ವಿವಿಧ ಬೇಡಿಕೆ ಈಡೇರಿಸಲು ರೈಲ್ವೆ ಮೇಲ್ಸೇತುವೆ ಹೋರಾಟಗಾರರ ಆಗ್ರಹ

blank

ರಾಣೆಬೆನ್ನೂರ: ನಗರದ ಬಾಗಲಕೋಟಿ-&ಬಿಳಿಗಿರಿರಂಗನಬೆಟ್ಟ ರಾಜ್ಯ ಹೆದ್ದಾರಿಯ ರೈಲ್ವೆ ಗೇಟ್​ 219 (ದೇವರಗುಡ್ಡ ರಸ್ತೆ) ಬಳಿ ನಿಮಾರ್ಣವಾಗುತ್ತಿರುವ ರೈಲ್ವೆ ಮೇಲ್ವೇತುವೆಗೆ ಭೂಮಿ ಕಳೆದುಕೊಂಡ ರೈತರ ಜಮೀನುಗಳಿಗೆ ಓಡಾಡಲು 10 ಮೀಟರ್​ ಅಗಲ ಕಾಂಕ್ರೀಟ್​ (ಸವಿರ್ಸ್​) ರಸ್ತೆ ನಿಮಿರ್ಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈಲ್ವೆ ಮೇಲ್ಸೇತುವೆ ನಿಮಾರ್ಣ ಹೋರಾಟ ಸಮಿತಿ ಸದಸ್ಯರು ಗುರುವಾರ ರೈಲ್ವೆ ಮೇಲ್ಸೇತುವೆ ಬಳಿ ಪ್ರತಿಭಟನೆ ನಡೆಸಿ, ಗ್ರೇಡ್​&-2 ತಹಸೀಲ್ದಾರ್​ ಅರುಣ ಕಾರಣಗಿ ಅವರಿಗೆ ಮನವಿ ಸಲ್ಲಿಸಿದರು.
ರೈಲ್ವೆ ಇಲಾಖೆಯು 2023ನೇ ಸಾಲಿನಲ್ಲಿ ಮೇಲ್ಸೇತುವೆ ನಿಮಾರ್ಣಕ್ಕಾಗಿ 2.30 ಎಕರೆ ಭೂಮಿಯನ್ನು ಸ್ವಾಧಿನ ಪಡಿಸಿಕೊಂಡು ಕಾಮಗಾರಿ ಪ್ರಾರಂಭಿಸಿದೆ. ಕಾಮಗಾರಿ ಇದೀಗ ಮುಕ್ತಾಯ ಹಂತ ತಲುಪಿದೆ. ಭೂ ಸ್ವಾಧಿನದ ಸಮಯದಲ್ಲಿ ಹಾವೇರಿ ಉಪ ವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಭೂಮಿ ನೀಡಿದ ರೈತರು, ರೇಲ್ವೆ ಮೇಲ್ಸೇತುವೆ ಹೋರಾಟ ಸಮಿತಿ, ಕಂದಾಯ ಇಲಾಖೆ ಅಧಿಕಾರಿಗಳ ಜತೆ ನಡೆದ ಸಭೆಯಲ್ಲಿ 10 ಮೀ. ಅಗಲದ ಸರ್ವೀಸ್​ ರಸ್ತೆ ನಿಮಿರ್ಸಿಕೊಡುವಂತೆ ಆಗ್ರಹಿಸಲಾಗಿತ್ತು.
ಅದಕ್ಕೆ ರೈಲ್ವೆ ಅಧಿಕಾರಿಗಳು ಒಪ್ಪಿಗೆ ಸೂಚಿಸಿದ್ದರು. ಆದರೆ ಇದೀಗ ಕೇವಲ 6 ಮೀ.ವಿಸ್ತೀರ್ಣದ ರಸ್ತೆ ನಿಮಿರ್ಸಲಾಗುತ್ತಿದೆ. ಇದಲ್ಲದೆ ಭೂಮಿ ಕಳೆದುಕೊಂಡ ರೈತರಿಗೆ ಇಂದಿನವರೆಗೂ ಭೂ ಮತ್ತು ಬೆಳೆ ಪರಿಹಾರ ಹಾಗೂ ಕಟ್ಟಡ ಪರಿಹಾರ ನೀಡಿಲ್ಲ. ಆದ್ದರಿಂದ ಶೀಘ್ರದಲ್ಲಿಯೇ 10 ಮೀಟರ್​ ಅಗಲದ ಸಿಸಿ ರಸ್ತೆ (ಸವಿರ್ಸ್​ ರೋಡ) ನಿಮಿರ್ಶಬೇಕು, ಬೆಳೆ ಹಾನಿ ಮತ್ತು ಭೂ ಪರಿಹಾರ ನೀಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಕೆಳ ಸೇತುವೆಯಲ್ಲಿ ನೀರು ನಿಲ್ಲದಂತೆ ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಹೋರಾಟ ಸಮಿತಿ ಅಧ್ಯಕ್ಷ ರವೀಂದ್ರಗೌಡ ಪಾಟೀಲ, ಪ್ರಕಾಶ ಪೂಜಾರ, ನಿಂಗಪ್ಪ ಹೊನ್ನಾಳಿ, ಜಗದೀಶ ಪಾಟೀಲ, ಹರಿಹರಗೌಡ ಪಾಟೀಲ, ಕರಗೌಡ ಪಾಟೀಲ, ರಾಜು ಹೊಳಿಯಮ್ಮನವರ್​, ಬಸವರಾಜ ನೆಲೊಗಲ್​, ಉಮೇಶ ಗುರುಲಿಂಗಪ್ಪಗೌಡ್ರ, ಜಗದೀಶ್​ ಕೆರೋಡಿ, ಹೊನ್ನಪ್ಪ ಹೊಳೆಯಮ್ಮನವರ, ಶಿವಣ್ಣ ನಾಗೇನಹಳ್ಳಿ, ಬಸಣ್ಣ ಹೊನ್ನಾಳಿ ಮತ್ತಿತರರಿದ್ದರು.

Share This Article

ಚಳಿಗಾಲದಲ್ಲಿ ಈ ಒಂದು ಹಣ್ಣನ್ನು ತಿಂದರೆ ಸಾಕು.. ರೋಗಗಳೇ ಬರುವುದಿಲ್ಲ..fruits

fruits : ಚಳಿಗಾಲ ಬಂದಿದೆ ಎಂದರೆ ಕೆಮ್ಮು, ನೆಗಡಿ, ಜ್ವರ, ಗಂಟಲು ನೋವು, ಕೀಲು ನೋವು…

ಮಕರ ರಾಶಿಗೆ ಬುಧ ಪ್ರವೇಶ: ಈ 5 ರಾಶಿಯವರಿಗೆ ರಾಜಯೋಗ, ಖುಲಾಯಿಸಲಿದೆ ಅದೃಷ್ಟ! Zodiac Sign

Zodiac Sign : ಜ್ಯೋತಿಷ್ಯದ ಆಧಾರದ ಮೇಲೆ, ಒಬ್ಬರು ಜನಿಸಿದ ರಾಶಿ, ನಕ್ಷತ್ರ ಹಾಗೂ ಗ್ರಹಗಳ…

ಪೇನ್​ ಕಿಲ್ಲರ್ ಮಾತ್ರೆ​ vs ಜೆಲ್​… ಎರಡರಲ್ಲಿ ಯಾವುದು ಉತ್ತಮ? ಇಲ್ಲಿದೆ ಉಪಯುಕ್ತ ಮಾಹಿತಿ… Painkiller Tablet vs Gel

Painkiller Tablet vs Gel : ದೇಹವು ಗಾಯಗೊಂಡಾಗ ಅಥವಾ ಉಳುಕಿದಾಗ ನೋವು ಅನುಭವಿಸುವುದು ಸಹಜ.…