More

    ವೀರಶೈವ ಲಿಂಗಾಯತ ಸಮುದಾಯದ ಅಭಿವೃದ್ದಿ, ಸಾಲ ಯೋಜನೆಗಳಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

    ಗದಗ: ವೀರಶೈವ-ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ಜನರ (ಪ್ರವರ್ಗ-III  ಬಿ ) ಅಭಿವೃದ್ದಿಗಾಗಿ 2023-24 ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ  ಶೈಕ್ಷಣಿಕ ಸಾಲ ಯೋಜನೆಗಳಾದ ಬಸವ ಬೆಳಗು ಯೋಜನೆ, ವಿದೇಶ ವಿದ್ಯಾ ವಿಕಾಸ ಯೋಜನೆ, ವಿದೇಶ ವಿದ್ಯಾ ವಿಕಾಸ ಯೋಜನೆ , ಜೀವ ಜಲ ಯೋಜನೆ, ಕಾಯಕ ಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆಗಳಿಗಾಗಿ  ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.  ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನವಾಗಿದೆ.  

    ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿರಬೇಕು. ನಿಗಮವು ಅನುಷ್ಠಾನಗೊಳಿಸುವ ಈ ಮೇಲ್ಕಂಡ ಯೋಜನೆಗಳಲ್ಲಿ ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ಅಧ್ಯಕ್ಷರು/ ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್‍ಲೈನ್‍ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ. ಅರ್ಹ ಫಲಾಪೇಕ್ಷಿಗಳು ಗ್ರಾಮಒನ್/ ಬೆಂಗಳೂರು ಒನ್/ ಕರ್ನಾಟಕಒನ್ ನಾಗರೀಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧುಲ್ಲಿ ಅರ್ಜಿಗಳನ್ನು ಸಲ್ಲಿಸಬೇಕಾಗಿರುತ್ತದೆ. ಕಳೆದ ಮೂರು ವರ್ಷದಿಂದ ಸರ್ಕಾರದ ಯಾವುದೇ ನಿಗಮ/ ಇಲಾಖೆಗಳಲ್ಲಿ ಯೋಜನೆಯ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಸಲ್ಲಿಸಬೇಕಾದ ದಾಖಲಾತಿಗಳನ್ನು ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಜಿಲ್ಲಾ ಆಡಳಿತ ಭವನ, ರೂ.ನಂ:202, 2ನೇ ಮಹಡಿ, ಹುಬ್ಬಳ್ಳಿ ರಸ್ತೆ, ಗದಗ ಈ ವಿಳಾಸಕ್ಕೆ ಹಾಗೂ ಯೋಜನೆಗಳ ಮಾರ್ಗಸೂಚಿಗಳನ್ನು, ಹೆಚ್ಚಿನ ವಿವರಗಳನ್ನು  https://kvldcl.karnataka.gov.in ಇಲ್ಲಿ ತಿಳಿಯಬಹುದಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts