ಸಿಎಂ ಸಿದ್ದರಾಮಯ್ಯ ಮಂಡಿಸಿದ 14ನೇ ಬಜೆಟ್​ ಶ್ಲಾಘಿಸಿ ವೀರೇಂದ್ರ ಹೆಗ್ಗಡೆ ಪತ್ರ

Siddaramaiah Veerendra Heggade
Published on

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ 14 ನೇ ಬಜೆಟ್ ನ ಫಲಶೃತಿಯನ್ನು ಶ್ಲಾಘಿಸಿ, ಶಕ್ತಿ ಯೋಜನೆಗೆ ಸಿಕ್ಕಿರುವ ಜನ ಮನ್ನಣೆಗೆ ಮೆಚ್ಚುಗೆ ಸೂಚಿಸಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.

ಅನೇಕ ಯೋಜನೆಗಳ ಮೂಲಕ ಜನರಿಗೆ ಉಪಯುಕ್ತ ಕಾರ್ಯಕ್ರಮ ನೀಡಿದ್ದೀರಿ. ರಾಜ್ಯದಲ್ಲಿ 14ನೇ ಬಜೆಟ್ ಮಂಡಿಸಿದ ನಿಮಗೆ ಅಭಿನಂದನೆಗಳು ಎಂದು ತಮ್ಮ ಪತ್ರದಲ್ಲಿ ಶ್ಲಾಘಿಸಿದ್ದಾರೆ.

veerendra hegde letter to cm

ಧರ್ಮಸ್ಥಳ ಕ್ಷೇತ್ರಕ್ಕೆ ಬರುತ್ತಿರುವ ಭಕ್ತರು, ವಿಶೇಷವಾಗಿ ಮಹಿಳೆಯರು ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. ಅನೇಕ ಮಹಿಳೆಯರು ನಿಮ್ಮ ಹೆಸರಿನಲ್ಲಿ ಶ್ರೀ ಮಂಜುನಾಥ ಸ್ವಾಮಿಗೆ ಸೇವೆ ಮತ್ತು ಕಾಣಿಕೆ ಸಲ್ಲಿಸುತ್ತಿದ್ದಾರೆ.

ಜೈನ ಸಮುದಾಯಕ್ಕೆ ವಿಶೇಷ ಅನುದಾನ ನೀಡಿ ಪ್ರೋತ್ಸಾಹಿಸಿರುವ ವಿಚಾರ ತಿಳಿದು ಇಡೀ ಸಮಾಜಕ್ಕೆ ಸಂತೋಷವಾಗಿದೆ. ಎಲ್ಲರ ಪರವಾಗಿ ಅಭಿನಂದನೆಗಳು. ಅವಕಾಶ ಇದ್ದಾಗ ಕ್ಷೇತ್ರಕ್ಕೆ ಬಂದು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದುಕೊಂಡು ಹೋಗಬೇಕಾಗಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net