ಯತ್ನಾಳ್ ಹೇಳಿಕೆ ಖಂಡಿಸಿದ ವೀರಶೈವ ಮಹಾಸಭೆ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ

blank

ಬೆಂಗಳೂರು: ಬಸವಣ್ಣ ಮತ್ತು ವೀರಶೈವ ಮಹಾಸಭೆಯ ಬಗ್ಗೆ ಲಘುವಾಗಿ ಹೇಳಿಕೆ ನೀಡಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವೀರಶೈವ ಮಹಾಸಭೆ ಅಸಮಾಧಾನ ವ್ಯಕ್ತಪಡಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರವು ಮಹಾಸಭೆ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ ನಾಲಿಗೆ ಮೇಲೆ ಹಿಡಿತವಿಟ್ಟುಕೊಳ್ಳುವಂತೆ ಎಚ್ಚರಿಕೆ ನೀಡಿದ್ದಾರೆ.

ನಾಲಿಗೆ ಕುಲ ಹೇಳುತ್ತದೆ ಎಂಬ ಮಾತಿದೆ. ನಿಮ್ಮ ಹೇಳಿಕೆಗಳು ಮತ್ತು ನಡವಳಿಕೆಗಳನ್ನು ಗಮನಿಸಿದಾಗ ನೀವು ವೀರಶೈವ ಲಿಂಗಾಯತರೇ ಎಂಬ ಅನುಮಾನ ಮೂಡುತ್ತದೆ. ವೀರಶೈವ ಲಿಂಗಾಯಿತರಿಗೆ ಇರಬೇಕಾದ ಆಚಾರವಾಗಲಿ, ಸಂಸ್ಕಾರವಾಗಲಿ ನಿಮ್ಮಲ್ಲಿ ಇರದೇ ಇರುವುದು ದುರದೃಷ್ಟಕರ. ಅಗ್ಗದ ಪ್ರಚಾರ ಮತ್ತು ತಮ್ಮ ರಾಜಕೀಯ ತೆವಲಿಗಾಗಿ ಇಂತಹ ಕೀಳು ಮಟ್ಟದ ಹೇಳಿಕೆಗಳನ್ನು ನೀಡುವುದು ಸರಿಯಲ್ಲ.

ಈ ಸಮಾಜದಲ್ಲಿ ಜನಿಸಿ, ಈ ಧರ್ಮದ ಬೆಳಕಾಗಿರುವ ಬಸವಣ್ಣನವರ ಬಗ್ಗೆ ಇಂತಹ ಕೀಳುಮಟ್ಟದ ಹೇಳಿಕೆಗಳನ್ನು ನೀಡುವುದನ್ನು ತಕ್ಷಣ ನಿಲ್ಲಿಸಬೇಕು. ಹಾಗೂ ಮಹಾಸಭೆಯ ಗೌರವಾಧ್ಯಕ್ಷರಾದ ಡಾ. ಭೀಮಣ್ಣ ಖಂಡ್ರೆಯವರು,ಸಮಾಜದ ಜನನಾಯಕರಾದ ಯಡಿಯೂರಪ್ಪನವರು ಮತ್ತು ನಾನು ಸಮಾಜಕ್ಕೆ ನೀಡಿರುವ ಕೊಡುಗೆಗಳನ್ನು ಅರಿತುಕೊಳ್ಳದೆ ವಿನಾಃಕಾರಣ ನಮ್ಮಗಳ ಬಗ್ಗೆ ಲಘುವಾಗಿ ಮಾತನಾಡಿರುವುದನ್ನು ಸಹಿಸಲಾಗದು. ನಮ್ಮ ಬಗ್ಗೆ ಹೇಳಿಕೆ ನೀಡುವ ಮೊದಲು ತಾವು ಸಮಾಜಕ್ಕೆ ನೀಡಿರುವ ಕೊಡುಗೆ ಏನೆಂಬುದನ್ನು ತಿಳಿಸಿ.

ತಾವು ಸಮಾಜದವರು ಎಂಬ ಕಾರಣಕ್ಕೆ ತಮ್ಮ ಹುಚ್ಚಾಟಗಳನ್ನು ಸಹಿಸಿಕೊಂಡಿದ್ದೇವೆ. ಮಹಾಸಭೆಗೆ ಇಂತಹ ಹುಚ್ಚಾಟಗಳನ್ನು ನಿಲ್ಲಿಸಲು ಬರುತ್ತದೆ. ಇಲ್ಲವಾದರೆ ಸಮಾಜವೇ ತಮ್ಮನ್ನು ಹೊಳೆಗಲ್ಲ ಹಾಳು ಬಾವಿಗೆ ನೂಕುತ್ತದೆ’ ಎಂದು ಶಾಮನೂರು ಎಚ್ಚರಿಸಿದ್ದಾರೆ.

ಪರಿವರ್ತನೆಗೆ ಅಡಿಪಾಯ ಹಾಕಿದವರು ವಚನಕಾರರು; ವಚನ ಕಾರ್ತಿಕ ಕಾರ್ಯಕ್ರಮ

Share This Article

ಕೇವಲ 10 ನಿಮಿಷದಲ್ಲಿ ಮನೆಯಲ್ಲೇ ಮಾಡಿ ಬ್ರೆಡ್ ಪಿಜ್ಜಾ; ಇಲ್ಲಿದೆ ಸಿಂಪಲ್​ ವಿಧಾನ | Recipe

ಮನೆಯಲ್ಲಿದ್ದಾಗ ಕೆಲವೊಮ್ಮೆ ಬಹಳ ಹಸಿವಾಗುತ್ತಿರುತ್ತದೆ ಆದರೆ ಆ ಸಮಯದಲ್ಲಿ ಏನು ತಿನ್ನಬೇಕು ಎಂಬುದೆ ನಮಗೆ ತಿಳಿಯುವುದಿಲ್ಲ.…

ಊಟದ ಬಳಿಕ ಬೆಲ್ಲದ ಸೇವನೆಯಿಂದಾಗುವ ಪ್ರಯೋಜನ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ | Health Tips

ಭಾರತದಲ್ಲಿ ಬೆಲ್ಲವನ್ನು ಸಾಮಾನ್ಯವಾಗಿ ಊಟದ ನಂತರ ತಿನ್ನಲಾಗುತ್ತದೆ. ನಿಮ್ಮ ಹಸಿವನ್ನು ನೀಗಿಸಲು ಇದನ್ನು ಸಿಹಿಯಾಗಿ ಸೇವಿಸಬಹುದು.…

ಟೊಮೆಟೊ ಸೇವನೆ ಕ್ಯಾನ್ಸರ್​ ಅಪಾಯವನ್ನು ಕಡಿಮೆ ಮಾಡುತ್ತದೆಯೇ; ಈ ಬಗ್ಗೆ ತಜ್ಞರು ಹೇಳೋದೇನು? | Health Tips

ಕ್ಯಾನ್ಸರ್ ಚಿಕಿತ್ಸೆಯು ಇನ್ನೂ ಅತ್ಯಂತ ದುಬಾರಿ ಮತ್ತು ಅಸಾಧ್ಯವಾಗಿದೆ. ಇತ್ತೀಚೆಗೆ ಯುವಕರನ್ನೂ ಕಾಡುತ್ತಿರುವ ರೋಗ ಕ್ಯಾನ್ಸರ್​​.…