More

    ಅಗತ್ಯ ವಸ್ತುಗಳನ್ನು ತರಲು ವಾಹನ ಬಳಸಬಹುದು, ಅನಗತ್ಯ ಓಡಾಟಕ್ಕೆ ಅವಕಾಶ ಇಲ್ಲ; ಡಿಜಿಪಿ ಸ್ಪಷ್ಟನೆ

    ಬೆಂಗಳೂರು: ಅಗತ್ಯ ವಸ್ತುಗಳನ್ನು ತರಲು ವಾಹನ ಬಳಸಬಹುದು ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಲಾಕ್ಡೌನ್ ಬಗ್ಗೆ ಇದ್ದ ಗೊಂದಲದ ಕುರಿತು ಸ್ಪಷ್ಟನೆ ನೀಡಿದ್ದಾರೆ.

    ಲಾಕ್‌ಡೌನ್ ಮಾರ್ಗಸೂಚಿಯಲ್ಲಿ ಕೆಲವು ಬದಲಾವಣೆ ಮಾಡಲಾಗಿದ್ದು, ದಿನಸಿ, ತರಕಾರಿ ಸೇರಿದಂತೆ ಅಗತ್ಯವಸ್ತು ಖರೀದಿಸಲು ವಾಹನ ಬಳಸಬಹುದು ಎಂದು ಡಿಜಿಪಿ ಕಚೇರಿ ಸೋಮವಾರ ಸಂಜೆ ಈ ಕುರಿತು ಟ್ವೀಟ್ ಮಾಡಿದೆ.

    ತರಕಾರಿ, ದಿನಸಿ, ಅಗತ್ಯ ವಸ್ತುಗಳನ್ನು ತರಲು ವಾಹನ ಬಳಕೆ ಮಾಡಲು ಅನುಮತಿ ನೀಡಲಾಗಿದೆ, ನಿಮ್ಮ ಊರಿನ ಸಮೀಪ ಸುತ್ತಮುತ್ತಲೂ ತರಕಾರಿ, ದಿನಸಿ ತರಲು ವಾಹನ ಬಳಸಬಹುದು ಎಂದು ಟ್ವೀಟ್‌ನಲ್ಲಿ ಸ್ಪಷ್ಟಪಡಿಸಲಾಗಿದೆ. ಅಗತ್ಯವಸ್ತು ಖರೀದಿಸಲು ವಾಹನ ಬಳಸಬಹುದು, ಅನಗತ್ಯ ತಿರುಗಾಟಕ್ಕೆ ಅಲ್ಲ ಎಂದು ಡಿಜಿಪಿ ಟ್ವೀಟ್ ಮಾಡಿದೆ.

    ರಾಜ್ಯ ಸರ್ಕಾರ 14 ದಿನ ಲಾಕ್ ಡೌನ್ ವಿಧಿಸಿ ಹೊರಡಿಸಿದ ಮಾರ್ಗಸೂಚಿಯಲ್ಲಿ ಹತ್ತಿರದಲ್ಲಿ ತರಕಾರಿ, ದಿನಸಿ ತರಲು ನಡೆದುಕೊಂಡೇ ಹೋಗಬೇಕು ಎಂದು ಷರತ್ತು ಹಾಕಲಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts