

ಬೆಂಗಳೂರು: ಸ್ಯಾಂಡಲ್ವುಡ್ನ ಕ್ಯೂಟ್ ಕಪಲ್ ವಸಿಷ್ಠ ಸಿಂಹ, ಹರಿಪ್ರಿಯಾ ಉಡುಪಿ ಕೃಷ್ಣ ಮಠಕ್ಕೆ ಭೇಟಿ ಕೊಟ್ಟಿದ್ದಾರೆ. ಈ ವೇಳೆ ನೆಲದ ಮೇಲೆ ಊಟಾ ಮಾಡಿ ನೆಲಭೋಜನ ಹರಕೆಯ ಸೇವೆಯನ್ನು ತೀರಿಸಿದ್ದಾರೆ.
ನಟಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜನವರಿ 26ರಂದು ಗಣರಾಜ್ಯ ದಿನದಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಮೈಸೂರಿನ ಸಚ್ಚಿದಾನಂದ ಆಶ್ರಮದಲ್ಲಿ ಇಬ್ಬರ ಮದುವೆ ಸಮಾರಂಭ ನಡೆದಿತ್ತು. ಇಬ್ಬರು ಸರಳವಾಗಿ ಹಸೆಮಣೆ ಏರಿದ್ದು ಫೋಟೋಗಳು ಎಲ್ಲಾ ಕಡೆ ವೈರಲ್ ಆಗಿತ್ತು.
ಇತ್ತೀಚೆಗಷ್ಟೇ ಈ ಜೋಡಿ ಮದುವೆಯಾದ ನಂತರ ಮೊದಲ ಬಾರಿಗೆ ಮಂತ್ರಾಲಯಕ್ಕೆ ತೆರಳಿ ರಾಯರ ದರ್ಶನ ಮಾಡಿದ್ದರು. ಮಂತ್ರಾಲಯದ ಮಠಕ್ಕೆ ಆಗಮಿಸಿದ ಈ ದಂಪತಿ ಮೊದಲು ರಾಯರ ಮೂಲ ಬೃಂದಾವನದ ದರ್ಶನ ಪಡೆದರು. ಇದೀಗ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ದಂಪತಿ ಗುರುವಾರ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ನೆಲಭೋಜನ ಹರಕೆಯನ್ನು ತೀರಿಸಿದ್ದಾರೆ.
ಉಡುಪಿ ಕೃಷ್ಣ ಮಠಕ್ಕೆ ಆಗಮಿಸಿದ ವಸಿಷ್ಠ ಸಿಂಹ, ಹರಿಪ್ರಿಯಾ ದಂಪತಿ ಕೃಷ್ಣದರ್ಶನ ಪಡೆದಿದ್ದಾರೆ. ಮುಖ್ಯಪ್ರಾಣದೇವರ ಸನ್ನಿಧಿಯಲ್ಲಿ ನೆಲಭೋಜನ ಹರಕೆಯ ಸೇವೆಯನ್ನು ತೀರಿಸಿದರು. ಕಲಾವಿದ ಮಧೂರು ನಾರಾಯಣ ಶರಳಾಯ ಉಪಸ್ಥಿತರಿದ್ದರು. ಇದಕ್ಕೆ ಸಂಬಂಧಿಸಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.