ವೀರಶೈವ ಲಿಂಗಾಯತ ನಿಗಮಕ್ಕೆ ಸಿಎಂ ಅಸ್ತು: ಈ ಆದೇಶಕ್ಕೆ ಡಾ.ಶಾಮನೂರು ಶಿವಶಂಕರಪ್ಪ ಏನಂದ್ರು?

BSY-Shamanuru shivashankarappa
Published on

ದಾವಣಗೆರೆ: ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.

ಸಿಎಂ ಆದೇಶವನ್ನು ಸ್ವಾಗತಿಸಿರುವ ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ, ನಿಗಮ ಸ್ಥಾಪನೆಗೆ ಮಹಾಸಭಾ ಆಗ್ರಹಿಸಿತ್ತು. ನಿಗಮ ಮಂಡಳಿ ಸ್ಥಾಪನೆ ಸ್ವಾಗತಾರ್ಹ ಎಂದಿದ್ದಾರೆ.

ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯದ ಜನಸಂಖ್ಯೆ ಹೆಚ್ಚಾಗಿದೆ. ಇವರಲ್ಲಿ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದವರಿದ್ದು, ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಲಾಗುತ್ತಿದೆ ಎಂದಿರುವ ಸಿಎಂ ಬಿಎಸ್​ವೈ, ತಕ್ಷಣದಿಂದಲೇ ಜಾರಿಗೆ ಬರುವಂತೆ ನಿಗಮ ಆರಂಭಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದ್ದಾರೆ.

ಜನಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆ ಹೆಚ್ಚಿನ ಅನುದಾನಕ್ಕೆ ಬೇಡಿಕೆ ಇಡಲಾಗುವುದು. ವೀರಶೈವ ಲಿಂಗಾಯತರಿಗೆ ಶೇ.16 ಮೀಸಲಾತಿಗಾಗಿ ಹೋರಾಟ ನಡೆಯುತ್ತಿದೆ ಎಂದು ಡಾ.ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net