

ಮೈಸೂರು: ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ಕೆಎಂಪಿಕೆ ಚಾರಿಟೇಬಲ್ ಟ್ರಸ್ಟ್‌ನಿಂದ ಆಯೋಜಿಸಿದ್ದ ಆನ್ ಲೈನ್ ವರಮಹಾಲಕ್ಷ್ಮಿಸೆಲ್ಫಿ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ರಾಮಾನುಜ ರಸ್ತೆಯಲ್ಲಿರುವ ನಮೋ ಯೋಗ ಭವನದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಜೇತರಾದ ರಿಷು ಪುರುಷೋತ್ತಮ್, ಪ್ರಮೀಳಾ ರಾಧಾಕೃಷ್ಣ, ಎಚ್.ಎಸ್.ಪ್ರೇಮಾವತಿ, ಜಿ.ಗಾಯತ್ರಿ, ಚೈತ್ರ ಗುರುದತ್, ಹರ್ಷಿತಾ, ರೂಪಶ್ರೀ, ವಿಜಯಲಕ್ಷ್ಮಿ, ಕಲಾ, ಶೃತಿ, ಸುಧಾಬಾಯಿ, ಶಿಲ್ಪ ಅರುಣ್, ಹರ್ಷಿಣಿ ವಿಜಯ್, ನೇತ್ರಾವತಿ ಯಶವಂತ್ ಕುಮಾರ್, ಪ್ರೀತಿ ವಿನಯ್ ಅವರಿಗೆ ಬಹುಮಾನ ನೀಡಲಾಯಿತು.
ಮೈಸೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ ಮಾತನಾಡಿ, ಮಕ್ಕಳಿಗೆ ಆಸ್ತಿಯನ್ನು ಮಾಡದೆ ಮಕ್ಕಳನ್ನೇ ಆಸ್ತಿ ಮಾಡಬೇಕು. ನಮ್ಮ ಧರ್ಮದ ಜಾಗೃತಿಯನ್ನು ಎಲ್ಲರಲ್ಲೂ ಮೂಡಿಸಬೇಕು ಎಂದು ತಿಳಿಸಿದರು.
ಮಂದಿನ ಪೀಳಿಗೆಗೆ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಪ್ರೇರೇಪಿಸಬೇಕು. ಈ ಮೂಲಕ ಹಿಂದೂ ಸನಾತನ ಸಂಸ್ಕೃತಿ ರಕ್ಷಿಸಬೇಕು ಎಂದರು.
ಕಾಂಗ್ರೆಸ್ ಮುಖಂಡ ಎನ್.ಎಂ. ನವೀನ್‌ಕುಮಾರ್ ಮಾತನಾಡಿ, ನಮ್ಮ ಸಂಸ್ಕಾರ ಸಂಸ್ಕೃತಿ ಉಳಿಯಬೇಕೆಂದರೆ ಇಂತಹ ಹಬ್ಬಗಳು ಎಲ್ಲ ಕಡೆಗಳಲ್ಲಿ ಒಟ್ಟುಗೂಡಿ ನಡೆಯಬೇಕು ಎಂದು ಹೇಳಿದರು.
ನಗರ ಪಾಲಿಕೆ ಮಾಜಿ ಸದಸ್ಯ ಮ.ವಿ. ರಾಮಪ್ರಸಾದ್, ಪತ್ರಕರ್ತೆ ಸಹನಾ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಚಿದನ್ವಿ ಟ್ರಸ್ಟ್ ಅಧ್ಯಕ್ಷೆ ನಾಗಮಣಿ, ಅಥರ್ವ ಸ್ಕಿಲ್ ಫೌಂಡೇಶನ್ ಅಧ್ಯಕ್ಷೆ ಪುಷ್ಪಾ, ಕೆ.ಆರ್.ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಕೆಎಂಪಿಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಪದಾಧಿಕಾರಿಗಳಾದ ಅಜಯ್ ಶಾಸ್ತ್ರಿ, ಸಚಿಂದ್ರ, ಚಕ್ರಪಾಣಿ ಇತರರು ಇದ್ದರು.