16 C
Bangalore
Saturday, December 7, 2019

ವಸತಿ ನಿಲಯದಲ್ಲಿ ನೀರಿಲ್ಲದೆ ನರಕಯಾತನೆ

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

ವಿಜಯವಾಣಿ ವಿಶೇಷ ದಾಂಡೇಲಿ

ಹಿಂದುಳಿದ ವರ್ಗಗಳ ವಸತಿ ನಿಲಯಗಳಿಗಾಗಿ ಸರ್ಕಾರ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಸಕಲ ಸೌಲಭ್ಯ ಒದಗಿಸುತ್ತಿದೆ. ಆದರೆ, ಆ ಹಣವನ್ನು ಸರಿಯಾಗಿ ಉಪಯೋಗಿಸಿಕೊಳ್ಳದೆ, ವಿದ್ಯಾರ್ಥಿಗಳಿಗೆ ಸೌಲಭ್ಯ ಕಲ್ಪಿಸದೆ ಹೇಗೆಲ್ಲಾ ಪೋಲು ಮಾಡುತ್ತಿದ್ದಾರೆ ಎಂಬುದಕ್ಕೆ ಇಲ್ಲಿದೆ ತಾಜಾ ನಿದರ್ಶನ.

ನಗರದ ಟೌನ್​ಶಿಪ್​ನಲ್ಲಿರುವ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಕ್ಕೆ ಕಳೆದ ಎರಡು ದಿನಗಳಿಂದ ನೀರು ಸರಬರಾಜು ಆಗದೇ ವಿದ್ಯಾರ್ಥಿನಿಯರು ಅನುಭವಿಸಿದ ನರಕಯಾತನೆ ಅಷ್ಟಿಷ್ಟಲ್ಲ.

ಕುಡಿಯಲು ನೀರಿಲ್ಲ ಎಂದರೆ ಹಾಗೋ ಹೀಗೋ ಮಾಡಿ ದುಡ್ಡು ಕೊಟ್ಟು ನೀರು ಖರೀದಿಸಬಹುದು. ಆದರೆ, ಸ್ನಾನ, ಶೌಚ, ಬಟ್ಟೆ ತೊಳೆಯುವುದಕ್ಕೂ ನೀರಿಲ್ಲದೆ ಇದ್ದಾಗ ಸ್ಥಳೀಯ ಪ್ರೆಸ್ ಕ್ಲಬ್​ನವರು ಟ್ಯಾಂಕರ್ ಮೂಲಕ ನೀರು ಒದಗಿಸಿ ಸಮಸ್ಯೆ ದೂರ ಮಾಡಿದ್ದಾರೆ ಎನ್ನುತ್ತಾರೆ ವಿದ್ಯಾರ್ಥಿನಿಯರು.

ಈ ಕುರಿತು ವಾರ್ಡನ್ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ನೀರು ಒದಗಿಸುವಂತೆ ಸ್ಥಳೀಯ ನಗರಸಭೆಗೆ ಮನವಿ ಮಾಡಿಕೊಂಡಾಗ ಗುರುವಾರ ಟ್ಯಾಂಕರ್ ಮೂಲಕ ಪೂರೈಸಿದ್ದಾರೆ.

ಯಾಕೆ ಸಮಸ್ಯೆ?: 2015-16ರಲ್ಲಿ ಈ ವಸತಿ ನಿಲಯವು ನಾಡವರ ಸಮಾಜದ ಕಟ್ಟಡದಲ್ಲಿ ಆರಂಭವಾಗಿ ತಿಂಗಳಿಗೆ 24500 ರೂ. ಬಾಡಿಗೆ ನೀಡಲಾಗುತ್ತಿದೆ. ಕೇವಲ 20 ವಿದ್ಯಾರ್ಥಿಗಳು ಉಳಿದುಕೊಳ್ಳುವ ನಿಲಯದಲ್ಲಿ ಸದ್ಯ 41 ಬಾಲಕಿಯರಿಗೆ ವಸತಿ ವ್ಯವಸ್ಥೆ ಮಾಡಲಾಗಿದೆ. ಇಲ್ಲಿ ಒಂದು ಹಾಲ್, ಎರಡು ಚಿಕ್ಕ ಕೋಣೆ, ಅಡುಗೆ ಮನೆ, ಶೌಚಗೃಹ, ಹಾಗೂ 4 ಸ್ನಾನದ ಕೋಣೆಗಳಿದ್ದು, ನೀರು ಸಂಗ್ರಹಿಸಿಟ್ಟುಕೊಳ್ಳಲು ನೆಲಮಹಡಿಯಲ್ಲಿ ಒಂದು ಹಾಗೂ ಮೇಲ್ಛಾವಣೆಯಲ್ಲಿ ಒಂದು ಸಿಂಟೆಕ್ಸ್ ಇದೆ. ಈ ನೀರು ಯಾವುದಕ್ಕೂ ಸಾಲುವುದಿಲ್ಲ ಎನ್ನುತ್ತಾರೆ ವಸತಿ ನಿಲಯದ ವಾರ್ಡನ್.

11 ಹಾಸ್ಟೆಲ್​ಗಳು: ಹಳಿಯಾಳ ತಾಲೂಕಿನಲ್ಲಿ ಒಟ್ಟು ಬಿಸಿಎಂ ಇಲಾಖೆಯ 11 ಹಾಸ್ಟೆಲ್​ಗಳಿದ್ದು, ಅವುಗಳಲ್ಲಿ ಮೆಟ್ರಿಕ್ ಪೂರ್ವ 5, ಮೆಟ್ರಿಕ್ ನಂತರದ ವೃತ್ತಿಪರ ನರ್ಸಿಂಗ್ 1, ಇಂಜಿನಿಯರಿಂಗ್ 1, ಸಾಮಾನ್ಯ 4 ಒಟ್ಟು 6 ಹಾಸ್ಟೆಲ್​ಗಳಿವೆ.

ಸಿಬ್ಬಂದಿಯ ಕೊರತೆ: ಈಗಿರುವ ವಾರ್ಡ್​ನ್ ಹೆಲನ್ ಸಂತಾನ ಪಿಂಟೋ ಅವರಿಗೆ ನಗರದ ಮೂರು ಹಾಸ್ಟೆಲ್​ಗಳ ಉಸ್ತುವಾರಿ ನೀಡಲಾಗಿದೆ. ಅಡುಗೆ ಕೆಲಸಕ್ಕಾಗಿ ನೇಮಕಾತಿ ಹೊಂದಿ ಪದೋನ್ನತಿ ಪಡೆದು ವಾರ್ಡನ್ ಹುದ್ದೆಗೆ ನೇಮಕಾತಿಯಾದ ಇವರಿಗೆ ಮೂರು ಹಾಸ್ಟೆಲ್​ಗಳ ಉಸ್ತುವಾರಿ ಕಷ್ಟವಾಗುತ್ತಿದೆ. ಉ.ಕ. ಜಿಲ್ಲೆಯ 101 ಬಿಸಿಎಂ ಹಾಸ್ಟೆಲ್​ಗಳಲ್ಲಿ ಕೇವಲ 38 ವಾರ್ಡನ್​ಗಳಿದ್ದು, ಇಡೀ ರಾಜ್ಯದಲ್ಲಿಯೇ ಶೇ. 70 ರಷ್ಟು ಬಿಸಿಎಂ ಹಾಸ್ಟೆಲ್​ಗಳಲ್ಲಿ ಸಿಬ್ಬಂದಿ ಕೊರತೆಯಿದೆ.

ಸ್ವಂತ ಕಟ್ಟಡಕ್ಕೆ ಬೇಕಿದೆ ಹಣ: ದಾಂಡೇಲಿಯಲ್ಲಿ ಬಿಸಿಎಂ ಬಾಲಕರ ಹಾಸ್ಟೆಲ್ ಕಟ್ಟಡಕ್ಕಾಗಿ 20 ಗುಂಟೆ ಜಾಗವನ್ನು ನಿರ್ಮಲನಗರದಲ್ಲಿ ಗುರುತಿಸಲಾಗಿದೆ. ಅದೇ ರೀತಿ ಅಂಬೇವಾಡಿಯ ಕೌಶಲ ಅಭಿವೃದ್ಧಿ ಕೇಂದ್ರದ ಬಳಿ 1 ಎಕರೆ ಭೂಮಿಯನ್ನು ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ಹಾಸ್ಟೆಲ್​ಗಾಗಿ ಜಾಗೆ ಮಂಜೂರಾಗಿದೆ. ಆದರೆ, ಸರ್ಕಾರ ಕಟ್ಟಡ ನಿರ್ವಣಕ್ಕೆ ಶೀಘ್ರ ಹಣ ಬಿಡುಗಡೆ ಮಾಡಬೇಕಾಗಿದೆ.

Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...