More

    ತರಕಾರಿ ವ್ಯಾಪಾರಿಗಳ ಸ್ಥಳಾಂತರ ಸ್ವಾಗತಾರ್ಹ

    ರಾಯಚೂರು: ನಗರದ ಎಂ.ಈರಣ್ಣ ವೃತ್ತದ ಬಳಿ ಅನಧಿಕೃತ ನಡೆಯುತ್ತಿದ್ದ ತರಕಾರಿ ಮಾರುಕಟ್ಟೆಯನ್ನು ಮುಖ್ಯ ಮಾರುಕಟ್ಟೆಗೆ ಸ್ಥಳಾಂತರ ಮಾಡಿರುವ ಜಿಲ್ಲಾಧಿಕಾರಿ ನಿರ್ಧಾರ ಸ್ವಾಗತಾರ್ಹ ಎಂದು ಉಸ್ಮಾನಿಯಾ ತರಕಾರಿ ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎನ್.ಮಹಾವೀರ ಹೇಳಿದರು.


    ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದರು. ಎಂ.ಈರಣ್ಣ ವೃತ್ತದಲ್ಲಿ ಕಾನೂನುಬಾಹಿರವಾಗಿ ತರಕಾರಿ ಮಾರಾಟ ಮಾಡಲಾಗುತ್ತಿದ್ದು, ಅದರಿಂದ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ಸಂಘದ ನಿರಂತರ ಹೋರಾಟದ ಫಲವಾಗಿ ವ್ಯಾಪಾರಸ್ಥರನ್ನು ಸ್ಥಳಾಂತರ ಮಾಡಲಾಗಿದೆ ಎಂದರು.

    ಇದನ್ನೂ ಓದಿ: VIDEO| ಬೀದಿ ಬದಿಯಲ್ಲಿ ತರಕಾರಿ ಖರೀದಿಸಿ ವ್ಯಾಪಾರಿಗಳ ಕುಂದು-ಕೊರತೆ ಆಲಿಸಿದ ವಿತ್ತ ಸಚಿವೆ! ವಿಡಿಯೋ ವೈರಲ್​

    ಕೋವಿಡ್ ಸಂದರ್ಭದಲ್ಲಿ ನಗರದ ವಿವಿಧೆಡೆ ತರಕಾರಿ ಮಾರಾಟಕ್ಕೆ ಅನುಮತಿ ನೀಡಲಾಗಿತ್ತು. ಆಗ ಎಂ.ಈರಣ್ಣ ವೃತ್ತದಲ್ಲೂ ರಸ್ತೆ ಬದಿ ತರಕಾರಿ ಮಾರಾಟ ಮಾಡಲಾಗುತ್ತಿತ್ತು. ಆದರೆ, ಕೋವಿಡ್ ನಂತರವೂ ರಸ್ತೆ ಬದಿ ತರಕಾರಿ ಮಾರಾಟ ಮುಂದುವರಿಸಲಾಗಿತ್ತು. ಈ ವ್ಯಾಪಾರಸ್ಥರಿಗೆ ಉಸ್ಮಾನಿಯಾ ತರಕಾರಿ ಮಾರುಕಟ್ಟೆ ಹಿಂಭಾಗದಲ್ಲಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಎಂ.ಈರಣ್ಣ ವೃತ್ತದಲ್ಲಿ ತರಕಾರಿ ಮಾರಾಟಕ್ಕೆ ಕುಮ್ಮಕ್ಕು ನೀಡಿದ್ದ ಬಿಜೆಪಿ ಮುಖಂಡ ರವೀಂದ್ರ ಜಲ್ದಾರ್ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಎನ್.ಮಹಾವೀರ ತಿಳಿಸಿದರು. ಪದಾಧಿಕಾರಿಗಳಾದ ಪ್ರಭು ನಾಯಕ, ಬಸವರಾಜ, ರಿಜ್ವಾನ್, ಉದಯಕುಮಾರ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts