24.9 C
Bangalore
Wednesday, December 11, 2019

ಶರದ್​ ಪವಾರ್​ ಪುತ್ರಿಗೆ ಕ್ಯಾಬಿನೆಟ್​ನಲ್ಲಿ ಸ್ಥಾನ ನೀಡುವುದಾಗಿ ಹೇಳಿದ್ದರಾ ಪ್ರಧಾನಿ ಮೋದಿ? ಸುಪ್ರಿಯಾ ಸುಳೆ ಸ್ಪಷ್ಟ ಪ್ರತಿಕ್ರಿಯೆ ಹೀಗಿದೆ…

Latest News

ಬನುಮಯ್ಯ ಸಂಸ್ಥೆ ಶತಮಾನೋತ್ಸವಕ್ಕೆ ಚಾಲನೆ

ಮೈಸೂರು: ಧರ್ಮಪ್ರಕಾಶ ಡಿ.ಬನುಮಯ್ಯ ವಿದ್ಯಾಸಂಸ್ಥೆ ಶತಮಾನೋತ್ಸವ ಸಮಾರಂಭವನ್ನು ಶಾಸಕ ಎಸ್.ಎ.ರಾಮದಾಸ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು....

ಮೊದಲ ಪತ್ನಿ, ಮೂವರು ಮಕ್ಕಳನ್ನು ಮನೆಯಿಂದ ಹೊರದಬ್ಬಿದ ಪತಿ: ಚಳಿಯಲ್ಲೇ ಇಡೀ ರಾತ್ರಿ ಕಳೆದ ಪತ್ನಿ, ಮಕ್ಕಳು

ಬೆಳಗಾವಿ: ಮೊದಲ ಪತ್ನಿ ಹಾಗೂ ಮೂವರು ಮಕ್ಕಳನ್ನು ವ್ಯಕ್ತಿಯೊಬ್ಬ ಮನೆಯಿಂದ ಹೊರಹಾಕಿರುವ ಅಮಾನವೀಯ ಘಟನೆ ಬೆಳಗಾವಿಯ ವೀರಭದ್ರ ನಗರದಲ್ಲಿ ನಡೆದಿದೆ. ರಾಜಾಸಾಬ್ ಕೊಲ್ಲಾಪುರೆ, ಮೊದಲ...

ಚಿತ್ರದುರ್ಗ: ಆರ್ ಒಗಳ ನಿರ್ವಣೆ ಇನ್ನು ಮುಂದೆ ಇಲಾಖೆ ಹೊಣೆ

ಚಿತ್ರದುರ್ಗ: ಶುದ್ಧ ಕುಡಿವ ನೀರು ಘಟಕಗಳ ಹೊಣೆ ಇನ್ನು ಮುಂದೆ ಕುಡಿವ ನೀರು ‌ಮತ್ತು ನೈರ್ಮಲ್ಯ ಇಲಾಖೆಯದ್ದಾಗಿದೆ ಎಂದು ಜಿಪಂ ಸಿಇಒ ಸಿ.ಸತ್ಯಭಾಮ ಹೇಳಿದರು. ಜಿಪಂ ಮಾಸಿಕ...

ಪೌರತ್ವ ತಿದ್ದುಪಡಿ ಮಸೂದೆ ದೇಶದ ಈಶಾನ್ಯ ಭಾಗದ ಜನರ ಮೇಲಿನ ಕ್ರಿಮಿನಲ್​ ದಾಳಿ: ರಾಹುಲ್​ ಗಾಂಧಿ ಟೀಕೆ

ನವದೆಹಲಿ: ದೇಶಾದ್ಯಂತ ತೀವ್ರ ಚರ್ಚೆ ಹುಟ್ಟು ಹಾಕಿರುವ ಪೌರತ್ವ ತಿದ್ದುಪಡಿ ಮಸೂದೆಯನ್ನು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಟ್ವೀಟ್​ ಮೂಲಕ ಟೀಕಿಸಿದ್ದು, ದೇಶದ...

ಹುಣಸೂರು ಚುನಾವಣೆಯಲ್ಲಿ ತಟಸ್ಥನಾಗಿರುತ್ತೇನೆ ಎಂದು ಮೊದಲೇ ಘೋಷಿಸಿದ್ದೆ : ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ಹುಣಸೂರು ವಿಧಾನಸಭಾ ಕ್ಷೇತ್ರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಚ್​.ವಿಶ್ವನಾಥ್​ ಅವರನ್ನು ಬೆಂಬಲಿಸುತ್ತೇನೆ ಎಂದು ನಾನು ಎಲ್ಲಿಯೂ ಹೇಳಿರಲಿಲ್ಲ ಎಂದು ಶಾಸಕ...

ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆ ಮೈತ್ರಿ ಕಳಚಿಕೊಂಡ ಬಳಿಕ ಬಿಜೆಪಿ, ಎನ್​ಸಿಪಿ ಜತೆ ಸೇರಿ ಸರ್ಕಾರ ರಚನೆ ಮಾಡುವ ಇಂಗಿತ ವ್ಯಕ್ತಪಡಿಸಿತ್ತು. ನನ್ನ ಮಗಳು ಸುಪ್ರಿಯಾ ಸುಳೆಗೆ ಕ್ಯಾಬಿನೆಟ್​ನಲ್ಲಿ ಸ್ಥಾನ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದರು ಎಂಬುದನ್ನು ಎನ್​ಸಿಪಿ ಮುಖ್ಯಸ್ಥ ಶರದ್​ ಪವಾರ್ ಈಗಾಗಲೇ ಬಹಿರಂಗಪಡಿಸಿದ್ದಾರೆ.

ಅಲ್ಲದೆ, ನಾವೆಲ್ಲ ಒಟ್ಟಾಗಿ ಕೆಲಸ ಮಾಡೋಣ ಎಂದು ಪ್ರಧಾನಿ ಮೋದಿಯವರು ಹೇಳಿದಾಗ ನಾನದನ್ನು ನಿರಾಕರಿಸಿದೆ ಎಂದೂ ತಿಳಿಸಿದ್ದಾರೆ.

ಆದರೆ ಇದು ಎಷ್ಟರಮಟ್ಟಿಗೆ ಸತ್ಯ ಎಂಬುದು ಚರ್ಚೆಯಾಗುತ್ತಿದ್ದ ಬೆನ್ನಲ್ಲೇ, ಶರದ್​ ಪವಾರ್​ ಮಗಳು ಸುಪ್ರಿಯಾ ಸುಳೆ ಸ್ಪಷ್ಟ ಪ್ರತಿಕ್ರಿಯೆ ನೀಡಿದ್ದಾರೆ.

ರಾಷ್ಟ್ರೀಯ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಸುಪ್ರಿಯಾ ಸುಳೆ, ನನ್ನ ಮೇಲೆ ಅಷ್ಟು ದೊಡ್ಡ ನಂಬಿಕೆಯಿಟ್ಟು ಕ್ಯಾಬಿನೆಟ್​ ಸ್ಥಾನ ನೀಡುವುದಾಗಿ ಹೇಳಿದ್ದು ಪ್ರಧಾನಿ ನರೇಂದ್ರ ಮೋದಿಯವರ ಉದಾತ್ತತೆ. ಇದಕ್ಕಾಗಿ ನಾನವರಿಗೆ ಸದಾ ಕೃತಜ್ಞಳಾಗಿರುತ್ತೇನೆ. ಮೋದಿಯವರು ಈ ಸ್ಥಾನವನ್ನು ನೀಡಲು ಮುಂದಾದರೂ ನನ್ನ ತಂದೆ ಶರದ್​ ಪವಾರ್ ಅವರು ವಿನಯದಿಂದಲೇ ಅದನ್ನು ತಿರಸ್ಕರಿಸಿದರು ಎಂದು ಹೇಳಿದರು.

ಈ ರಾಜ್ಯಕ್ಕೆ ನಾನೇನು ಮಾಡಲು ಸಾಧ್ಯವೋ ಅದನ್ನು ಮಾಡುತ್ತೇನೆ. ನಾನೋರ್ವ ಸಂಸದಳಾಗಿ ನನ್ನ ಕೆಲಸದಲ್ಲಿ ಸಂತೃಪ್ತಿ ಹೊಂದಿದ್ದೇನೆ. ಇದನ್ನೇ ಮುಂದುವರಿಸುತ್ತೇನೆ ಎಂದು ಸುಪ್ರಿಯಾ ತಿಳಿಸಿದರು.

ಉದ್ಧವ್​ ಠಾಕ್ರೆಯವರು ತಮ್ಮ ಪಕ್ಷ ಶಿವಸೇನೆಯನ್ನು ಸಮರ್ಥವಾಗಿ ಮುನ್ನಡೆಸಿದ್ದಾರೆ. ಈಗ ಹೊತ್ತಿರುವ ಮಹಾರಾಷ್ಟ್ರದ ನಾಯಕತ್ವವನ್ನೂ ಅಷ್ಟೇ ಸಮರ್ಥವಾಗಿ ನಿಭಾಯಿಸುತ್ತಾರೆ ಎಂದು ಸುಪ್ರಿಯಾ ಸುಳೆ ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿಯೊಂದಿಗೆ ತರಾತುರಿಯಲ್ಲಿ ಕೈಜೋಡಿಸಿ, ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ಎನ್​ಸಿಪಿಯ ಅಜಿತ್​ ಪವಾರ್ ಬಗ್ಗೆ ಮಾತನಾಡಿದ ಅವರು, ಅಜಿತ್​ ಪವಾರ್​ ನಮ್ಮ ಪಕ್ಷದ ಭರವಸೆಯ ನಾಯಕ. ಖಂಡಿತ ಈ ಸರ್ಕಾರದಲ್ಲಿ ಅವರಿಗೊಂದು ಸ್ಥಾನ ಸಿಕ್ಕೇ ಸಿಗುತ್ತದೆ ಎಂದು ಹೇಳಿದರು.

ಎನ್​ಸಿಪಿ-ಬಿಜೆಪಿ ಒಟ್ಟಾಗಿ ಕೆಲಸ ಮಾಡೋಣವೆಂದು ಪ್ರಧಾನಿ ನರೇಂದ್ರ ಮೋದಿ ನನ್ನ ಬಳಿ ಹೇಳಿದ್ದರು. ಆದರೆ ನಾನದನ್ನು ನಿರಾಕರಿಸಿದ್ದೆ. ನಮ್ಮಿಬ್ಬರ ಮಧ್ಯೆ ಉತ್ತಮ ಬಾಂಧವ್ಯ ಇದೆ. ಅದು ಹಾಗೇ ಮುಂದುವರಿಯಲಿ. ಆದರೆ ಬಿಜೆಪಿ-ಎನ್​ಸಿಪಿ ಮೈತ್ರಿ ಸಾಧ್ಯವಿಲ್ಲ ಎಂದು ನರೇಂದ್ರ ಮೋದಿಯವರಿಗೆ ಹೇಳಿದ್ದೆ ಎಂದು ಇಂದು ಬೆಳಗ್ಗೆ ಶರದ್​ ಪವಾರ್​ ಸಂದರ್ಶನವೊಂದರಲ್ಲಿ ತಿಳಿಸಿದ್ದರು.

ಹಾಗೇ ತಮಗೆ ನರೇಂದ್ರ ಮೋದಿಯವರು ರಾಷ್ಟ್ರಪತಿ ಹುದ್ದೆಯ ಆಮಿಷ ಒಡ್ಡಿದ್ದರು ಎಂದು ಹಬ್ಬಿದ್ದ ಸುದ್ದಿ ಸುಳ್ಳು. ನನ್ನ ಮಗಳಿಗೆ ಕ್ಯಾಬಿನೆಟ್​ ದರ್ಜೆಯ ಸಚಿವ ಸ್ಥಾನ ನೀಡುವುದಾಗಿ ತಿಳಿಸಿದ್ದರು ಎಂದು ಹೇಳಿದ್ದರು. (ಏಜೆನ್ಸೀಸ್​)

Stay connected

278,741FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...