More

    22ಕ್ಕೆ ಹೊರನಾಡಿನಲ್ಲಿ ವಿವಿಧ ಕಾರ್ಯಕ್ರಮ

    ಕಳಸ: ಆದಿಶಕ್ತ್ಯಾತ್ಮಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ಹೊರನಾಡಿನಲ್ಲಿ ಜು.22ರಂದು ಶ್ರೀಕ್ಷೇತ್ರದ ಗ್ರಾಮೀಣಾಭಿವೃದ್ಧಿ ಯೋಜನೆಯ ವಿವಿಧ ಕಾರ್ಯಕ್ರಮಗಳು ನಡೆಯಲಿದೆ ಎಂದು ಹೊರನಾಡು ಕ್ಷೇತ್ರದ ಧರ್ಮಕರ್ತ ಜಿ.ಭೀಮೆಶ್ವರ ಜೋಷಿ ತಿಳಿಸಿದ್ದಾರೆ. ಅಂದು ಬೆಳಗ್ಗೆ 11 ಗಂಟೆಗೆ ಶ್ರೀ ಮಾಂಗಲ್ಯ ಮಂಟಪದಲ್ಲಿ ಅನ್ನದಾಸೊಹ ಯೋಜನೆಯಲ್ಲಿ ಸರ್ಕಾರಿ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳಿಗೆ ತಟ್ಟೆ, ಲೋಟಗಳ ವಿತರಣೆ, ಶೈಕ್ಷಣಿಕ ಅಭಿವೃದ್ಧಿ ಯೋಜನೆಯಲ್ಲಿ ತಾಲೂಕಿನ ಶಾಲಾ ಮಕ್ಕಳಿಗೆ ಉಚಿತ ಟಿಪ್ಪಣಿ ಪುಸ್ತಕಗಳ ವಿತರಣೆ, ಕಳಸ ತಾಲೂಕಿನ ಪ್ರೌಢಶಾಲೆ, ಪದವಿಪೂರ್ವ ಮತ್ತು ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಕೃಷಿ ಸಮೃದ್ಧಿ ಯೋಜನೆಯಲ್ಲಿ ಅರ್ಹ ಫಲಾನುಭವಿ ರೈತರಿಗೆ ಕಲ್ಪವೃಕ್ಷ ಸಸಿಗಳ ವಿತರಣೆ, ಮಹಿಳಾಭಿವೃದ್ಧಿ ಯೋಜನೆಯಲ್ಲಿ ಅರ್ಹ ಮಹಿಳೆಯರಿಗೆ ಹೊಲಿಗೆ ಯಂತ್ರಗಳ ವಿತರಣೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ, ಉಪಸಭಾಪತಿ ಎಂ.ಕೆ.ಪ್ರಾಣೇಶ್, ಹೊರನಾಡು ಗ್ರಾಪಂ ಅಧ್ಯಕ್ಷ ವೃಷಭರಾಜ್ ಜೈನ್, ಕಳಸ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜಿ.ಕೆ.ಮಂಜಪ್ಪಯ್ಯ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts