More

    ಡಿ.23ರಿಂದ ವೀರಶೈವ ಮಹಾಸಭಾ ಅಧಿವೇಶನ: ಒಬಿಸಿ ಪಟ್ಟಿಗೆ ಸೇರಿಸಲು ಮನವಿ ಸಲ್ಲಿಕೆಗೆ ನಿರ್ಣಯ

    ದಾವಣಗೆರೆ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 23ನೇ ಮಹಾ ಅಧಿವೇಶನ ಡಿ. 23ರಿಂದ 25ರವರೆಗೆ ದಾವಣಗೆರೆಯ ಎಂಬಿಎ ಕಾಲೇಜು ಮೈದಾನದಲ್ಲಿ ನಡೆಯಲಿದೆ. ನಗರದ ಅಪೂರ್ವ ಹೋಟೆಲ್ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು. ವೀರಶೈವ, ಲಿಂಗಾಯತ ಎರಡೂ ಒಂದೇ ಎಂದು ಜಾಗೃತಿ ಮೂಡಿಸುವ ಜತೆಗೆ ಸಮುದಾಯವನ್ನು ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಗೆ ಸೇರ್ಪಡೆಗೊಳಿಸಲು ನಿರ್ಣಯ ಕೈಗೊಂಡು ಸರ್ಕಾರಕ್ಕೆ ಮನವಿ ಸಲ್ಲಿಸಲು ತೀರ್ವನಿಸಲಾಯಿತು.

    ಮಹಾ ಅಧಿವೇಶನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ವಿವಿಧ ಮಠಾಧೀಶರು ಪಾಲ್ಗೊಳ್ಳಲಿದ್ದಾರೆ. ಮಹಿಳಾ, ಯುವ, ಕೃಷಿ ಅಧಿವೇಶನಗಳು, ಮಹಾಸಭಾ ಅಧ್ಯಕ್ಷರ ಮೆರವಣಿಗೆ ನಡೆಯಲಿದೆ. ಒಂದು ಲಕ್ಷಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಅಥಣಿ ವೀರಣ್ಣ ಮಾಹಿತಿ ನೀಡಿದರು.

    ರಾಜ್ಯದಲ್ಲಿ ವೀರಶೈವರೇ ಹೆಚ್ಚಾಗಿ ಮುಖ್ಯಮಂತ್ರಿಗಳಾಗಿದ್ದು, ಏನಾದರೂ ಸವಲತ್ತು ಕೇಳಿದರೆ ತಮ್ಮದೇ ಸಮುದಾಯಕ್ಕೆ ಹೆಚ್ಚಿನ ಸೌಲಭ್ಯ ಕಲ್ಪಿಸಿಕೊಟ್ಟಂತಾಗುತ್ತದೆ ಎಂದು ಯಾವ ಸಿಎಂಗಳೂ ಮೀಸಲಾತಿ ನೀಡಲಿಲ್ಲ. ಸಿಎಂ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವೀರಶೈವ ಲಿಂಗಾಯತರನ್ನು ಒಬಿಸಿ ಪಟ್ಟಿಗೆ ಸೇರಿಸಲು ಒಲವು ತೋರಿದ್ದಾರೆ. ಮಹಾ ಅಧಿವೇಶನನದಲ್ಲಿ ಈ ವಿಷಯವನ್ನು ಸರ್ಕಾರದ ಗಮನಕ್ಕೆ ತರಬೇಕು. ಕೇಂದ್ರಕ್ಕೆ ಶಿಫಾರಸು ಮಾಡುವಂತೆ ಒತ್ತಾಯಿಸಬೇಕು ಎಂದು ಹೇಳಿದರು. ಮಹಾಸಭಾದ ಮತ್ತೊಬ್ಬ ರಾಷ್ಟ್ರೀಯ ಉಪಾಧ್ಯಕ್ಷ ಅಣಬೇರು ರಾಜಣ್ಣ ಮಾತನಾಡಿ, ಮಹಾ ಅಧಿವೇಶನಕ್ಕಾಗಿ ಸಮಿತಿಗಳನ್ನು ರಚನೆ ಮಾಡಲಿದ್ದು, ಅವುಗಳ ಅಧ್ಯಕ್ಷರು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.

    ಉಪಾಧ್ಯಕ್ಷ ಎಸ್.ಎಸ್. ಗಣೇಶ್ ಮಾತನಾಡಿ, ಉತ್ತರ, ದಕ್ಷಿಣ ಭಾಗದವರಿಗೆ ಬರಲು ಸುಲಭವಾಗುತ್ತದೆ ಎಂಬ ಉದ್ದೇಶದಿಂದ ದಾವಣಗೆರೆಯನ್ನು ಸಮಾವೇಶಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು. ಡಿಮಹಾಸಭಾದ ರಾಷ್ಟ್ರೀಯ ಕಾರ್ಯದರ್ಶಿ ಎಚ್.ಎಂ. ರೇಣುಕ ಪ್ರಸನ್ನ ಜಿಲ್ಲಾ ಘಟಕದ ಅಧ್ಯಕ್ಷ ದೇವರಮನೆ ಶಿವಕುಮಾರ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶುಭಾ ಐನಳ್ಳಿ ಉಪಸ್ಥಿತರಿದ್ದರು.

    ಮುಂಬೈನಲ್ಲಿ ಈ 2 ಪ್ರಥಮಗಳನ್ನು ಸಾಧಿಸಿದ ಮೊದಲ ಕನ್ನಡ ಸಿನಿಮಾ ‘ಕಾಂತಾರ’!

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts