More

    ಕೇಂದ್ರದಿಂದ ಕರ್ನಾಟಕ ಕಡೆಗಣನೆ

    ಮೈಸೂರು: ಅತಿವೃಷ್ಟಿಯಿಂದ ರಾಜ್ಯಕ್ಕೆ ಅಪಾರ ಹಾನಿಯಾಗಿದ್ದು, ಸಾಕಷ್ಟು ಜನ ಸಾವಿಗೀಡಾಗಿದ್ದರೂ ಕೇಂದ್ರ ಸರ್ಕಾರ ಪರಿಹಾರ ನೀಡುವ ವಿಚಾರದಲ್ಲಿ ಕರ್ನಾಟಕವನ್ನು ಕಡೆಗಣಿಸಿದೆ ಎಂದು ಆರೋಪಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಭಾನುವಾರ ರೈಲ್ವೆ ನಿಲ್ದಾಣದ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
    ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕವನ್ನು ಗಣನೆಗೆ ತೆಗೆದುಕೊಂಡಿಲ್ಲ. ನೆರೆ ಪರಿಹಾರ ಹಣ ಬಿಡುಗಡೆ ಮಾಡಿಲ್ಲ. ಅವರಿಗೆ ಕನ್ನಡ ರಾಜ್ಯದ ಬಗ್ಗೆ ಸ್ವಲ್ಪವೂ ಅಭಿಮಾನ ಇಲ್ಲ. ಉತ್ತರ ಕರ್ನಾಟಕದ ಗೋಳು ಹೇಳತೀರದು. ಈ ಬಗ್ಗೆ ಕರ್ನಾಟಕದ ಲೋಕಸಭಾ ಸದಸ್ಯರು ಬಾಯಿ ಬಿಡುತ್ತಿಲ್ಲ ಎಂದು ಆರೋಪಿಸಿದರು.
    ರಾಜ್ಯ ಸರ್ಕಾರ ರಾಮನಗರ ಹೆಸರು ಬದಲಿಸಿ ಮತ್ತೊಂದು ಬೆಂಗಳೂರು ಮಾಡಲು ಹೊರಟಿದೆ. ಕೆಂಗಲ್ ಹನುಮಂತಯ್ಯ ಅವರು ಈ ಹೆಸರು ಇಟ್ಟಿದ್ದು, ಯಾವುದೇ ಕಾರಣಕ್ಕೂ ಹೆಸರು ಬದಲಾಯಿಸಬಾರದು ಎಂದು ಒತ್ತಾಯಿಸಿದರು. ತಮಿಳುನಾಡಿನಲ್ಲಿ ಕನ್ನಡದವರ ವಾಹನ ಮತ್ತು ಬಾವುಟಕ್ಕೆ ಬೆಂಕಿ ಇಟ್ಟಿದ್ದಾರೆ. ಇದೇ ರೀತಿಯಲ್ಲಿ ಮುಂದುವರೆದರೆ ಕರ್ನಾಟಕ್ಕೆ ಒಂದೇ ಒಂದು ತಮಿಳುನಾಡು ಮತ್ತು ಕೇರಳ ವಾಹನಗಳು ಬರಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಮುಖಂಡರಾದ ಮೂಗೂರು ನಂಜುಂಡ ಸ್ವಾಮಿ, ಚಂದ್ರಶೇಖರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts