More

    ವೀರಶೈವ ಜಂಗಮರಿಗೆ ಎಸ್ಸಿ ಪ್ರಮಾಣ ಪತ್ರಕ್ಕೆ ವಿರೋಧ; ಹರಿಹರ ತುಂಗಭದ್ರಾ ನದಿಯಲ್ಲಿ ನಿಂತು ಪ್ರತಿಭಟನೆ

    ಹರಿಹರ: ವೀರಶೈವ ಲಿಂಗಾಯತ ಜಂಗಮರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ವಿತರಣೆ ಖಂಡಿಸಿ ದಸಂಸ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ಕಾರ್ಯಕರ್ತರು ಹಾಗೂ ಬೇಡ ಜಂಗಮ ಸಮುದಾಯದ ಸದಸ್ಯರು ಶುಕ್ರವಾರ ತುಂಗಭದ್ರಾ ನದಿಯಲ್ಲಿ ನಿಂತು ವಿನೂತನವಾಗಿ ಪ್ರತಿಭಟನೆ ನಡೆಸಿದರು.

    ಪ್ರತಿಭಟನೆ ವೇಳೆ ದಸಂಸ ತಾಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಮಾತನಾಡಿ, ಎಸ್‌ಸಿ ಮತ್ತು ಎಸ್‌ಟಿ ಭೂ ಪರಭಾರೆ ನಿಷೇಧ (ಪಿಟಿಸಿಎಲ್) ಕಾಯ್ದೆಯನ್ನು ಮತ್ತಷ್ಟು ಬಲಗೊಳಿಸಬೇಕು. ವೀರಶೈವ ಲಿಂಗಾಯತ ಜಂಗಮರು ಎಸ್‌ಸಿ ಪ್ರಮಾಣ ಪತ್ರ ಪಡೆದ ಪ್ರಕರಣಗಳನ್ನು ಪತ್ತೆ ಹಚ್ಚಿ ತ್ವರಿತವಾಗಿ ಇತ್ಯರ್ಥ ಮಾಡಲು ಪ್ರತಿ ಜಿಲ್ಲೆಯಲ್ಲೂ ವಿಶೇಷ ನ್ಯಾಯಾಲಯ ಸ್ಥಾಪಿಸಬೇಕು ಎಂದು ಆಗ್ರಹಿಸಿದರು.

    ಅಧಿಕಾರಿಗಳನ್ನು ದಾರಿ ತಪ್ಪಿಸುತ್ತಿರುವ, ದುರುದ್ದೇಶದಿಂದ ಸ್ಥಾಪಿಸಿರುವ ಅಖಿಲ ಕರ್ನಾಟಕ ಡಾ.ಅಂಬೇಡ್ಕರ್ ಬೇಡ ಜಂಗಮ ಪರಿಶಿಷ್ಟ ಜಾತಿ ರಕ್ಷಣಾ ವೇದಿಕೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಕಾನೂನು ಬಾಹಿರವಾಗಿ ಜಾತಿ ಪ್ರಮಾಣ ಪತ್ರ ಪಡೆದು ದುರ್ಬಳಕೆ ಮಾಡಿಕೊಂಡವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕು. ಇಲ್ಲದಿದ್ದರೆ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

    ನಂತರ ಮೆರವಣಿಗೆ ಮೂಲಕ ತಹಸೀಲ್ದಾರ್ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು, ಗ್ರೇಡ್-2 ತಹಸೀಲ್ದಾರ್ ಶಶಿಧರಯ್ಯ ಮೂಲಕ ಮುಖ್ಯಮಂತ್ರಿ, ಸಮಾಜ ಕಲ್ಯಾಣ ಸಚಿವರು ಮತ್ತು ಪ್ರತಿಪಕ್ಷದ ನಾಯಕರಿಗೆ ಮನವಿ ಸಲ್ಲಿಸಿದರು.

    ದಸಂಸ ಜಿಲ್ಲಾ ಸಂಚಾಲಕ ಕುಂದವಾಡ ಮಂಜುನಾಥ, ತಾಪಂ ಮಾಜಿ ಸದಸ್ಯ ಅಜ್ಜಾ ನಾಯ್ಕ, ಸಂಚಾಲಕ ಶಶಿಕುಮಾರ್, ಪ್ರದೀಪ್ ಕುಮಾರ್, ವಾಸನ ಗ್ರಾಪಂ ಅಧ್ಯಕ್ಷ ಗದಿಗೆಪ್ಪ, ಹೊಸಪಾಳ್ಯ ಗ್ರಾಪಂ ಸದಸ್ಯರಾದ ಪರಶುರಾಮ್, ಕಡ್ಲೆಗೊಂದಿ ತಿಮ್ಮಣ್ಣ, ಯುವರಾಜ, ಚೌಡಪ್ಪ, ಕರಿಬಸಪ್ಪ, ಹಾಲೇಶ್, ರಾಜು, ಹನುಮಂತ, ಸೋಮ, ನಿಂಗರಾಜ್ ಗಾಂದಿನಗರ, ಮಹಾಂತೇಶ್ ಪೈಲ್ವಾನ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts