More

    25ರಂದು ಚಿಕ್ಕಮಗಳೂರಿಗೆ ಸಿಎಂ ಯಡಿಯೂರಪ್ಪ

    ಚಿಕ್ಕಮಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಡಿ.25ರಂದು ನಗರಕ್ಕೆ ಆಗಮಿಸಲಿದ್ದು, ವೈದ್ಯಕೀಯ ಕಾಲೇಜು ಕಟ್ಟಡ ಸೇರಿ ಒಟ್ಟು 1060 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ವರಸಿದ್ದಿ ವೇಣುಗೋಪಾಲ್ ತಿಳಿಸಿದರು.

    ಅಂದು ಮಧ್ಯಾಹ್ನ 2.30ಕ್ಕೆ ನಗರಕ್ಕೆ ಆಗಮಿಸುವ ಮುಖ್ಯಮಂತ್ರಿಗಳು ಜಿಲ್ಲಾ ಆಟದ ಮೈದಾನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಜಿಲ್ಲೆಯ ಬಹು ನಿರೀಕ್ಷಿತ 418.75 ಕೋಟಿ ರೂ. ವೆಚ್ಚದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಕಟ್ಟಡಕ್ಕೆ ಶಂಕುಸ್ಥಾಪನೆ, ಹಿರೇಕೊಳಲೆ ರಸ್ತೆಯಲ್ಲಿ ನಿರ್ವಿುಸಿರುವ ಅಟಲ್​ಬಿಹಾರಿ ವಾಜಪೇಯಿ ಬಡಾವಣೆಯ ಉದ್ಘಾಟನೆ, 102.52 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಂಡಿರುವ ಅಮೃತ್ ಕುಡಿಯುವ ನೀರು ಯೋಜನೆ ಹಾಗೂ 3.75 ಕೋಟಿ ರೂ.ವೆಚ್ಚದ ಲೋಕೋಪಯೋಗಿ ಇಲಾಖೆ ವಿಭಾಗದ ಕಚೇರಿ ಕಟ್ಟಡವನ್ನು ಉದಾಟಿಸಲಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

    20 ಕೋಟಿ ವೆಚ್ಚದ ಜಿಲ್ಲಾಸ್ಪತ್ರೆಯ ಉನ್ನತೀಕರಣ ಕಾಮಗಾರಿ, ಎಐಟಿ ವೃತ್ತದಿಂದ ಹಿರೇಮಗಳೂರು ವೃತ್ತದವರೆಗಿನ 29.40 ಕೋಟಿ ವೆಚ್ಚದ ವಿಸõತ ರಸ್ತೆ ಕಾಮಗಾರಿ, 174 ಕೋಟಿ ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಪಿಎಂಎವೈ ಅಡಿ 115 ಕೋಟಿ ರೂ.ವೆಚ್ಚದ ಜಿ ಪ್ಲಸ್ ಟು ಮಾದರಿಯ ಆಶ್ರಯ ವಸತಿ ಸಮುಚ್ಚಯ ನಿರ್ಮಾಣ ಕಾಮಗಾರಿ, 3.60 ಕೋಟಿ ವೆಚ್ಚದ ಔಷಧ ಉಗ್ರಾಣ ಕಟ್ಟಡ, 3.50 ಕೋಟಿ ರೂ. ವೆಚ್ಚದ ಬಾಳೆಗದ್ದೆ ತೂಗು ಸೇತುವೆ ಕಾಮಗಾರಿಗಳಿಗೆ ಅಡಿಗಲ್ಲು ಹಾಕಲಿದ್ದಾರೆ ಎಂದು ಹೇಳಿದರು.

    ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷವರ್ಧನ, ಡಿಸಿಎಂ ಗೋವಿಂದ ಕಾರಜೋಳ, ಗೃಹಸಚಿವ ಬಸವರಾಜ ಬೊಮ್ಮಾಯಿ, ವಸತಿ ಸಚಿವ ವಿ.ಸೋಮಣ್ಣ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್, ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜು, ಪೌರಾಡಳಿತ ಸಚಿವ ನಾರಾಯಣ ಗೌಡ, ಸಂಸದೆ ಶೋಭಾ ಕರಂದ್ಲಾಜೆ ಭಾಗವಹಿಸುವರು. ಶಾಸಕ ಸಿ.ಟಿ.ರವಿ ಅಧ್ಯಕ್ಷತೆ ವಹಿಸುವರು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts