ಅಥಣಿ ಗ್ರಾಮೀಣ: ಅಥಣಿ ತಾಲೂಕಿನ ನಾಗನೂರ ಪಿ.ಕೆ.ಗ್ರಾಮದ ಶ್ರೀ ಸಿದ್ಧಾರೂಢ ಮಠದಲ್ಲಿ ಅ.21ರಿಂದ ಅ.23ರ ವರೆಗೆ ಇಂಚಲದ ಡಾ.ಶಿವಾನಂದ ಭಾರತಿ ಸ್ವಾಮೀಜಿ ಸಾನ್ನಿಧ್ಯದಲ್ಲಿ 47ನೇ ವೇದಾಂತ ಪರಿಷತ್ ಕಾರ್ಯಕ್ರಮ ಜರುಗಲಿದೆ.
ಅ.21, 22ರಂದು ಸಂಜೆ 6 ರಿಂದ 8.30 ಗಂಟೆವರೆಗೆ ನಡೆಯುವ ವೇದಾಂತ ಪರಿಷತ್ ಕಾರ್ಯಕ್ರಮದಲ್ಲಿ ವಿಜಯಪುರ ಷಣ್ಮುಖಾರೂಢಮಠದ ಅಭಿನವ ಸಿದ್ಧಾರೂಢ ಸ್ವಾಮೀಜಿ, ಹಂಪಿ ಶಿವರಾಮವರೂಢಾಶ್ರಮದ ವಿದ್ಯಾನಂದ ಭಾರತಿ ಸ್ವಾಮೀಜಿ, ಹುಬ್ಬಳ್ಳಿ ಜಡಿಸಿದ್ಧಯೋಗಿಂದ್ರಮಠದ ರಾಮಾನಂದ ಭಾರತಿ ಸ್ವಾಮೀಜಿ, ಇಂಚಲದ ಪೂರ್ಣಾನಂದ ಭಾರತಿ ಸ್ವಾಮೀಜಿ, ತುಂಗಳ ಸಿದ್ಧಲಿಂಗ ಕೈವಲ್ಯಾಶ್ರಮದ ಮಾತೋಶ್ರೀ ಅನುಸೂಯಾ ತಾಯಿ, ಹುಣಶ್ಯಾಳದ ನಿಜಗುಣ ದೇವರು, ಹಡಗಿನಹಾಳದ ಮಲ್ಲೇಶ್ವರ ಶರಣರು, ಹುಬ್ಬಳ್ಳಿಯ ಸಚ್ಚಿದಾನಂದ ಸ್ವಾಮೀಜಿ, ಕೌಲಗುಡ್ಡದ ಅಮರೇಶ್ವರ ಮಹಾರಾಜರು, ಸವಟಗಿಯ ನಿಂಗಯ್ಯ ಸ್ವಾಮೀಜಿ ಪಾಲ್ಗೊಳ್ಳುವರು. ಪ್ರವಚನ ಬಳಿಕ ಶ್ರೀಗಳ ಮಹಾಪೂಜೆ ನೆರವೇರಿಸುವರು.
ಅ.23ರಂದು ಮಧ್ಯಾಹ್ನ 12 ಗಂಟೆಗೆ ಶ್ರೀಗಳ ಆಶೀರ್ವಾದದೊಂದಿಗೆ ಸಮಾರೋಪ ಸಮಾರಂಭ ಜರುಗಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 18-2