More

    ಆಗಬೇಕಿರುವ ಕೆಲಸಗಳ ಪಟ್ಟಿ ತಯಾರಿಕೆ

    ತಿ.ನರಸೀಪುರ: ವರುಣ ವಿಧಾನಸಭಾ ಕ್ಷೇತ್ರದ ಪ್ರತಿ ಗ್ರಾಮಗಳಿಗೂ ಭೇಟಿ ನೀಡಿ ಜನರ ಅಹವಾಲು ಸ್ವೀಕರಿಸಿ ಗ್ರಾಮಗಳಲ್ಲಿ ಆಗಬೇಕಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಪಟ್ಟಿ ಮಾಡಲಾಗುತ್ತಿದೆ ಎಂದು ವರುಣ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.

    ತಾಲೂಕಿನ ಆಲೆಸ್ತ್ರೀ ಕಟ್ಟೆ ಹುಂಡಿ ಗ್ರಾಮದಲ್ಲಿ ಗುರುವಾರ ಆಯೋಜಿಸಿದ್ದ ಜನ ಸಂಪರ್ಕ ಸಭೆಯಲ್ಲಿ ಜನರ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಆಗಬೇಕಿರುವ ಕೆಲಸ ಕಾರ್ಯಗಳ ಬಗ್ಗೆ ನನಗೆ ಗೊತ್ತಿದೆ. ಆದರೂ ನಾನು ನಿರಂತರವಾಗಿ ಗ್ರಾಮಗಳಿಗೆ ಭೇಟಿ ನೀಡಿ ಮತದಾರರ ಅಹವಾಲು ಸ್ವೀಕರಿಸುತ್ತಿದ್ದೇನೆ. ಆಗಬೇಕಿರುವ ಕೆಲಸ ಕಾರ್ಯಗಳ ಬಗ್ಗೆ ಪಟ್ಟಿ ತಯಾರಿಸಿ ಸರ್ಕಾರದಿಂದ ಅನುದಾನ ತಂದು ಆದ್ಯತೆ ಮೇರೆಗೆ ಕಾಮಗಾರಿಗಳನ್ನು ನಡೆಸಲು ಕ್ರಮ ವಹಿಸುವುದಾಗಿ ಭರವಸೆ ನೀಡಿದರು.

    ಗ್ರಾಮದ ಮುಖಂಡರು ವಿದ್ಯುತ್ ಕಂಬಗಳ ಬದಲಾವಣೆ, ವಿದ್ಯುತ್ ಪರಿವರ್ತಕಗಳ ಅಳವಡಿಕೆ, ಗ್ರಾಮದ ರಸ್ತೆಗಳ ದುರಸ್ತಿ ಸೇರಿದಂತೆ ಇತರ ಸಮಸ್ಯೆಗಳ ಬಗ್ಗೆ ತಿಳಿಸಿದರು. ತಹಸೀಲ್ದಾರ್ ಸುರೇಶ್ ಆಚಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಶೋಭಾ, ಸಹಾಯಕ ಕೃಷಿ ಅಧಿಕಾರಿ ಸುಹಾಸಿನಿ, ಸಿಡಿಪಿಒ ಭವ್ಯಶ್ರೀ, ಆಪ್ತ ಸಹಾಯಕ ಅಧಿಕಾರಿ ಪ್ರದೀಪ್, ವಿಶೇಷಧಿಕಾರಿ ವಿಜಯಕುಮಾರ್, ಎಸ್‌ಡಿಎಂಸಿ ಅಧ್ಯಕ್ಷ ಅರುಣ್ ಕುಮಾರ್, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಕೆಂಪಯ್ಯನ ಹುಂಡಿ ಮಹಾದೇವಣ್ಣ, ಪುರಸಭಾ ಮಾಜಿ ಅಧ್ಯಕ್ಷ ಎನ್. ಸೋಮು, ಸದಸ್ಯ ಬಾದಾಮಿ ಮಂಜು, ತಾಲೂಕು ಕುರುಬರ ಸಂಘದ ಅಧ್ಯಕ್ಷ ಮನ್ನೆಹುಂಡಿ ಮಹೇಶ್ ಮುಂತಾದವರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts