Wednesday, 14th November 2018  

Vijayavani

ಆ್ಯಂಬಿಡೆಂಟ್ ಕೋಟಿ ಕೋಟಿ ಡೀಲ್ ಪ್ರಕರಣ - ಕೆಲವೇ ಕ್ಷಣಗಳಲ್ಲಿ ಜಾಮೀನು ಅರ್ಜಿ ತೀರ್ಪು- ಬಿಡುಗಡೆಯಾಗ್ತಾರಾ ಗಣಿಧಣಿ..?        ನಾನು ಸಕ್ಕರೆ, ಮಾಧ್ಯಮಗಳು ಇರುವೆ - ನಾನು ಹೋದ್ಕಡೆ ನನ್ನನ್ನೇ ಹಿಂಬಾಲಿಸುತ್ತಾರೆ -  ಜಂಭ ಕೊಚ್ಚಿಕೊಂಡ ನಟಿ ಶ್ರುತಿ        ನಮ್ಮ ತಂದೆನೂ ಬ್ರಾಹ್ಮಣರನ್ನ ಸೋಲಿಸಿದ್ರು - ನಾನೂ ಈಗ ಬ್ರಾಹ್ಮಣರ ವ್ಯಕ್ತಿಯನ್ನು ಸೋಲಿಸಿದ್ದೇನೆ - ಸಿದ್ದು ನ್ಯಾಮಗೌಡ ಹೇಳಿಕೆ        ಮಹದಾಯಿ ನದಿ ನೀರು ಹಂಚಿಕೆ ವಿಚಾರ - ಇದೇ 17ರಂದು ಸರ್ವೆ ಪಕ್ಷ ಸಭೆ ಕರೆ ಸಿಎಂ- ಬಿಎಸ್​ವೈ, ದಿನೇಶ್​ ಗುಂಡೂರಾವ್​ಗೆ ಪತ್ರ        ರಫೇಲ್ ಖರೀದಿ ಅವ್ಯವಹಾರ ಆರೋಪ - ಸುದೀರ್ಘ 5 ಗಂಟೆಗಳ ಕಾಲ ನಡೆದ ವಿಚಾರಣೆ ಮುಕ್ತಾಯ - ತೀರ್ಪು ಕಾಯ್ದಿರಿಸಿದ ಸುಪ್ರೀಂ        ವೈಟ್​​ಹೌಸ್​​ನಲ್ಲಿ ದೀಪಾವಳಿ ಸಂಭ್ರಮ - ದೀಪ ಬೆಳಗಿ ಹಿಂದುಗಳಿಗೆ ಶುಭಕೋರಿದ ಟ್ರಂಪ್ - ಮೋದಿ ನನ್ನ ಸ್ನೇಹಿತ ಎಂದ ಟ್ರಂಪ್​       
Breaking News

ವೀರಶೈವ-ಲಿಂಗಾಯತ ಒಂದಾಗಬೇಕು

Tuesday, 12.06.2018, 5:53 AM       No Comments

ಬಾಗಲಕೋಟೆ: ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜ ಒಂದು ಆಲದ ಮರವಿದ್ದಂತೆ, ಇದರ ನೆರಳಿನಲ್ಲಿ ಅನೇಕ ಸಮಾಜಗಳು ಮುಂದೆ ಬಂದಿವೆ. ಅದರಂತೆ ಪಂಚಮಸಾಲಿ ಸಮಾಜವು ಶಕ್ತಿಯುತ ಸಂಘಟಿತರಾಗಿ ಎಲ್ಲ ಕ್ಷೇತ್ರಗಳಲ್ಲಿಯೂ ಮುಖ್ಯವಾಹಿನಿಗೆ ಬರಬೇಕೆಂದು ಶಾಸಕ ಡಾ. ವೀರಣ್ಣ ಚರಂತಿಮಠ ಹೇಳಿದರು.

ಬಾಗಲಕೋಟೆ ತಾಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜವು ನಗರದ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಪಂಚಮಸಾಲಿ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸಿ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಎಲ್ಲ ನೆರವು ನೀಡುವುದಾಗಿ ಭರವಸೆ ನೀಡಿದರು.

ವೀರಶೈವ ಲಿಂಗಾಯತ ಧರ್ಮ ಒಡೆಯಲು ಮುಂದಾದವರಿಗೆ ಚುನಾವಣೆಯಲ್ಲಿ ಜನತೆಯೇ ತಕ್ಕ ಉತ್ತರ ನೀಡಿದ್ದಾರೆ. ಸದ್ಯ ವೀರಶೈವ-ಲಿಂಗಾಯತ ಸಮಾಜ ಒಂದಾಗಬೇಕು ಎನ್ನುವ ನಿಟ್ಟಿನಲ್ಲಿ ರಾಜ್ಯದಲ್ಲಿ ನಡೆದಿರುವ ಬೆಳವಣಿಗೆಗಳು ಒಳ್ಳೆಯದು. ರಾಜ್ಯದಲ್ಲಿ ಜೆಡಿಎಸ್ – ಕಾಂಗ್ರೆಸ್ ಪಕ್ಷಗಳು ಜನಾದೇಶದ ವಿರುದ್ಧ ಅಪವಿತ್ರ ಮೈತ್ರಿಯೊಂದಿಗೆ ಅಸ್ತಿತ್ವಕ್ಕೆ ಬಂದಿವೆ. ಇದು ಬಹಳ ದಿನಗಳ ಕಾಲ ಉಳಿಯಲ್ಲ ಎಂದರು.

ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜ ಸಂಘಟಿತರಾಗಿ ಆಡಳಿತದ ವೈಖರಿ, ಅಭಿವೃದ್ಧಿಯ ಬಗ್ಗೆ ಸೂಕ್ಷ್ಮ ವಿಚಾರಗಳ ಬಗ್ಗೆ ಚಿಂತನೆ ಮಾಡಿ ಎಲ್ಲ ಕ್ಷೇತ್ರಗಳಲ್ಲಿಯೂ ಮುನ್ನಡೆ ಸಾಧಿಸಬೇಕು. ಕ್ಷೇತ್ರದ 83 ಹಳ್ಳಿಗಳಿಗೆ ಸಂಚರಿಸಿ ತಮ್ಮ ಗೆಲುವಿಗೆ ನೆರವಾದ ಜನತೆಗೆ ಕೃತಜ್ಞತೆ ಸಲ್ಲಿಸುತ್ತಿದ್ದು, ಬಾಗಲಕೋಟೆಯನ್ನು ಮಾದರಿ ಕ್ಷೇತ್ರವಾಗಿ ಅಭಿವೃದ್ಧಿಪಡಿಸುವ ಗುರಿ ಹೊಂದಲಾಗಿದೆ. ಇದಕ್ಕೆ ಕ್ಷೇತ್ರದ ಜನತೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಬಾಗಲಕೋಟೆ ಮತಕ್ಷೇತ್ರದಲ್ಲಿ ತಾವು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಲು ಸಮಾಜದ ಕೊಡುಗೆ ಅಪಾರವಾಗಿದೆ. ನಗರ – ಗ್ರಾಮೀಣ ಭಾಗದಲ್ಲಿ ಸಮಾಜದ ಅನೇಕ ಮುಖಂಡರು ತಮ್ಮೊಂದಿಗಿದ್ದು, ಹೆಚ್ಚಿನ ಮತಗಳ ಅಂತರದಿಂದ ಜಯ ಸಾಧಿಸಲು ನೆರವಾಗಿದ್ದಾರೆ ಎಂದರು.

ವಿಧಾನ ಪರಿಷತ್ ಮಾಜಿ ಸದಸ್ಯ ನಾರಾಯಣಸಾ ಭಾಂಡಗೆ, ವೀರಶೈವ ಲಿಂಗಾಯತ ಸಮಾಜದ ತಾಲೂಕಾಧ್ಯಕ್ಷ ನಾಗರಾಜ ಕೊಟಗಿ, ಕಾರ್ಯದರ್ಶಿ ಬಸವರಾಜ ಬಗಲಿ, ಶಿವಾನಂದ ಅನಾಮಿ, ಕಳಕಪ್ಪ ಬಾದೋಡಗಿ, ಬಸವರಾಜ ರಾಜೂರ, ಕೆ.ಎಂ. ಕಳ್ಳಿಗುಡ್ಡ, ಶಿವಾನಂದ ಗಬ್ಬೂರ, ಎಸ್.ಸಿ. ಬಿರಾದಾರ, ಶರಣಪ್ಪ ಯಂಡಿಗೇರಿ, ರವಿ ಪಟ್ಟಣದ, ಉಮೇಶ ದೇವನಾಳ, ಸಂಗಣ್ಣ ಶಿರೂರ ಮತ್ತಿತರರಿದ್ದರು. ವಿರೂಪಾಕ್ಷಪ್ಪ ಕಟಗೇರಿ ಸ್ವಾಗತಿಸಿದರು. ಬಸವರಾಜ ಕುಬಕಡ್ಡಿ ನಿರೂಪಿಸಿದರು. ಪ್ರಶಾಂತ ಕಗ್ಗೋಡ ವಂದಿಸಿದರು.

ಬಾಗಲಕೋಟೆ ಮತಕ್ಷೇತ್ರದ ಜನತೆ ತಮ್ಮನ್ನು ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಿದ್ದಾರೆ, ಅದಕ್ಕಾಗಿ ಕ್ಷೇತ್ರದಾದ್ಯಂತ ಸಂಚರಿಸಿ ಕೃತಜ್ಞತೆ ಸಲ್ಲಿಸಿದ್ದೇನೆ. ಜನತೆಯ ಬೇಡಿಕೆಗಳಿಗೆ ಸ್ಪಂದಿಸಿ ನಗರ ಹಾಗೂ ಗ್ರಾಮೀಣ ಮಟ್ಟದಲ್ಲಿ ಮೂಲ ಸೌಕರ್ಯ ಕಲ್ಪಿಸಲು ಹೆಚ್ಚಿನ ಆದ್ಯತೆ ನೀಡುತ್ತೇನೆ.

ಡಾ. ವೀರಣ್ಣ ಚರಂತಿಮಠ

ಶಾಸಕರು, ಬಾಗಲಕೋಟೆ

Leave a Reply

Your email address will not be published. Required fields are marked *

Back To Top