More

    ವೀರಶೈವ ಲಿಂಗಾಯತ ಮಹಾಸಭಾದ ಮಹಾ ಅಧಿವೇಶನ

    ಧಾರವಾಡ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 24ನೇ ಮಹಾ ಅಧಿವೇಶನವು ದಾವಣಗೆರೆಯ ಬಾಪೂಜಿ ಎಂ.ಬಿ.ಎ ಕಾಲೇಜು ಮೈದಾನದಲ್ಲಿ ಡಿ. 23 ಹಾಗೂ 24ರಂದು ಜರುಗಲಿದೆ. ಜಿಲ್ಲೆಯಿಂದ ಸುಮಾರು 20 ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಮಹಾಸಭಾದ ಹಿರಿಯ, ಮಾಜಿ ಸಭಾಪತಿ ವೀರಣ್ಣ ಮತ್ತಿಗಟ್ಟಿ ಹೇಳಿದರು.

    ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 23ರಂದು ಶ್ರೀಶೈಲ ಪೀಠದ ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಸಿರಿಗೆರೆಯ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಸಿದ್ಧಗಂಗಾಮಠದ ಸಿದ್ಧಲಿಂಗ ಸ್ವಾಮೀಜಿ, ಹುಬ್ಬಳ್ಳಿಯ ಮೂರು ಸಾವಿರ ಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ, ಇತರರ ಸಾನ್ನಿಧ್ಯದಲ್ಲಿ ಸುತ್ತೂರಿನ ವೀರಸಿಂಹಾಸನ ಮಹಾಸಂಸ್ಥಾನ ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮಹಾಅಧಿವೇಶನಕ್ಕೆ ಚಾಲನೆ ನೀಡುವರು. ಮಹಾಸಭಾ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು. ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಎಂ.ಬಿ. ಪಾಟೀಲ, ಎಸ್.ಎಸ್. ಮಲ್ಲಿಕಾರ್ಜುನ, ಇತರರು ಉಪಸ್ಥಿತರಿರುವರು ಎಂದರು.

    24ರಂದು ಮಧ್ಯಾಹ್ನ 3 ಗಂಟೆಗೆ ಮಹಾಸಭಾ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆಯಲ್ಲಿ ನಡೆಯುವ ಬಹಿರಂಗ ಅಧಿವೇಶನದಲ್ಲಿ ನಿರ್ಣಯಗಳ ಮಂಡನೆ ಮಡಲಾಗುವುದು. ಸಮಾರೋಪದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಈಶ್ವರ ಖಂಡ್ರೆ, ಲಕ್ಷ್ಮ್ಮಣ ಸವದಿ ಹಾಗೂ ಇತರರು ಪಾಲ್ಗೊಳ್ಳುವರು. ನಂತರ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿವಿಧ ಕಲಾ ತಂಡಗಳಿಂದ ವಚನ ನೃತ್ಯರೂಪಕ, ವಚನ ಗೀತೆ, ವಚನ ಗಾಯನ ಕಾರ್ಯಕ್ರಮಗಳು ಜರುಗಲಿವೆ ಎಂದರು.

    ಮುರುಘಾಮಠದ ಡಾ. ಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿದರು. ಮಹಾಸಭಾದ ಜಿಲ್ಲಾಧ್ಯಕ್ಷ ಗುರುರಾಜ ಹುಣಸಿಮರದ, ಟಿ.ಎಸ್. ಪಾಟೀಲ, ವಿಜಯಲಕ್ಷ್ಮೀ, ಶಿವಶರಣ ಕಲಬಶೆಟ್ಟರ್, ಇತರರು ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts