More

    ವಿವಿಧ ಸಂಘಟನೆಗಳಿಂದ ಪ್ರತಿಭಟನೆ

    ಬೆಳಗಾವಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಲವು ಸಂಘಟನೆಗಳ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ಪ್ರತ್ಯೇಕವಾಗಿ ಪ್ರತಿಭಟಿಸಿ, ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

    ಜಿಲ್ಲಾಮಟ್ಟದ ಕಚೇರಿ ಸ್ಥಳಾಂತರ ಬೇಡ: ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಜಿಲ್ಲಾಮಟ್ಟದ ಕಚೇರಿ ಸ್ಥಳಾಂತರಿಸುವ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಪದಾಧಿಕಾರಿಗಳು ಪ್ರತಿಭಟಿಸಿದರು. ವಿವಿಧ ಇಲಾಖೆಗಳ ರಾಜ್ಯಮಟ್ಟದ ಕಚೇರಿಗಳನ್ನು ಬೆಂಗಳೂರಿನಿಂದ ಇಲ್ಲಿಗೆ ಸ್ಥಳಾಂತರಿಸುವುದಾಗಿ ಸರ್ಕಾರ ಹಲವು ವರ್ಷಗಳಿಂದ ಆಶ್ವಾಸನೆ ನೀಡುತ್ತಲೇ ಬಂದಿದೆ. ಬೆಳಗಾವಿಯನ್ನು ರಾಜ್ಯದ ಎರಡನೇ ರಾಜಧಾನಿಯಾಗಿಸುವ ಪ್ರಯತ್ನಗಳು ನಡೆದಿವೆ. ಆದರೆ, ಬೆಳಗಾವಿ ಜಿಲ್ಲಾಡಳಿತ ಮಾಡಿರುವ ಶಿಾರಸಿನ ಮೇರೆಗೆ, ಬಾಡಿಗೆ ಕಟ್ಟಡದಲ್ಲಿರುವ ಜಿಲ್ಲಾಮಟ್ಟದ ಕಚೇರಿಗಳನ್ನು ಸುವರ್ಣ ಸೌಧಕ್ಕೆ ಸ್ಥಳಾಂತರಿಸಲು ಕೈಗೊಂಡಿರುವ ನಿರ್ಧಾರ ಅವೈಜ್ಞಾನಿಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಮಿತಿ ಅಧ್ಯಕ್ಷ ಅಶೋಕ ಚಂದರಗಿ, ಮಹಾಂತೇಶ ರಣಗಟ್ಟಿಮಠ, ರಮೇಶ ಸೊಂಟಕ್ಕಿ, ಮೈನುದ್ದೀನ್ ಮಕಾನದಾರ, ಶಶಿಧರ ವಾರಿ ಇತರರು ಇದ್ದರು.

    ಕಾರ್ಮಿಕರ ಪ್ರತಿಭಟನೆ: ಲಾಕ್‌ಡೌನ್‌ನಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕಾರ್ಮಿಕರ ಕುಟುಂಬಗಳಿಗೆ ಸರ್ಕಾರ ಸೂಕ್ತ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿ ಕಾರ್ಮಿಕರ ಸಂಘಟನೆಗಳ ಕ್ರಿಯಾ ಸಮಿತಿ ಜಿಲ್ಲಾ ಘಟಕದ ಪದಾಧಿಕಾರಿಗಳು ಪ್ರತಿಭಟಿಸಿದರು.

    ಕರೊನಾ ಸೋಂಕು ಹರಡುವಿಕೆ ನಿಯಂತ್ರಣಕ್ಕಾಗಿ ಲಾಕ್‌ಡೌನ್ ೋಷಿಸಿದ್ದರಿಂದ ಬೆಳಗಾವಿಯಲ್ಲಿ ಕೆಲಸ ಕಳೆದುಕೊಂಡ ಸಾವಿರಾರು ಕಾರ್ಮಿಕರು ಬೀದಿಗೆ ಬಂದಿದ್ದಾರೆ. ಅಂತಹ ಕುಟುಂಬಗಳ ನೆರವಿಗೆ ಧಾವಿಸಬೇಕು. ನರೇಗಾ ಯೋಜನೆಯಡಿ ಕೆಲಸ ಮಾಡುವವರಿಗೆ ನೀಡುವ ಕೂಲಿ ಮೊತ್ತವನ್ನು 600 ರೂ.ಗೆ ಹೆಚ್ಚಿಸಬೇಕು. ನಗರ ವ್ಯಾಪ್ತಿಯಲ್ಲಿರುವ ನಿರುದ್ಯೋಗಿಗಳಿಗೆ ನಿರುದ್ಯೋಗ ಭತ್ಯೆ ನೀಡಬೇಕು ಎಂದು ಆಗ್ರಹಿಸಿದರು. ಜಿ.ವಿ. ಕುಲಕರ್ಣಿ, ನಾಗೇಶ ಸಾತೇರಿ, ಸಿ.ಎಸ್. ಬಿಡ್ನಾಳ, ಸಂಧ್ಯಾ ಕುಲಕರ್ಣಿ, ಸರೋಜಾ ಕಾಂಬಳೆ ಇದ್ದರು.

    ಮೂಲಸೌಕರ್ಯ ಒದಗಿಸಲು ಒತ್ತಾಯ: ಬೆಳಗಾವಿ ರುಕ್ಮಿಣಿ ನಗರಕ್ಕೆ ಅಗತ್ಯ ಮೂಲ ಸೌಕರ್ಯ ಒದಗಿಸಲು ಒತ್ತಾಯಿಸಿ ದಲಿತ ಯುಥ್ ಆರ್ಗನೈಸೇಷನ್ ಪದಾಧಿಕಾರಿಗಳು ಮಹಾನಗರ ಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ ಅವರಿಗೆ ಮನವಿ ಸಲ್ಲಿಸಿದರು. ಸುಧೀರ ಚೌಗಲೆ, ಮಲ್ಲೇಶ ಚೌಗಲೆ, ರಮಾನಂದ ಮೇತ್ರಿ ಇತರರು ಇದ್ದರು.

    ಮಹಾನಗರ ಪಾಲಿಕೆ ವ್ಯಾಪ್ತಿಯ ಆಸ್ತಿ ತೆರಿಗೆ ಕಡಿಮೆಗೊಳಿಸಿ

    ಆಸ್ತಿ ತೆರಿಗೆ ಹೆಚ್ಚಳಗೊಳಿಸಿರುವ ನಿರ್ಧಾರ ಹಿಂಪಡೆಯುವ ಕುರಿತು ಮಹಾನಗರ ಪಾಲಿಕೆ ಆಯುಕ್ತರಿಗೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿ ಮಾಜಿ ನಗರ ಸೇವಕರು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಮನವಿ ಸಲ್ಲಿಸಿದರು. ದೀಪಕ ಜಮಖಂಡಿ, ಶಿವಾಜಿ ಸುಂಠಕರ, ನೇತಾಜಿ ಜಾಧವ, ಸರಿತಾ ಪಾಟೀಲ, ದೀಪಕ ವಾಘೇಲಾ, ಸಂಜಯ ಪ್ರಭು ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts