More

    ಎಂಇಎಸ್ ನಿಷೇಧಕ್ಕೆ ವೀರಶೈವ ಮಹಾಸಭಾ ಒತ್ತಾಯ

    ದಾವಣಗೆರೆ: ಬೆಳಗಾವಿಯ ಖಾನಾಪುರದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಎಂಇಎಸ್ ಪುಂಡರು ಮಸಿ ಬಳಿದಿರುವುದನ್ನು ಖಂಡಿಸಿ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

    ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ದೇವರಮನೆ ಶಿವಕುಮಾರ್ ಮಾತನಾಡಿ, ಗಡಿ ಜಿಲ್ಲೆಯಲ್ಲಿ ಕನ್ನಡ ಬಾವುಟ ಸುಟ್ಟಿರುವುದು, ವಿಶ್ವಗುರು ಬಸವೇಶ್ವರರ ಭಾವಚಿತ್ರಕ್ಕೆ ಮಸಿ ಬಳಿದು ಅವಮಾನ ಮಾಡಿರುವುದನ್ನು ವೀರಶೈವ ಮಹಾಸಭಾ ಉಗ್ರವಾಗಿ ಖಂಡಿಸುತ್ತದೆ ಎಂದು ಹೇಳಿದರು.
    ಸರ್ಕಾರ ಕೂಡಲೇ ಕಿಡಿಗೇಡಿಗಳನ್ನು ಬಂಧಿಸಿ ಶಿಕ್ಷೆ ವಿಧಿಸಬೇಕು. ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕು ಮತ್ತು ಇಂತಹ ಘಟನೆ ಮರುಕಳಿಸದಂತೆ ಕ್ರಮ ವಹಿಸಬೇಕೆಂದು ಒತ್ತಾಯಿಸಿ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
    ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಜಿ.ರಮೇಶ್, ರಾಷ್ಟ್ರೀಯ ಯುವ ಘಟಕದ ಉಪಾಧ್ಯಕ್ಷ ಸಂದೀಪ್ ಅಣಬೇರು, ನಿಖಿಲ್ ಕೊಂಡಜ್ಜಿ, ನಗರ ಯುವ ಘಟಕದ ಅಧ್ಯಕ್ಷ ಶಂಭು ಉರೆಕೊಂಡಿ, ರೇಖಾ ಶಿವಕುಮಾರ್, ರಾಘವೇಂದ್ರಗೌಡ, ರತನ್, ಮಯೂರ್, ಕಾರ್ತಿಕ್ ಹಿರೇಮಠ ಇತರರಿದ್ದರು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts