ಸುಳ್ಯ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಸುಳ್ಯದ ಶಾರದಾ ಪದವಿಪೂರ್ವ ಕಾಲೇಜು ಶೇ.100 ಫಲಿತಾಂಶ ದಾಖಲಿಸಿದೆ. ವಿಜ್ಞಾನ ವಿಭಾಗದಲ್ಲಿ 31, ವಾಣಿಜ್ಯ ವಿಭಾಗದಲ್ಲಿ 22 ಹಾಗೂ ಕಲಾ ವಿಭಾಗದಲ್ಲಿ 23 ಮಂದಿ ಪರೀಕ್ಷೆಗೆ ಹಾಜರಾಗಿದ್ದು, ಎಲ್ಲರೂ ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ 3 ಮಂದಿ, ವಾಣಿಜ್ಯ ವಿಭಾಗದಲ್ಲಿ 6 ಮಂದಿ ಹಾಗೂ ಕಲಾ ವಿಭಾಗದಲ್ಲಿ 5 ಮಂದಿ ಡಿಸ್ಟಿಂಕ್ಷನ್ ಅಂಕ ಪಡೆದಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ವಿದ್ಯಾಕುಮಾರಿ(531), ವಿನುತಾ(521), ದೀಕ್ಷಿತಾ (517) ಅತಿ ಹೆಚ್ಚು ಅಂಕ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಸುಶ್ಮಿತಾ ಜಿ.(565), ಸುವರ್ಣ(546), ಮೇಘನಾ(532), ಬೃಂದಶ್ರೀ(521), ಸಲ್ಮಾ ರಿಫಾ(518) ಹಾಗೂ ಫಾತಿವಾತ್ ಶಿಫಾನ(512) ಅತಿ ಹೆಚ್ಚು ಅಂಕ ಪಡೆದಿದ್ದಾರೆ. ಕಲಾ ವಿಭಾಗದಲ್ಲಿ ಹರ್ಷಿತಾ(587), ಭಾಗ್ಯಶ್ರೀ(567), ರೇತಿಕಾ ಸಿ.(564), ವಂದಿತಾ ಎಂ.(527), ಅಕ್ಷಯ ಸರಸ್ವತಿ (517) ಅತೀ ಹೆಚ್ಚು ಅಂಕ ಪಡೆದಿದ್ದಾರೆ.
ಸುಳ್ಯ ಎನ್.ಎಂ.ಪಿ.ಯು.ಸಿ: ಸುಳ್ಯ ಎನ್.ಎಂ.ಪಿ.ಯು. ಕಾಲೇಜಿನಲ್ಲಿ ಪರೀಕ್ಷೆಗೆ ಹಾಜರಾದ 137ವಿದ್ಯಾರ್ಥಿಗಳಲ್ಲಿ ವಿದ್ಯಾರ್ಥಿಗಳು 129 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.94.16 ಫಲಿತಾಂಶ ದಾಖಲಾಗಿದೆ. ಒಟ್ಟು 33 ಮಂದಿ ಡಿಸ್ಟಿಂಕ್ಷನ್ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ 75 ಮಂದಿ ಹಾಜರಾದ ವಿದ್ಯಾರ್ಥಿಗಳಲ್ಲಿ 68 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.90.16, ವಾಣಿಜ್ಯ ವಿಭಾಗದ 48 ವಿದ್ಯಾರ್ಥಿಗಳಲ್ಲಿ 47 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.98 ಮತ್ತು ಕಲಾ ವಿಭಾಗದಲ್ಲಿ 14 ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣರಾಗಿ ಶೇ.100 ಫಲಿತಾಂಶ ದಾಖಲಾಗಿದೆ. ವಿಜ್ಞಾನ ವಿಭಾಗದ ಅಮೋ ಎಂ.ಎಸ್.- 581, ಕೃತಸ್ವರ ದೀಪ್ತ- 577, ವಾಣಿಜ್ಯ ವಿಭಾಗದ ಕೃಷ್ಣವಂಶಿ ಮತ್ತು ಮೇಘಾ ಡಿ.- 575, ಕಲಾ ವಿಭಾಗದ ಮಣಿಕಂಠ- 537 ಅಂಕ ಪಡೆದಿದ್ದಾರೆ.
ಕೆವಿಜಿ ಅಮರಜ್ಯೋತಿ: ಕೆವಿಜಿ ಅಮರ ಜ್ಯೋತಿ ಪಿ.ಯು. ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ 75 ಮಂದಿ ಪರೀಕ್ಷೆಗೆ ಹಾಜರಾಗಿ 73 ಮಂದಿ ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 45 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 44 ಮಂದಿ ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಮಹಮ್ಮದ್ ಲಾಜಿಮ್- 588, ಪ್ರೇಕ್ಷಾ ಬಿ.ಸಿ.- 585, ಅರ್ಚನಾ ಜಯನ್- 582, ವಿಜ್ಞಾನ ವಿಭಾಗದಲ್ಲಿ ಕೀರ್ತನಾ ಸಿ.ವಿ.- 576, ಸೂರಜ್ ಜಿ.ಆರ್.- 572 ಅಂಕ ಪಡೆದಿದ್ದಾರೆ. ಒಟ್ಟು ವಾಣಿಜ್ಯ ವಿಭಾಗದಲ್ಲಿ 20 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 18 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ವಿಜ್ಞಾನ ವಿಭಾಗದಲ್ಲಿ 33 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 39 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ಸುಳ್ಯ ಸರ್ಕಾರಿ ಪದವಿಪೂರ್ವ ಕಾಲೇಜು: ಸುಳ್ಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಒಟ್ಟು 315 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 301 ಮಂದಿ ಉತ್ತೀರ್ಣರಾಗಿ ಶೇ.96 ಫಲಿತಾಂಶ ದಾಖಲಿಸಿಕೊಂಡಿದೆ. ವಿಜ್ಞಾನ ವಿಭಾಗದಲ್ಲಿ ಒಟ್ಟು 63 ವಿದ್ಯಾರ್ಥಿಗಳು ಪರೀಕ್ಷೆ ಬರೆದು ಎಲ್ಲರೂ ಉತ್ತೀರ್ಣರಾಗಿ ಶೇ.100 ಫಲಿತಾಂಶ ಬಂದಿದೆ. 24 ಮಂದಿ ಡಿಸ್ಟಿಂಕ್ಷನ್ ಪಡೆದರು. ಕಲಾ ವಿಭಾಗದಿಂದ 117 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 108 ಮಂದಿ ತೇರ್ಗಡೆಯಾಗಿದ್ದಾರೆ. ಶೇ.92.29 ಫಲಿತಾಂಶ ಬಂದಿದೆ. 6 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಗಳಿಸಿದ್ದಾರೆ. ವಾಣಿಜ್ಯ ವಿಭಾಗದಿಂದ 135 ವಿದ್ಯಾರ್ಥಿಗಳು ಪರೀಕ್ಷೆ ಬರೆದು 130 ಮಂದಿ ಪಾಸಾಗಿದ್ದಾರೆ. ಶೇ.96.66 ಫಲಿತಾಂಶ ದಾಖಲಾಗಿದೆ. 20 ಮಂದಿ ಡಿಸ್ಟಿಂಕ್ಷನ್ ಪಡೆದಿದ್ದಾರೆ.
ರೋಟರಿ ಪಿಯು ಕಾಲೇಜು: ಸುಳ್ಯ ರೋಟರಿ ಪ.ಪೂ. ಕಾಲೇಜು ಶೇ.97 ಫಲಿತಾಂಶ ದಾಖಲಿಸಿದೆ. ವಿಜ್ಞಾನ ವಿಭಾಗದಲ್ಲಿ 70 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅವರಲ್ಲಿ 69 ಮಂದಿ ತೇರ್ಗಡೆಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 24 ವಿದ್ಯಾರ್ಥಿ ಗಳಲ್ಲಿ 23 ವಿದ್ಯಾರ್ಥಿಗಳು ತೇರ್ಗಡೆಯಾಗಿ ಸಂಸ್ಥೆಗೆ ಶೇ.97 ಫಲಿತಾಂಶ ಬಂದಿದೆ.
ಗಾಂಧಿನಗರ ಪಿ.ಯು.ಕಾಲೇಜು: ಗಾಂಧಿನಗರ ಕೆಪಿಎಸ್ ಫಲಿತಾಂಶ ಶೇ.82 ದಾಖಲಿಸಿದೆ. ಕಲಾ ವಿಭಾಗದಲ್ಲಿ 11 ವಿದ್ಯಾರ್ಥಿಗಳಲ್ಲಿ 10 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 36 ವಿದ್ಯಾರ್ಥಿಗಳಲ್ಲಿ 28 ಮಂದಿ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ 15 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 13 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದಾರೆ.