ಮೈತ್ರಿ ನಂಬಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಹೀನಾಯ ಸೋಲಾಯಿತು: ವೀರಪ್ಪ ಮೊಯ್ಲಿ

ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್​ನೊಂದಿಗೆ ಮೈತ್ರಿ ಮಾಡಿಕೊಂಡಿದ್ದರಿಂದ ಕಾಂಗ್ರೆಸ್​ಗೆ ಹೀನಾಯ ಸೋಲುಂಟಾಯಿತು. ಮೈತ್ರಿ ಇಲ್ಲದಿದ್ದರೆ ರಾಜ್ಯದಲ್ಲಿ ಕಾಂಗ್ರೆಸ್​ಗೆ ಹೆಚ್ಚಿನ ಸ್ಥಾನ ಸಿಗುತ್ತಿತ್ತು ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಅಭಿಪ್ರಾಯಪಟ್ಟಿದ್ದಾರೆ.

ಚಿಕ್ಕಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸರ್ಕಾರ ಉಳಿಸಿಕೊಳ್ಳಲು ಹರಸಾಹನ ಪಡುವುದರ ಬದಲು ಪಕ್ಷ ಸಂಘಟನೆ ಮಾಡಬೇಕು. ಲೋಕಸಭೆ ಚುನಾವಣೆ ನಂತರ ಸೋಲಿನ ಕುರಿತು ಆತ್ಮಾವಲೋಕನ ಮಾಡಿಕೊಂಡಿಲ್ಲ. ಸಮ್ಮಿಶ್ರ ಸರ್ಕಾರ ಜನರ ಭಾವನೆಗಳಿಗೆ ಸ್ಪಂದಿಸದೇ ಇರುವುದೇ ನಾವು ಸೋಲಲು ಪ್ರಮುಖ ಕಾರಣ ಎಂದು ಮೊಯ್ಲಿ ತಿಳಿಸಿದರು.

ಮಾಜಿ ಪ್ರಧಾನ ಮಂತ್ರಿ ಎಚ್​.ಡಿ. ದೇವೇಗೌಡರು ಇಂದು ಒಂದು ಹೇಳಿಕೆ ಕೊಡುತ್ತಾರೆ, ನಾಳೆ ಅದಕ್ಕೆ ವ್ಯತಿರಿಕ್ತವಾದ ಹೇಳಿಕೆ ಕೊಡುತ್ತಾರೆ. ಆದರೆ, ನಾನು ದೇವೇಗೌಡರ ರೀತಿ ಹೇಳಿಕೆ ಕೊಡುವುದಿಲ್ಲ. ನಾನು ಕೊಟ್ಟ ಹೇಳಿಕೆಯನ್ನು ವಾಪಸ್​ ಪಡೆಯುವುದಿಲ್ಲ. ದೇವೇಗೌಡರ ಬಗ್ಗೆ ಮಾತನಾಡುವಷ್ಟು ದೊಡ್ಡವನು ನಾನಲ್ಲ ಎಂದು ವೀರಪ್ಪ ಮೊಯ್ಲಿ ಪರೋಕ್ಷವಾಗಿ ಜೆಡಿಎಸ್​ ವರಿಷ್ಠ ಹಾಗೂ ಜೆಡಿಎಸ್​ ವಿರುದ್ಧ ಕಿಡಿಕಾರಿದರು.

Leave a Reply

Your email address will not be published. Required fields are marked *