

ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಮತ್ತು ಗಂಗೊಳ್ಳಿ ಸರಸ್ವತಿ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಗಂಗೊಳ್ಳಿಯಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ, ಬಾಲಕಿಯರ ಟೆನ್ನಿ ಕಾಯ್ಟ ಪಂದ್ಯಾಟದಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು, ಬಾಲಕಿಯರ ತಂಡ ದ್ವಿತೀಯ ಸ್ಥಾನಿಯಾಗಿದೆ.
ಪ್ರಾಂಶುಪಾಲ ಸಂದೀಪ್ ಗಾಣಿಗ, ಉಪಪ್ರಾಂಶುಪಾಲ ಸುಜಯ್ ಕೋಟೆಗಾರ್, ದೈಹಿಕ ಶಿಕ್ಷಣ ಉಪನ್ಯಾಸಕ ರಾಘವೇಂದ್ರ ಗಾಣಿಗ ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.