ಸಿಎಂ ಆದೇಶಕ್ಕೆ ಭುಗಿಲೆದ್ದ ಅಸಮಾಧಾನ, ಒಕ್ಕಲಿಗರಿಂದಲೂ ಬಂತು ಡಿಮಾಂಡ್​ !

BSY
Published on

ಬೆಂಗಳೂರು: ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸುತ್ತಿದ್ದಂತೆ ಅಸಮಾಧಾನ ಭುಗಿಲೆದ್ದಿದೆ. ಇದರ ಬೆನ್ನಲ್ಲೇ ಒಕ್ಕಲಿಗರ ಅಭಿವೃದ್ಧಿ ನಿಗಮ ರಚನೆಯ ಕೂಗು ಕೇಳಿಬಂದಿದೆ.

ವಿಧಾನಸೌಧದಲ್ಲಿ ಮಾತನಾಡಿರುವ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ನಿರ್ಧಾರಕ್ಕೆ ಸ್ವಾಗತ. ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ನಮ್ಮ ತಕರಾರು ಇಲ್ಲ. ಅದೇ ರೀತಿ ಒಕ್ಕಲಿಗರ ಅಭಿವೃದ್ಧಿ ನಿಗಮವನ್ನೂ ರಚಿಸಲಿ ಎಂದು ಆಗ್ರಹಿಸಿದ್ದಾರೆ.

ವೀರಶೈವ ಲಿಂಗಾಯತ ನಿಗಮ ರಚನೆಯ ಸಿಎಂ ಆದೇಶವನ್ನು ಕೆಲವರು ಸ್ವಾಗತಿಸಿದ್ದರೆ, ಬಹುತೇಕರು ವಿರೋಧಿಸಿದ್ದಾರೆ. ತುಮಕೂರಿನ ಸಿದ್ಧಗಂಗಾ ಶ್ರೀಗಳು, ಗದಗನ ತೋಂಟದಾರ್ಯ ಮಠದ ಡಾ.ಸಿದ್ಧರಾಮ ಸ್ವಾಮೀಜಿ, ಪದ್ಮಶ್ರೀ ಡಾ. ವಿಜಯ ಸಂಕೇಶ್ವರ ಸೇರಿದಂತೆ ಬಹುತೇಕರು ಇದು ಸೂಕ್ತ ನಿರ್ಧಾರವಲ್ಲ ಎಂಬ ಸಲಹೆಯನ್ನು ಸಿಎಂಗೆ ಮಾಧ್ಯಮದ ಮೂಲಕ ನೀಡಿದ್ದಾರೆ. ಜಾತಿಗೊಂದು ನಿಗಮ ಮಾಡಿಕೊಂಡು ಹೋಗುತ್ತಾ ಇದ್ದರೆ ಇದಕ್ಕೆ ಮಿತಿ ಇರೋದಿಲ್ಲ ಎಂದಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net