More

    ವಸತಿ ಸೌಲಭ್ಯದ ಜತೆಗೆ ಸೇವೆ ಕಾಯಂ ಮಾಡಿ ; ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರ ಮುಂದೆ ಸಮಸ್ಯೆ ಬಿಚ್ಚಿಟ್ಟ ಕಾರ್ಮಿಕರು

    ತುಮಕೂರು : ಸೂಕ್ತ ವಸತಿ ಸೌಲಭ್ಯ ಕಲ್ಪಿಸುವ ಜತೆಗೆ ಸೇವೆ ಕಾಯಂ ಮಾಡಿ, ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಅಹವಾಲುಗಳನ್ನು ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ಸಫಾಯಿ ಕರ್ಮಚಾರಿಗಳು ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ.ವೆಂಕಟೇಶನ್ ಮುಂದಿಟ್ಟರು.

    ನಗರದಲ್ಲಿ ಬುಧವಾರ ಆಯೋಜಿಸಿದ್ದ ಸಾಯಿ ಕರ್ಮಚಾರಿಗಳ ಕಾರ್ಯಕ್ರಮಗಳ ಅನುಷ್ಠಾನ ಮತ್ತು ಕುಂದುಕೊರತೆಗಳ ಸಭೆಯಲ್ಲಿ ಸಾಯಿ ಕರ್ಮಚಾರಿಗಳಿಂದ ಮನವಿ ಸ್ವೀಕರಿಸಿ ಮಾತನಾಡಿದ ಎಂ.ವೆಂಕಟೇಶನ್,

    ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗ ಸಫಾಯಿ ಕರ್ಮಚಾರಿಗಳ ಕ್ಷೇವಾಭಿವೃದ್ಧಿಗೆ ಸದಾ ಜತೆಯಲ್ಲಿರುತ್ತದೆ, ನಿಮ್ಮೆಲ್ಲಾ ಸಮಸ್ಯೆಗಳನ್ನು ಪರಿಶೀಲಿಸಿ ಸರ್ಕಾರಕ್ಕೆ ಶಿಫಾರಸು ವಾಡಿ ಉನ್ನತ ಮಟ್ಟದಲ್ಲಿ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನ ವಾಡಲಾಗುವುದು ಎಂದರು. ರಾಷ್ಟ್ರೀಯ ಕರ್ಮಚಾರಿಗಳ ಆಯೋಗಕ್ಕೆ ತಮ್ಮ ಸಮಸ್ಯೆ ಮತ್ತು ಬೇಡಿಕೆಗಳ ಕುರಿತು ಪತ್ರ ಬರೆದು ಕಳಿಸಿ ಎಂದ ಅವರು, ಸಫಾಯಿ ಕರ್ಮಚಾರಿಗಳಿಗೆ ಉತ್ತಮ ಸೌಲಭ್ಯ ಕಲ್ಪಿಸಲು ಅನೇಕ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಲಾಗುವುದು ಎಂದರು.

    ಚಿಕ್ಕನಾಯಕನಹಳ್ಳಿ ಹಾಗೂ ಪಾವಗಡ ತಾಲೂಕಿನ ಸಫಾಯಿ ಕರ್ಮಚಾರಿಗಳಿಗೆ ವಸತಿಗೆ ಯೋಗ್ಯವಲ್ಲದ ಕಾಡು ಹಾಗೂ ಬೆಟ್ಟದ ಬಂಡೆಯ ಮೇಲೆ ನಗರದ ದೂರದ ಪ್ರದೇಶದಲ್ಲಿ ವಸತಿ ಸೌಲಭ್ಯ ಕಲ್ಪಿಸಲಾಗುತ್ತಿದೆ. ಬೆಟ್ಟದ ಮೇಲೆ ಜೀವನ ನಡೆಸುವುದು ಕಷ್ಟ. ಹಾಗಾಗಿ ನಗರದಲ್ಲಿ ಗುರುತಿಸಲಾಗಿರುವ ನಿವೇಶನಗಳ ಪ್ರದೇಶದಲ್ಲಿ ವಸತಿ ಸೌಲಭ್ಯ ಕಲ್ಪಿಸುವಂತೆ ಮನವಿ ಬಂದಿದ್ದು ಪರಿಶೀಲಿಸಲಾಗುವುದು ಎಂದರು.

    ಕೊರಟಗೆರೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಚಾಲಕರು ಹಾಗೂ ಹಲವು ವರ್ಷಗಳಿಂದಲೂ ಹೊರಗುತ್ತಿಗೆಯಲ್ಲಿ ಸೇವೆ ಸಲ್ಲಿಸುತ್ತಿರುವವರು ನಿವೇಶನದ ಜತೆಗೆ ಸಂಬಳ ಹೆಚ್ಚಳ ವಾಡಬೇಕು ಎಂದು ಮನವಿ ವಾಡಿದರು.

    ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಹೊರಗುತ್ತಿಗೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರಿಗೆ ಆಶ್ರಯ ಸಮಿತಿಯಲ್ಲಿ ಮನೆ ದೊರಕಿಸಲು ಅವಕಾಶವಿದ್ದು, ಸ್ಥಳೀಯ ಅಧಿಕಾರಿಗಳು ಹೊರಗುತ್ತಿಗೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಸೌಲಭ್ಯ ದೊರಕಿಸಿಕೊಡಬೇಕು ಎಂದು ಸೂಚಿಸಿದರು.

    ಸಭೆಯಲ್ಲಿ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಹನುಮಂತಪ್ಪ, ಜಿಪಂ ಸಿಇಒ ಡಾ.ಕೆ.ವಿದ್ಯಾಕುವಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುವಾರ್ ಶಹಪುರವಾಡ್, ಉಪವಿಭಾಗಾಧಿಕಾರಿ ಅಜಯ್ ಮತ್ತಿತರರು ಇದ್ದರು.

    ಹಲವೆಡೆ ಪರಿಶೀಲನೆ : ಸಭೆಯ ಬಳಿಕ ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಎಂ.ವೆಂಕಟೇಶನ್ ನಗರದ ಸಂತೇಪೇಟೆಯ ಅರವಿಂದ ನಗರದಲ್ಲಿನ ಪೌರಕಾರ್ಮಿಕರ ನಿವಾಸಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿದರು. ನಂತರ ದಿಬ್ಬೂರಿನಲ್ಲಿ ಪೌರಕಾರ್ಮಿಕರಿಗಾಗಿ ಮಹಾನಗರಪಾಲಿಕೆಯಿಂದ ನಿರ್ಮಿಸಲಾಗುತ್ತಿರುವ 52 ವಸತಿ ನಿವೇಶನಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts