ರೌಢಶಾಲೆ ಸಹ ಶಿಕ್ಷಕ ಸುರೇಶ್ ಶೆಟ್ಟಿ, ಬೆಂದ್ರಾಳ ಸೇಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆ ಕನ್ನಡ ಭಾಷಾ ಶಿಕ್ಷಕ ವಸಂತ ಎ. ಅವರಿಗೆ ವಾಣಿ ವಿದ್ಯಾ ಸಮ್ಮಾನ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸರ್ಕಾರಿ, ಬಹುತೇಕ ಅನುದಾನಿತ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದಾಗಿ ಗುಣಮಟ್ಟದ ಶಿಕ್ಷಣ ನೀಡುವುದು ಸವಾಲಾಗಿದೆ. ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ, ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಬದ್ಧತೆಯಾಗಬೇಕು. ಕನ್ನಡ ಆಡಳಿತ ಭಾಷೆ ಎಂದು ಹೇಳಿದರೆ ಸಾಕಾಗದು. ಕನ್ನಡ ಶಾಲೆಯನ್ನು ಉಳಿಸುವ ಕಡೆಗೆ ಗಮನ ಕೊಡಬೇಕು. ಎಸ್.ಎಲ್.ಭೋಜೇಗೌಡ ವಿಧಾನ ಪರಿಷತ್ ಸದಸ್ಯ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net